Home
ಸುದ್ದಿಜಾಲ

ಒಪ್ಪೋ K7x ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್!

ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಒಪ್ಪೋ ಕಂಪೆನಿ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಒಪ್ಪೋ ಕಂಪೆನಿ ಒಪ್ಪೋ K7x ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರುವುದು ಈ ಸ್ಮಾರ್ಟ್‌ಫೋನ್‌ನ ವಿಶೇಷತೆಯಾಗಿದೆ.

ಒಪ್ಪೋ K7x

ಹೌದು, ಒಪ್ಪೋ ಕಂಪೆನಿಯು ಒಪ್ಪೋ K7x ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನ್‌ ಆಕ್ಟಾ-ಕೋರ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್‌ ವೇಗದ ಚಾರ್ಜಿಂಗ್ ಮತ್ತು ಒಪ್ಪೊದ ಹೈಪರ್ ಬೂಸ್ಟ್ 3.0 ತಂತ್ರಜ್ಞಾನದ ಬೆಂಬಲವನ್ನು ಪಡೆದುಕೊಂಡಿದ್ದು, ಇದು ಗೇಮಿಂಗ್ ಮಾಡುವಾಗ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ಒಪ್ಪೋ K7x ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೆ ಇದರ ಟಚ್ ಸ್ಯಾಂಪ್ಲಿಂಗ್ ರೇಟ್‌ 180Hz ಆಗಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವೂ 90.5% ಆಗಿದೆ. ಇದು 405 ಪಿಪಿ ಪಿಕ್ಸೆಲ್ ಸಾಂದ್ರತೆ ಹಾಗೂ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಪ್ರೊಟೆಕ್ಷನ್‌ಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3ಯನ್ನು ನೀಡಲಾಗಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಡ್‌ ಕ್ಯಾಮೆರಾ

ಕ್ಯಾಡ್‌ ಕ್ಯಾಮೆರಾ

ಒಪ್ಪೋ K7x ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್‌ ಆಂಗಲ್‌ ಲೆನ್ಸ್‌ ಸೆನ್ಸಾರ್‌ ಹೊಂದಿದೆ. ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಇನ್ನು ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 30W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಡ್ಯುಯಲ್-ಮೋಡ್ 5G, ಜಿಪಿಎಸ್, ಬ್ಲೂಟೂತ್ 5.0, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್ ಮತ್ತು ವೇಗವರ್ಧಕ ಸೆನ್ಸಾರ್‌ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಬಿಡುಗಡೆ ಆಗಿದ್ದು, 6GB RAM + 128GB ಶೇಖರಣಾ ರೂಪಾಂತರಕ್ಕೆ CNY 1,499 (ಸುಮಾರು ರೂ. 16,700)ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಬ್ಲ್ಯಾಕ್ ಮಿರರ್ ಮತ್ತು ಬ್ಲೂ ಶ್ಯಾಡೋ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಇದು ಪ್ರಸ್ತುತ ಚೀನಾದಲ್ಲಿ ನವೆಂಬರ್ 11 ರಿಂದ ಮಾರಾಟವಾಗಲಿದೆ.

Best Mobiles in India

English summary
Oppo K7x boasts of impressive features such as a display with high refresh rate, quad rear cameras, and an octa-core processor.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+