ಒಪ್ಪೋ ಆಟ ಶುರು! ನಾಳೆ OPPO K12s ಎಂಟ್ರಿ; 7000mAh ಬ್ಯಾಟರಿ.. 50MP ಕ್ಯಾಮೆರಾ.. ಬೆಲೆ ಎಷ್ಟಿರಲಿದೆ?
ಒಪ್ಪೋ ತನ್ನ ಭಾರತೀಯ ಗ್ರಾಹಕರಿಗೆ ಡಬಲ್ ಸಿಹಿಸುದ್ದಿ ತಂದಿದೆ. ಮೊದಲನೆಯದು, ಇಂದು ಒಪ್ಪೋ K13 5G (OPPO K13 5G) ಮೊಬೈಲ್ ಭಾರತದಲ್ಲಿ ಬಿಡುಗಡೆಯಾಗಿದೆ. ಎರಡನೆಯದು, ಮತ್ತೊಂದು ಬಹುನಿರೀಕ್ಷಿತ ಒಪ್ಪೋ K12s (OPPO K12s) ಸ್ಮಾರ್ಟ್‌ಫೋನ್ ನಾಳೆ (ಏಪ್ರಿಲ್ 21) ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಹೌದು, ಕಂಪನಿಯು ತನ್ನ 'K' ಸರಣಿಯಲ್ಲಿ ಈ ಫೋನನ್ನು ಪರಿಚಯಿಸಲಿದೆ. ಈ ಮೊಬೈಲ್ ಬೃಹತ್ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಬನ್ನಿ, ಈ ಒಪ್ಪೋ K12s ಮೊಬೈಲ್‌ನ ವಿಶೇಷತೆಗಳು ಮತ್ತು ಬಿಡುಗಡೆ ವಿವರಗಳನ್ನು ತಿಳಿಯೋಣ.
ಒಪ್ಪೋ K12s ಮೊಬೈಲ್ ಸ್ಟೈಲಿಶ್ ಲುಕ್ ಮತ್ತು ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಬರಲಿದೆ. ಈ ಫೋನಿನ ವಿಶೇಷತೆಗಳೆಂದರೆ, ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಜೊತೆಗೆ ಬಿಡುಗಡೆಯಾಗಲಿದೆ. ಇದು 6.67 ಇಂಚಿನ ಅಮೋಲೆಡ್ ಡಿಸ್ಪ್ಲೇಯೊಂದಿಗೆ ಬರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿರುತ್ತದೆ. ಜೊತೆಗೆ 12GB RAM, 128GB ಮತ್ತು 256GB ಸ್ಟೋರೇಜ್ ಸೇರಿದಂತೆ ಮುಂತಾದ ಉತ್ತಮ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜಾಗಿದೆ.

ಒಪ್ಪೋ K12s ವೈಶಿಷ್ಟ್ಯಗಳು (ಸಂಭಾವ್ಯ)
ಡಿಸ್ಪ್ಲೇ ವಿವರ
ಒಪ್ಪೋ K12s ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2,400 × 1,080 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಸ್ಕ್ರೀನ್ ಸುಗಮ ಸ್ಕ್ರೋಲಿಂಗ್‌ನ ಉತ್ತಮ ಅನುಭವವನ್ನು ನೀಡುತ್ತದೆ. ಈ ಮೊಬೈಲ್ ಗೇಮಿಂಗ್ ಮತ್ತು ವಿಡಿಯೋ ಸ್ಟ್ರೀಮಿಂಗ್ ಇಷ್ಟಪಡುವವರಿಗೆ ಉತ್ತಮ ಆಯ್ಕೆಯಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ K12s ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಒಳಗೊಂಡಿರುವ ಸಾಧ್ಯತೆಯಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಒಪ್ಪೋ ಫೋನ್ ಆಂಡ್ರಾಯ್ಡ್ 15 ಆಧಾರಿತ ColorOS 15 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 810 ಜಿಪಿಯು ಸಹ ಹೊಂದಿದೆ. ಈ ಫೋನ್ 8GB ಮತ್ತು 12GB RAM ಆಯ್ಕೆ ಹೊಂದಿದೆ. ಹಾಗೆಯೇ 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
ಕ್ಯಾಮೆರಾ ಸೆಟಪ್
ಒಪ್ಪೋ K12s ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರುತ್ತದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಲೆನ್ಸ್ ಹೊಂದಿದೆ. ಈ ಫೋನ್ 4K ವಿಡಿಯೋ ರೆಕಾರ್ಡಿಂಗ್ ಬೆಂಬಲದೊಂದಿಗೆ ಬರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ K12s ಮೊಬೈಲ್‌ನ ಪ್ರಮುಖ ವಿಶೇಷತೆಯೆಂದರೆ, ದೊಡ್ಡ ಬ್ಯಾಟರಿ ಬಾಳಿಕೆ. ಈ ಫೋನ್ 7000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗುವುದು ಖಚಿತವಾಗಿದೆ. ಈ ಸ್ಮಾರ್ಟ್‌ಫೋನಿನ ಬ್ಯಾಟರಿ 5 ವರ್ಷಗಳ ಬಾಳಿಕೆ ಬರಲಿದೆ. ಇದು 1,800 ಬಾರಿ ಚಾರ್ಜ್ ಮಾಡಿದರೂ ಬಾಳಿಕೆ ಬರಲಿದೆ ಎಂದು ಕಂಪನಿ ಹೇಳಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, ಈ ಮೊಬೈಲ್ 80W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಒಪ್ಪೋ K12s ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಒಳಗೊಂಡಿದೆ. ಹಾಗೆಯೇ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G ಸಂಪರ್ಕ , ಡ್ಯುಯಲ್ ಸಿಮ್, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








