ಹೊಸ Oppo K12x 5G ಫೋನಿಗೆ ಟಾಂಗ್ ನೀಡುವಂತಹ ಫೋನ್‌ಗಳ ಲಿಸ್ಟ್ ಇಲ್ಲಿದೆ!
ಲೀಡಿಂಗ್ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಒಪ್ಪೋ (Oppo) ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಒಪ್ಪೋ ರೆನೋ 12 5G (Oppo K12x 5G) ಫೋನ್ ಅನ್ನು ಬಿಡುಗಡೆ ಮಾಡಿದ್ದು, ಮಾರುಕಟ್ಟೆಯಲ್ಲಿ ಸಖತ್ ಗಮನ ಸೆಳೆದಿದೆ. ಸಂಸ್ಥೆಯು ಹೊಸ ಒಪ್ಪೋ K12x 5G (Oppo K12x 5G) ಮೀಡ್‌ರೇಂಜ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್ ಪ್ರಿಯರನ್ನು ಸೆಳೆದಿದೆ. ಅದಾಗ್ಯೂ, ನಿಮಗೆ ಒಪ್ಪೋ K12x 5G (Oppo K12x 5G) ಮೊಬೈಲ್‌ಗೆ ಪರ್ಯಾಯ ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ.
ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಮೊಬೈಲ್‌ಗಳಿಗೂ ಸಹ ಅಧಿಕ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಕಂಪನಿಗಳು ಸಹ ಈ ವಿಭಾಗದಲ್ಲಿ ಅತ್ಯುತ್ತಮ ಮೊಬೈಲ್‌ಗಳನ್ನು ಪರಿಚಯಿಸುತ್ತ ಮುಂದೆ ಸಾಗಿದೆ. ಆ ಲಿಸ್ಟ್ ಒಪ್ಪೋದ ಹೊಸ ಒಪ್ಪೋ K12x 5G (Oppo K12x 5G) ಸಹ ಸೇರ್ಪಡೆ ಆಗಿದೆ. ಆದರೆ ಮಾರುಕಟ್ಟೆಯಲ್ಲಿ ಇದಕ್ಕೆ ಪೈಪೋಟಿ ನೀಡುವ ಇತರೆ ಪರ್ಯಾಯ ಮೊಬೈಲ್‌ಗಳ ಆಯ್ಕೆ ಸಹ ಖರೀದಿದಾರರಿಗೆ ಲಭ್ಯ ಇವೆ. ಹಾಗಾದರೇ ಒಪ್ಪೋ K12x 5G ಫೋನ್ ಪರ್ಯಾಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

CMF Phone 1 ಫೋನ್
CMF Phone 1 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದರೊಂದಿಗೆ 6 GB RAM + 128 GB ಹಾಗೂ 8GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ಇದಕ್ಕೆ ಜೊತೆಯಾಗಿ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ.
ವಿವೋ T3 ಲೈಟ್ 5G ಮೊಬೈಲ್
ವಿವೋ T3 ಲೈಟ್ 5G ಫೋನ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB RAM + 128 GB ಹಾಗೂ 6GB RAM + 128 GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ.
ರಿಯಲ್‌ಮಿ C65 5G ಮೊಬೈಲ್
ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ ಈ ಡಿಸ್‌ಪ್ಲೇಯು 1604×720 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದ್ದು, 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, ಇದರೊಂದಿಗೆ 4GB + 64 GB, 4GB + 128 GB ಹಾಗೂ 6GB + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಇನ್ನು ರಿಯಲ್‌ಮಿ ಸಂಸ್ಥೆಯ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಇದೆ.


Click it and Unblock the Notifications








