ನಾಳೆ OPPO K12x 5G ಫೋನ್ ಫಸ್ಟ್ ಸೇಲ್!..ಅಗ್ಗದ ಬೆಲೆ..45W ಚಾರ್ಜಿಂಗ್ ಸೌಲಭ್ಯ!
ಒಪ್ಪೋ (Oppo) ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಒಪ್ಪೋ K12x 5G (OPPO K12x 5G) ಮೊಬೈಲ್ ಎಂಟ್ರಿ ಲೆವೆಲ್‌ನಲ್ಲಿ ಗುರುತಿಸಿಕೊಂಡಿದ್ದು, ಅಗ್ಗದ ಪ್ರೈಸ್‌ಟ್ಯಾಗ್ ಪಡೆದುಕೊಂಡಿದೆ. ಈ ಸ್ಟೈಲಿಶ್ ಮೊಬೈಲ್ ನಾಳೆ (ಆಗಷ್ಟ್ 2 ರಂದು) ಅಧಿಕೃತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ (Flipkart) ವೆನ್‌ಸೈಟ್ ಮೂಲಕ ಫಸ್ಟ್ ಸೇಲ್ ಪ್ರಾರಂಭ ಮಾಡಲಿದೆ. ಇದು ಗ್ರಾಹಕಸ್ನೇಹಿ ದರದಲ್ಲಿ ಕಾಣಿಸಿಕೊಂಡಿದ್ದರೂ ಸಹ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಮೊಬೈಲ್ ಪ್ರಿಯರ ಚಿತ್ತ ಸೆಳೆದಿದೆ. ಈ ಫೋನಿನ 5,100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಒಪ್ಪೋ K12x 5G (OPPO K12x 5G) ಮೊಬೈಲ್ ನಾಳೆ ಮಾರಾಟ (sale) ಪ್ರಾರಂಭ ಮಾಡಲಿದೆ. ಈ ಮೊಬೈಲ್ 6 + 128GB ಹಾಗೂ 8 + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, 32 ಮೆಗಾ ಪಿಕ್ಸಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ.

ಇನ್ನು ಒಪ್ಪೋ K12x 5G ಫೋನ್ ಬ್ರೀಜ್ ಬ್ಲೂ ಮತ್ತು ಮೀಡ್‌ನೈಟ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಇದರ ಆರಂಭಿಕ ವೇರಿಯಂಟ್ ಬೆಲೆಯು 12,999ರೂ. ಆಗಿದೆ. ಆಸಕ್ತ ಖರೀದಿದಾರರು ಫ್ಲಿಪ್‌ಕಾರ್ಟ್ ತಾಣದಲ್ಲಿ ಖರೀದಿ ಮಾಡಬಹುದು. ಹಾಗಾದರೆ ಒಪ್ಪೋ K12x 5G ಫೋನಿನ ಇತರೆ ಫೀಚರ್ಸ್ ಯಾವುವು ಹಾಗೂ ಆಫರ್ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ K12x 5G ಫೀಚರ್ಸ್
ಒಪ್ಪೋ K12x 5G ಫೋನ್ 6.67 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. 120Hz ರಿಫ್ರೆಶ್ ರೇಟ್ ಹಾಗೂ 1000 nits ಬ್ರೈಟ್ನೆಸ್ ಆಯ್ಕೆಯೊಂದಿಗೆ, ಪಾಂಡಾ ಗ್ಲಾಸ್ 3 ರಕ್ಷಣೆ ಸಹ ಪಡೆದುಕೊಂಡಿದೆ.
ಒಪ್ಪೋ K12x 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಓಎಸ್ ಅನ್ನು ಬೆಂಬಲ ಸಹ ಪಡೆದಿದೆ. ಇದರೊಂದಿಗೆ6 + 128GB ಹಾಗೂ 8 + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ಒಪ್ಪೋ K12x 5G ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ. ಇದರ ಮೊದಲ ಕ್ಯಾಮೆರಾವು 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದ್ದು, ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.
ಒಪ್ಪೋ K12x 5G ಫೋನ್ 5,100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W SuperVOOC ಚಾರ್ಜಿಂಗ್ ಬೆಂಬಲ ಪಡೆದಿದೆ. ಅಲ್ಲದೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಮೊಬೈಲ್ ಬ್ರೀಜ್ ಬ್ಲೂ ಮತ್ತು ಮೀಡ್‌ನೈಟ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.


Click it and Unblock the Notifications








