Home
ಸುದ್ದಿಜಾಲ

ಒಪ್ಪೋ K11 5G ಸ್ಮಾರ್ಟ್‌ಫೋನ್‌ ಲಾಂಚ್‌; 100W ವೇಗದ ಚಾರ್ಜಿಂಗ್‌ ವಿಶೇಷ!

ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ಒಪ್ಪೋ ಕಂಪೆನಿ ಕೂಡ ಒಂದಾಗಿದೆ. ವಿವಿಧ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿರುವ ಒಪ್ಪೋ ಇದೀಗ ಹೊಸ ಒಪ್ಪೋ K11 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಮೂಲಕ ಗಮನಸೆಳೆದಿದೆ.

ಹೌದು, ಒಪ್ಪೋ K11 5G ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 100W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ K11 5G ಸ್ಮಾರ್ಟ್‌ಫೋನ್‌ ಲಾಂಚ್‌; 100W ವೇಗದ ಚಾರ್ಜಿಂಗ್‌ ವಿಶೇಷ!

ಒಪ್ಪೋ K11 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ K11 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, HDR10+ ಗರಿಷ್ಠ 394ppi ಟಚ್ ಸ್ಯಾಪ್ಲಿಂಗ್‌ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ 1,100 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇನ್ನು 2,160Hz PWM ಹೈ-ಫ್ರೀಕ್ವೆನ್ಸಿ ಡಿಮ್ಮಿಂಗ್ ರೇಟಿಂಗ್‌ ಹೊಂದಿದೆ.

ಒಪ್ಪೋ K11 5G ಪ್ರೊಸೆಸರ್‌ ಯಾವುದು?
ಒಪ್ಪೋ K11 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 6nm ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13-ಆಧಾರಿತ ColorOS 13.1 ಬೆಂಬಲಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ 8GB ವರ್ಚುವಲ್ RAM ಬೆಂಬಲದೊಂದಿಗೆ ಆನ್‌ಬೋರ್ಡ್ ಮೆಮೊರಿಯನ್ನು 20GB ವರೆಗೆ ವಿಸ್ತರಿಸಬಹುದಾಗಿದೆ.

ಒಪ್ಪೋ K11 5G ಕ್ಯಾಮೆರಾ ಸೆಟ್‌ಅಪ್‌
ಒಪ್ಪೋ K11 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಒಪ್ಪೋ K11 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಒಪ್ಪೋ K11 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ಫ್ಲ್ಯಾಷ್ ಚಾರ್ಜಿಂಗ್‌ಗೆ ಬೆಂಬಲಿಸುತ್ತದೆ. ಇದರಿಂದಾಗಿ ಕೇವಲ 10 ನಿಮಿಷಗಳಲ್ಲಿ 0% ಇಂದ 50% ವರೆಗೆ ಚಾರ್ಜಿಂಗ್‌ ಮಾಡಲಿದೆ. ಇನ್ನು 26 ನಿಮಿಷಗಳಲ್ಲಿ 100% ವರೆಗೆ ಬ್ಯಾಟರಿಯನ್ನು ಚಾರ್ಜ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, ಬ್ಲೂಟೂತ್ 5.2, GPS/A-GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಒಪ್ಪೋ K11 5G ಬೆಲೆ ಮತ್ತು ಲಭ್ಯತೆ
ಒಪ್ಪೋ K11 5G ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಇದರ ಬೇಸ್ ಮಾಡೆಲ್‌ 8GB RAM + 256GB ಸ್ಟೋರೇಜ್ ಆಯ್ಕೆಗೆ CNY 1,899 (ಅಂದಾಜು 21,000ರೂ) ಬೆಲೆ ಹೊಂದಿದೆ. ಇನ್ನು 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ CNY 2,099 (ಸುಮಾರು 24,000ರೂ) ಪಡೆದುಕೊಂಡಿದೆ. ಇದನ್ನು ಗ್ಲೇಸಿಯರ್ ಬ್ಲೂ ಮತ್ತು ಮೂನ್ ಶ್ಯಾಡೋ ಗ್ರೇ ಕಲರ್‌ಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Oppo K11 5G With 100W Fast Charging Launched: Specs Details in kananda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+