ಒಪ್ಪೋ PDAM 10 ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ಚೀನಾ ಮೂಲದ ಒಪ್ಪೋ ಕಂಪೆನಿ ತನ್ನ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಟೆಕ್ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಿದೆ. ಈಗಾಗ್ಲೆ ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಒಪ್ಪೋ ಕಂಪೆನಿ ತನ್ನ ಹೊಸ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ತನ್ನ ಕ್ಯಾಮೆರಾ ಬ್ಯಾಟರಿ ವಿಶೇಷತೆಗಳಿಂದಲೇ ಗಮನ ಸೆಳೆಯುವ ಒಪ್ಪೋ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ನಲ್ಲೂ ಹೊಸ ಫೀಚರ್ಸ್‌ಗಳನ್ನ ಪರಿಚಯಿಸುವ ಸಾಧ್ಯತೆ ಇದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಹೌದು, ಚೀನಾದ ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ಕಂಪೆನಿ ತನ್ನ ಹೊಸ ಆವೃತ್ತಿಯ ಒಪ್ಪೋ PDAM 10 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಲು ವೇದಿಕೆ ಸಿದ್ದಪಡಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಒಪ್ಪೋ ಕಂಪೆನಿಯ A ಸರಣಿಯಿಂದ ಮಧ್ಯಮ ಶ್ರೆಣಿಯ ಸ್ಮಾರ್ಟ್‌ಫೋನ್‌ಗೆ ಬದಲಾದ ಸೂಚನೆ ಎಂದು ಹೇಳಲಾಗ್ತಿದೆ. ಅಲ್ಲದೆ ಇದು ಒಪ್ಪೋ A91 ಸ್ಮಾರ್ಟ್‌ಫೋನ್‌ನ ಮುಂದುವರೆದ ಆವೃತ್ತಿ ಆಗಿದೆ ಎಂದು ಹೇಳಲಾಗ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಆನ್‌ಲೈನ್‌ನಲ್ಲಿ ಲೀಕ್ ಆಗಿದ್ದು, ಲೀಕ್ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ಗಳನನ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ

ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ 1080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಡಿಸ್‌ಪ್ಲೇ ಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಫುಲ್ ಹೆಚ್ ಡಿಸ್‌ಪ್ಲೇ ಆಘಿದ್ದು, ಉತ್ತಮ ಸ್ಕ್ರೀನ್ ರೆಸಲ್ಯೂಶನ್ ಸಾಂಧ್ರತೆಯನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್ ಶೈಲಿಯನ್ನ ಒಳಗೊಂಡಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ ವಿಡಿಯೋ ಕರೆಗಳು ಹಾಗೂ ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಇನ್ನು ಒಪ್ಪೋ PDAM 10 ಸ್ಮಾರ್ಟ್‌ಫೋನ್ ಒಪ್ಪೋ ಮಿಡ್-ರೇಂಜರ್ ಆಕ್ಟಾ-ಕೋರ್ ಪ್ರೊಸೆಸರ್ 2GHz ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸುವ ಸಾಮರ್ಥ್ಯವನ್ನು ಸಹ ಒಳಗೊಂಡಿದೆ ಎಂದು ಹೇಳಲಾಗಿದೆ. ಆದರೆ ಯುಆವ ಪ್ರಮಾನದ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನುವುದು ಇನ್ನು ತಿಳಿದುಬಂದಿಲ್ಲ.

ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಶೂಟರ್ ಸೆನ್ಸಾರ್, ಜೊತೆಗೆ ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಇದಲ್ಲದೆ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಲ್‌ಇಡಿ ಪ್ಲ್ಯಾಶ್, ಮ್ಯಾಕ್ರೋ ಶೂಟರ್, ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇದಲ್ಲದೆ ಈ ಸ್ಮಾರ್ಟ್‌ಫೋನ್ 4,230 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿಲ್ಲ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲುಟೂತ್, ಅನ್ನು ಬೆಂಬಲಿಸಲಿದೆ. ಇನ್ನು ಇದು ಯಾವಾಗ ಮಾರಾಟವಾಗಲಿದೆ ಹಾಗೂ ಬೆಲೆ ಏನು ಅನ್ನೊದು ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications





