Home
ಸುದ್ದಿಜಾಲ

ಭರ್ಜರಿ ಬೆಲೆ ಇಳಿಕೆ! 5100mAh ಬ್ಯಾಟರಿ.. 50MP ಕ್ಯಾಮೆರಾ.. ಯಾವ ಫೋನ್?

ಬೆಲೆಯಿಂದ ಗ್ರಾಹಕರನ್ನು ಆಕರ್ಷಿಸಿರುವ ಒಪ್ಪೋ K12x 5G (OPPO K12x 5G) ಮೊಬೈಲ್‌ ಕೆಲವು ಆಕರ್ಷಕ ಫೀಚರ್ಸ್‌ಗಳಿಂದಲೂ ಸಹ ಸದ್ದು ಮಾಡಿದೆ. ಅಂದಹಾಗೆ, ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಈಗ ಭರ್ಜರಿ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದ್ದು, ಈ ಮೂಲಕ ಮತ್ತೆ ಖರೀದಿದಾರರನ್ನು ತನ್ನತ್ತ ಸೆಳೆದಿದೆ. ಇದು 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್‌ ಪಡೆದಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ಹೌದು, ಫ್ಲಿಪ್‌ಕಾರ್ಟ್‌ ( Flipkart ) ವೆಬ್‌ಸೈಟ್‌ನಲ್ಲಿ ಇದೀಗ ಒಪ್ಪೋ K12x 5G ( OPPO K12x 5G ) ಸ್ಮಾರ್ಟ್‌ಫೋನ್‌ ಶೇ.23% ರಷ್ಟು ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯವಿದೆ. ಈ ಮೊಬೈಲ್‌ನ 8 GB RAM + 128 GB ವೇರಿಯಂಟ್‌ 12,999ರೂ. ಗಳ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಎಕ್ಸ್‌ಚೇಂಜ್ ಆಫರ್‌ ಸಹ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ಬೆಲೆಯಲ್ಲಿ ಫೋನ್‌ ಖರೀದಿಸಬಹುದು.

ಭರ್ಜರಿ ಬೆಲೆ ಇಳಿಕೆ! 5100mAh ಬ್ಯಾಟರಿ, 50MP ಕ್ಯಾಮೆರಾ.. ಯಾವ ಫೋನ್?

ಅಂದಹಾಗೆ ಇದು 8GB RAM ಮತ್ತು 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 32 ಮೆಗಾಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಅಲ್ಲದೇ 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಒಪ್ಪೋ K12x 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ K12x 5G ಫೋನಿನ ಫೀಚರ್ಸ್‌

ಡಿಸ್ಪ್ಲೇ ಹೇಗಿದೆ

ಒಪ್ಪೋ K12x 5G ಫೋನ್‌ 6.67 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. 120 Hz ರಿಫ್ರೆಶ್ ರೇಟ್‌ ಹಾಗೂ 1000 nits ಬ್ರೈಟ್ನೆಸ್‌ ಆಯ್ಕೆಯೊಂದಿಗೆ, ಪಾಂಡಾ ಗ್ಲಾಸ್‌ 3 ರಕ್ಷಣೆ ಸಹ ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?

ಒಪ್ಪೋ K12x 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 14 ಓಎಸ್ ಅನ್ನು ಸಪೋರ್ಟ್‌ ಸಹ ಪಡೆದಿದೆ. ಇದರೊಂದಿಗೆ ಇದು 6 + 128GB ಮತ್ತು 8 + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್

ಒಪ್ಪೋ K12x 5G ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರ ಫಸ್ಟ್‌ ಕ್ಯಾಮೆರಾವು 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದ್ದು, ಹಾಗೆಯೇ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೆಟ್‌ಅಪ್‌ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಚಾರ್ಜರ್

ಒಪ್ಪೋ K12x 5G ಫೋನ್‌ 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬೆಂಬಲದ ಜೊತೆಗೆ 45W SuperVOOC ಚಾರ್ಜಿಂಗ್ ಸಪೋರ್ಟ್‌ ಸಹ ಹೊಂದಿದೆ. ಅಲ್ಲದೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್ - ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಮೊಬೈಲ್‌ ಬ್ರೀಜ್‌ ಬ್ಲೂ, ಪಿಂಕ್ ಮತ್ತು ಮೀಡ್‌ನೈಟ್‌ ವೈಲೆಟ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಸಿಗುತ್ತದೆ.

Best Mobiles in India

English summary
OPPO K12x 5G received price down on flipkart. Check offer Price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+