Home
ಸುದ್ದಿಜಾಲ

ಇಂದು ಭಾರತದಲ್ಲಿ OPPO K13 5G ಬಿಡುಗಡೆ; 7000mAh ಬ್ಯಾಟರಿ.. ಶಕ್ತಿಶಾಲಿ ಪ್ರೊಸೆಸರ್‌.. ಬೆಲೆಯೂ ಫುಲ್ ಕಡಿಮೆ!

ಒಪ್ಪೋ ಪ್ರಿಯರ ಕಾಯುವಿಕೆ ಅಂತ್ಯ! ಇಂದು ಭಾರತಕ್ಕೆ ಎಂಟ್ರಿ ಕೊಡಲಿದೆ 'ಬ್ಯಾಟರಿ ಬ್ಯಾಕಪ್‌ನ ರಾಜ'..! ಹೌದು, ಬಹುನಿರೀಕ್ಷಿತ ಒಪ್ಪೋ K13 5G (OPPO K13 5G) ಸ್ಮಾರ್ಟ್‌ಫೋನ್ ಇಂದು (ಏಪ್ರಿಲ್ 21) ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಈ ಫೋನನ್ನು ತನ್ನ 'K' ಸರಣಿಯ ಅಡಿಯಲ್ಲಿ ಪರಿಚಯಿಸಲಿದೆ. ಇದರ ದೊಡ್ಡ ವಿಶೇಷತೆಯೆಂದರೆ, ಬಿಗ್ ಬ್ಯಾಟರಿ. ಇದು 7,000mAh ಸಾಮರ್ಥ್ಯದ ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಈಗಾಗಲೇ ಈ ಹೊಸ 5G ಮೊಬೈಲ್ ಗ್ರಾಹಕರ ಗಮನ ಸೆಳೆದಿದೆ. ಬನ್ನಿ, ಬಿಡುಗಡೆಗೆ ಸಿದ್ಧವಾಗಿರುವ ಒಪ್ಪೋ K13 5G ಫೋನಿನ ನಿರೀಕ್ಷಿತ ಬೆಲೆ, ಮಾರಾಟದ ವಿವರಗಳು ಮತ್ತು ವಿಶೇಷತೆಗಳ ಬಗ್ಗೆ ತಿಳಿಯೋಣ.

ಒಪ್ಪೋ K13 5G (OPPO K13 5G) ಮೊಬೈಲ್ 20,000 ರೂ.ಗಳ ಬಜೆಟ್ ವಿಭಾಗದಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಈ ಒಪ್ಪೋ ಫೋನಿನ ರಿಟೇಲ್ ಬಾಕ್ಸ್ ಸೋರಿಕೆಯಾಗಿದೆ. ಆನ್‌ಲೈನ್‌ನಲ್ಲಿ ಫೋಟೋ ಸಹ ಬಹಿರಂಗವಾಗಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಲಿದೆ.

ಇಂದು OPPO K13 5G ಲಾಂಚ್; 7000mAh ಬ್ಯಾಟರಿ, 50MPಕ್ಯಾಮೆರಾ; ಕಡಿಮೆ ಬೆಲೆ!

ಭಾರತದಲ್ಲೇ ಮೊದಲು ಬಿಡುಗಡೆ

ಒಪ್ಪೋ ಸಂಸ್ಥೆಯು ಇಂದು (ಏಪ್ರಿಲ್ 21) ಭಾರತದಲ್ಲಿ ದೊಡ್ಡ ಸಮಾರಂಭವನ್ನು ಹಮ್ಮಿಕೊಂಡಿದೆ. ಲಾಂಚ್ ಈವೆಂಟ್‌ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ. ಈ ಕಾರ್ಯಕ್ರಮದಲ್ಲಿ ಹೊಸ ಒಪ್ಪೋ K13 5G ಫೋನನ್ನು ರಿಲೀಸ್ ಮಾಡಲಾಗುವುದು. ಇದನ್ನು ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಗೂ ಕಂಪನಿಯ ಎಲ್ಲಾ ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಲೈವ್ ವೀಕ್ಷಿಸಬಹುದು. ಪ್ರಮುಖ ವಿಷಯವೆಂದರೆ, ಒಪ್ಪೋ K13 5G ಮೊಬೈಲ್ ಭಾರತದಲ್ಲೇ ಮೊದಲು ಬಿಡುಗಡೆಯಾಗುತ್ತಿದೆ. ಯಾವುದೇ ವಿದೇಶಿ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿಲ್ಲ.

ಒಪ್ಪೋ K13 5G ಬೆಲೆ (ನಿರೀಕ್ಷಿತ)

ಒಪ್ಪೋ ಈವರೆಗೆ ತನ್ನ ಹೊಸ 5G ಫೋನಿನ ಬೆಲೆ ಬಗ್ಗೆ ಮಾಹಿತಿ ನೀಡಿಲ್ಲ. ಆದರೆ, ವರದಿಯ ಪ್ರಕಾರ ಒಪ್ಪೋ K13 5G ಫೋನನ್ನು 20 ಸಾವಿರ ರೂ.ಗಿಂತ ಕಡಿಮೆ ಬಜೆಟ್‌ನಲ್ಲಿ ಬಿಡುಗಡೆ ಮಾಡಲಾಗುವುದು. ಈ ಫೋನಿನ ನಿಖರ ಬೆಲೆ ಮತ್ತು ಮಾರಾಟದ ವಿವರಗಳನ್ನು ಇಂದು ಅಧಿಕೃತವಾಗಿ ಬಹಿರಂಗಪಡಿಲಾಗುತ್ತದೆ. ಈ ಮೊಬೈಲ್ ಬಿಡುಗಡೆ ಬಳಿಕ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ ಮೂಲಕ ತನ್ನ ಮಾರಾಟ ಪ್ರಾರಂಭಿಸಲಿದೆ.

ಇಂದು OPPO K13 5G ಲಾಂಚ್; 7000mAh ಬ್ಯಾಟರಿ, 50MPಕ್ಯಾಮೆರಾ; ಕಡಿಮೆ ಬೆಲೆ!

ಒಪ್ಪೋ K13 5G ವೈಶಿಷ್ಟ್ಯಗಳು (ನಿರೀಕ್ಷಿತ)

ಒಪ್ಪೋ K13 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರದ ಬೆಂಬಲದೊಂದಿಗೆ ಬರುತ್ತದೆ. ಜೊತೆಗೆ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ ಸಹ ಹೊಂದಿದೆ. ಈ ಒಪ್ಪೋ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 6 ಜೆನ್ 4 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ.

ಒಪ್ಪೋ K13 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಒಪ್ಪೋ ಮೊಬೈಲ್, ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಒಪ್ಪೋ K13 5G ಫೋನಿನ ಬ್ಯಾಟರಿ ಬಗ್ಗೆ ಹೇಳುವುದಾದರೆ, ಈ ಮೊಬೈಲ್ 7000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇಷ್ಟು ದೊಡ್ಡ ಬ್ಯಾಟರಿಯನ್ನು ಹೊಂದಿರುವ ಕಂಪನಿಯ ಮೊದಲ ಸ್ಮಾರ್ಟ್‌ಫೋನ್ ಒಪ್ಪೋ K13 5G ಆಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

Best Mobiles in India

English summary
OPPO K13 5G to Launching in India 12PM Today: Expected Price, Specs And Features Here
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+