ಭಾರತದಲ್ಲಿ ಇಂದಿನಿಂದ 'ಒಪ್ಪೊ ಕೆ3' ಸೇಲ್ ಆರಂಭ!..ಹೇಗಿವೆ ಫೀಚರ್ಸ್?
ಗ್ರಾಹಕರಲ್ಲಿ ಭಾರೀ ನಿರೀಕ್ಷೆಗಳನ್ನು ಮೂಡಿಸಿದ್ದ 'ಒಪ್ಪೊ ಕೆ3' ಸ್ಮಾರ್ಟ್‌ಫೋನ್ ಈಗಾಗಲೇ ಬಿಡುಗಡೆಯಾಗಿದ್ದು, ಇಂದು (ಜುಲೈ.23) ಮಧ್ಯಾಹ್ನ 12 ಗಂಟೆಯಿಂದ ಈ ಸ್ಮಾರ್ಟ್‌ಫೋನಿನ ಮೊದಲ ಸೇಲ್ ಶುರುವಾಗಲಿದೆ. 6GB RAM + 64GB ಮತ್ತು 8GB RAM + 128GB ಸಾಮರ್ಥ್ಯದ ಎರಡು ವೇರಿಯಂಟ್ ಆಯ್ಕೆಗಳನ್ನು ಮತ್ತು ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿರುವುದು ವಿಶೇಷ.

ಒಪ್ಪೊ ಕೆ3 ಸ್ಮಾರ್ಟ್‌ಫೋನ್ ಅನ್ನು ಇದೇ ಜುಲೈ 19 ರಂದು ದೇಶಿಯ ಮಾರುಕಟ್ಟೆಗೆ ರಿಲೀಸ್ ಮಾಡಿರುವ ಕಂಪನಿಯು ಈ ಸ್ಮಾರ್ಟ್‌ಫೋನ್ ಅನ್ನು ಇತ್ತೀಚಿಗೆ ಚೀನಾದಲ್ಲಿ ಬಿಡುಗಡೆ ಮಾಡಿತ್ತು. ಬಜೆಟ್ ಗ್ರಾಹಕರನ್ನು ಸೆಳೆಯುವ ಎಲ್ಲ ಲಕ್ಷಣಗಳನ್ನು ಹೊರಹಾಕಿರುವ 'ಒಪ್ಪೊ ಕೆ3' ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆನ್ಸಾರ್ ಸೆಟ್‌ಅಪ್ ಆಯ್ಕೆಯನ್ನು ಒಳಗೊಂಡಿದೆ.

3,765mAh ಸಾಮರ್ಥ್ಯದ ಬ್ಯಾಟರಿ ಲೈಫ್ ಶಕ್ತಿಯೊಂದಿಗೆ VOOC 3.0 ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನದ ಸೌಲಭ್ಯವನ್ನು ಸಹ ಒಳಗೊಂಡಿದ್ದು, ಹಾಗೆಯೇ ಅರೋರಾ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಗ್ರೆಡಿಯಂಟ್ oppo k3 sale today via amazon in indiaಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 16,990ರೂ.ಗಳಾಗಿವೆ. ಹಾಗಾದರೇ ಒಪ್ಪೊ ಕೆ3 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಒಪ್ಪೊ ಕೆ3 ಸ್ಮಾರ್ಟ್‌ಫೋನ್ 2,340 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 396 PPIರಷ್ಟು ಆಗಿದೆ. ಹಾಗೆಯೇ ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.91.1% ರಷ್ಟಾಗಿದ್ದು, ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆಯನ್ನು ಸಹ ಪಡೆದುಕೊಂಡಿದೆ.

ಪ್ರೊಸೆಸರ್ ಸಾಮರ್ಥ್ಯ
ಒಪ್ಪೊ ಕೆ3 ಸ್ಮಾರ್ಟ್‌ಫೋನ್ 2.2 GHz ವೇಗದ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಕಲರ್OS 6.0 ಆಧಾರಿತ ಆಂಡ್ರಾಯ್ಡ್ ಪೈ 9.0 ಆಪರೇಟಿಂಗ್ ಸಿಸ್ಟಮ್ ಬೆಂಬಲ ಪಡೆದುಕೊಂಡಿದ್ದು, ಮಲ್ಟಿಟಾಸ್ಕ್ ಕೆಲಸಗಳನ್ನು ಅತ್ಯುತ್ತಮವಾಗಿ ನಿಭಾಯಿಸುವ ಸಾಮರ್ಥ್ಯವನ್ನು ಈ ಫೋನಿನಲ್ಲಿ ಕಾಣಬಹುದು.

RAM ಮೆಮೊರಿ
ಒಪ್ಪೊ ಕೆ3 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಅವುಗಳು ಕ್ರಮವಾಗಿ 6GB RAM +64GB ಸ್ಟೋರೇಜ್ ಮತ್ತು 8GB RAM + 128GB ಸ್ಟೋರೇಜ್‌ನ ಆಂತರಿಕ ಸಂಗ್ರಹದ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಇದರೊಂದಿಗೆ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶವನ್ನು ನೀಡಲಾಗಿದೆ.

ಡ್ಯುಯಲ್ ಕ್ಯಾಮೆರಾ
ಒಪ್ಪೊ ಕೆ3 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು f/1.7 ಅಪಾರ್ಚರ್ ಸಾಮರ್ಥ್ಯದೊಂದಿಗೆ 16ಎಂಪಿ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿಗಾಗಿ ಫ್ಲ್ಯಾಶ್ ಲೈಟ್ ಜೊತೆಗೆ ಪಾಪ್‌ಅಪ್ ಕ್ಯಾಮೆರಾ ನೀಡಲಾಗಿದ್ದು, ಅದು ಸಹ 16ಎಂಪಿ ಸೆನ್ಸಾರ್‌ನಲ್ಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಒಪ್ಪೊ ಕೆ3 ಸ್ಮಾರ್ಟ್‌ಫೋನ್ 3,765mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, ಇದರೊಂದಿಗೆ VOOC 3.0 ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಡ್ಯುಯಲ್ ಬ್ಯಾಂಡ್ ವೈಫೈ, ಬ್ಲೂಟೂತ್ 5.0, A-GPS ಜೊತೆಗೆ GLONASS, ಗೇಮ್‌ಬೂಸ್ಟ್ 2.0, ಫ್ರೇಮ್ ಬೂಸ್ಟ್ ಮತ್ತು ಟಚ್ ಬೂಸ್ಟ್ ಆಯ್ಕೆಗಳನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತೀಯ ಮಾರುಕಟ್ಟೆಗೆ ಈಗಾಗಲೇ ಬಿಡುಗಡೆ ಆಗಿರುವ 'ಒಪ್ಪೊ ಕೆ3' ಸ್ಮಾರ್ಟ್‌ಫೋನ್ ಮೊದಲ ಸೇಲ್ ಇಂದು (ಜುಲೈ 23)ರಂದು ಮಧ್ಯಾಹ್ನ 12ರಿಂದ ಆರಂಭವಾಗಲಿದೆ. ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಗ್ರಾಹಕರು ಖರೀದಿಸಬಹುದಾಗಿದೆ. 6GB RAM +64GB ವೇರಿಯಂಟ್ ಬೆಲೆಯು 16,990ರೂ.ಗಳು ಮತ್ತು 8GB RAM + 128GB ವೇರಿಯಂಟ್ ಬೆಲೆಯು 19,990ರೂ.ಗಳಾಗಿವೆ.


Click it and Unblock the Notifications








