Home
ಸುದ್ದಿಜಾಲ

ಒಪ್ಪೊ K9s ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕರಲ್ಲಿ ಒಪ್ಪೋ ಕಂಪೆನಿ ಕೂಡ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಒಪ್ಪೋ ಕಂಪೆನಿ ತನ್ನ ವಿಶೇಷ ಕ್ಯಾಮೆರಾ ಫೀಚರ್ಸ್‌ ಸ್ಮಾರ್ಟ್‌ಫೋನ್‌ಗಳಿಗೆ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಒಪ್ಪೋ K9s ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

ಒಪ್ಪೊ K9s ಸ್ಮಾರ್ಟ್‌ಫೋನ್‌

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೊ K9s ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು 120Hz ರಿಫ್ರೇಶ್‌ ರೇಟ್‌ ಸಾಮರ್ಥ್ಯದ ಪಂಚ್‌-ಹೋಲ್ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಹೊಂದಿದ್ದು, ಮೂರು ವಿಶಿಷ್ಟ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೊ K9s ಸ್ಮಾರ್ಟ್‌ಫೋನ್‌ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಅಲ್ಲದೆ 240Hz ಟಚ್‌ ಸ್ಯಾಪಲ್‌ ರೇಟ್‌, 96% ಎನ್‌ಟಿಎಸ್‌ಸಿ, 401 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 16.7 ಮಿಲಿಯನ್ ಕಲರ್ಸ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒಪ್ಪೊ K9s ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G ಆಕ್ಟಾ-ಕೋರ್ SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11. ಆಧಾರಿತ ಕಲರ್ಓಎಸ್ 11.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಒಪ್ಪೋ K9s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64-ಮೆಗಾಪಿಕ್ಸೆಲ್ ಸೆನ್ಸಾರ್‌ f/1.7 ಅಪರ್ಚರ್ ಮತ್ತು 81-ಡಿಗ್ರಿ ಫೀಲ್ಡ್ ವ್ಯೂ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 120-ಡಿಗ್ರಿ ಫೀಲ್ಡ್ ವೀಕ್ಷಣೆಯನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ K9s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಆಡಿಯೋ ಜ್ಯಾಕ್, ವೈ-ಫೈ 6, ಬ್ಲೂಟೂತ್ ವಿ 5.2 ಬೆಂಬಲಿಸಲಿದೆ. ಈ ಫೋನ್‌ನಲ್ಲಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಕೂಡ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ K9s ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ಆಯ್ಕೆಗೆ ಚೀನಾದಲ್ಲಿ CNY 1,499 (ಅಂದಾಜು 17,500ರೂ.) ಬೆಲೆ ಹೊಂದಿದೆ. ಇನ್ನು 8GB RAM + 128GB ಸ್ಟೋರೇಜ್ ಮಾಡೆಲ್‌ಗೆ CNY 1,699 (ಅಂದಾಜು 19,900ರೂ).ಬೆಲೆ ನಿಗಧಿ ಪಡಿಸಲಾಗಿದೆ. ಇದು ನವೆಂಬರ್ 1 ರಂದು ಮಾರಾಟಕ್ಕೆ ಬರುತ್ತದೆ. ಈ ಫೋನ್‌ ಮ್ಯಾಜಿಕ್ ಪರ್ಪಲ್ ಕ್ವಿಕ್ ಸ್ಯಾಂಡ್, ನಿಯಾನ್ ಸಿಲ್ವರ್ ಸೀ ಮತ್ತು ಒಬ್ಸಿಡಿಯನ್ ವಾರಿಯರ್ ಆಯ್ಕೆಗಳಲ್ಲಿ ಫೋನ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಭಾರತದಲ್ಲಿ ಬಿಡುಗಡೆ ಆಗುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

Best Mobiles in India

English summary
Oppo K9s smartphone was launched as the latest entrant in the Oppo K series in China.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+