Home
ಸುದ್ದಿಜಾಲ

ಕಡಿಮೆ ಬೆಲೆಯ 5G ಫೋನ್‌ ಈಗ ಮತ್ತಷ್ಟು ಸಸ್ತಾ ದರದಲ್ಲಿ ಲಭ್ಯ!..5100mAh ಬ್ಯಾಟರಿ!

ಲೀಡಿಂಗ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಸದ್ಯ ಬ್ಲ್ಯಾಕ್‌ ಫ್ರೈಡ್‌ ಸೇಲ್‌ ಅನ್ನು ಹೆಚ್ಚುವರಿಯಾಗಿ ಒಂದು ದಿನ ಮುಂದುವರಿಸಲಾಗಿದೆ. ಈ ಸ್ಪೆಷಲ್‌ ಸೇಲ್‌ನಲ್ಲಿ ಕೆಲವು ಆಯ್ದ ಮೊಬೈಲ್‌ಗಳು ಗಮನಾರ್ಹ ರಿಯಾಯಿತಿಯಲ್ಲಿ ಖರೀದಿಗೆ ಲಭ್ಯ ಇವೆ. ಆ ಪೈಕಿ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒಪ್ಪೋ K12x 5G ( OPPO K12x 5G ) ಮೊಬೈಲ್‌ ಸಖತ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಒಪ್ಪೋ K12x 5G ( OPPO K12x 5G ) ಮೊಬೈಲ್‌ ಶೇ. 23% ರಷ್ಟು ನೇರ ಆಫರ್‌ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಮೊಬೈಲ್‌ನ 6 GB RAM + 128 GB ವೇರಿಯಂಟ್‌ 12,999ರೂ. ಗಳ ಸಖತ್ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಎಕ್ಸ್‌ಚೇಂಜ್ ರಿಯಾಯಿತಿ ಸಹ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ಬೆಲೆಯಲ್ಲಿ ಫೋನ್‌ ಖರೀದಿಸಬಹುದು.

ಕಡಿಮೆ ಬೆಲೆಯ 5G ಫೋನ್‌ ಈಗ ಮತ್ತಷ್ಟು ಸಸ್ತಾ ದರದಲ್ಲಿ ಲಭ್ಯ!..5100mAh ಬ್ಯಾಟರಿ!

ಒಪ್ಪೋ ಸಂಸ್ಥೆಯ ಈ ಮೊಬೈಲ್‌ 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿಯೂ ಖರೀದಿಸಬಹುದು. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಹಾಗಾದರೆ ಒಪ್ಪೋ K12x 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮಾಹಿತಿ

ಒಪ್ಪೋ K12x 5G ಫೋನ್‌ 6.67 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. 120 Hz ರಿಫ್ರೆಶ್ ರೇಟ್‌ ಹಾಗೂ 1000 nits ಬ್ರೈಟ್ನೆಸ್‌ ಆಯ್ಕೆಯೊಂದಿಗೆ, ಪಾಂಡಾ ಗ್ಲಾಸ್‌ 3 ರಕ್ಷಣೆ ಸಹ ಒಳಗೊಂಡಿದೆ.

ಪ್ರೊಸೆಸರ್‌ ಪವರ್‌ ಎಷ್ಟು

ಒಪ್ಪೋ K12x 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 14 ಓಎಸ್ ಅನ್ನು ಸಪೋರ್ಟ್‌ ಸಹ ಪಡೆದಿದೆ. ಇದರೊಂದಿಗೆ ಇದು 6 + 128GB ಮತ್ತು 8 + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್‌ ಮಾಹಿತಿ

ಒಪ್ಪೋ K12x 5G ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದ್ದು, ಹಾಗೆಯೇ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ರಚನೆ ಅನ್ನು ಹೊಂದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್‌ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಪವರ್‌

ಒಪ್ಪೋ K12x 5G ಫೋನ್‌ 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 45W SuperVOOC ಚಾರ್ಜಿಂಗ್ ಸಪೋರ್ಟ್‌ ಸಹ ಹೊಂದಿದೆ. ಅಲ್ಲದೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್ - ಸಿ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಮೊಬೈಲ್‌ ಬ್ರೀಜ್‌ ಬ್ಲೂ, ಪಿಂಕ್ ಮತ್ತು ಮೀಡ್‌ನೈಟ್‌ ವೈಲೆಟ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ದೊರೆಯುತ್ತದೆ.

Best Mobiles in India

English summary
OPPO K12x 5G Recevied a Stunning Price Drop on Flipkart India. Check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+