Home
ಸುದ್ದಿಜಾಲ

ಭಾರತದಲ್ಲಿ ಒಪ್ಪೋ ರೆನೋ 10 ಸರಣಿ ಸಂಚಲನ! ಪ್ರೊ ಮಾದರಿಗಳಲ್ಲಿದೆ ಜಬರ್ದಸ್ತ್‌ ಫೀಚರ್ಸ್‌!

ಭಾರತದಲ್ಲಿ ಭಾರಿ ನೀರಿಕ್ಷೆ ಹುಟ್ಟುಹಾಕಿದ್ದ ಒಪ್ಪೋ ರೆನೋ 10 5G ಸರಣಿ ಬಿಡುಗಡೆಯಾಗಿದೆ. ತನ್ನ ಸ್ಟೈಲಿಶ್‌ ಡಿಸೈನ್‌ ಹಾಗೂ ಫೀಚರ್ಸ್‌ ಸೋರಿಕೆಯ ಮೂಲಕ ಈಗಾಗಲೇ ಸಿಕ್ಕಾಪಟ್ಟೆ ಸೌಂಡ್‌ ಮಾಡಿದ್ದ ಈ ಸರಣಿಯಲ್ಲಿ ಒಪ್ಪೋ ರೆನೋ 10 ಪ್ರೊ 5G ಮತ್ತು ರೆನೋ 10 ಪ್ರೊ ಪ್ಲಸ್‌ 5G ಫೋನ್‌ಗಳು ಭಾರಿ ಸಂಚಲನ ಸೃಷ್ಟಿಸಿವೆ.

ಹೌದು, ಒಪ್ಪೋ ರೆನೋ 10 5G ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿವೆ. ಇದರಲ್ಲಿ ಒಪ್ಪೋ ರೆನೋ 10 ಪ್ರೊ 5G ಮತ್ತು ಒಪ್ಪೋ ರೆನೋ 10 ಪ್ರೊ ಪ್ಲಸ್‌ 5G ಸ್ಮಾರ್ಟ್‌ಫೋನ್‌ಗಳು ವಿಶೇಷವಾಗಿ ಗಮನಸೆಳೆದಿವೆ. ಈ ಫೋನ್‌ಗಳ ಲುಕ್‌ ಹಾಗೂ ಪ್ರೀಮಿಯಂ ಫೀಚರ್ಸ್‌ಗಳು ಟೆಕ್‌ ಮಾರುಕಟ್ಟೆಯನ್ನು ಚಿತ್‌ ಮಾಡಿವೆ. ಹಾಗಾದ್ರೆ ಒಪ್ಪೋ ರೆನೋ 10 ಪ್ರೊ 5G ಮತ್ತು ಒಪ್ಪೋ ರೆನೋ 10 ಪ್ರೊ ಪ್ಲಸ್‌ 5G ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಒಪ್ಪೋ ರೆನೋ 10 ಸರಣಿ ಸಂಚಲನ! ಪ್ರೊ ಮಾದರಿಲಿ ಜಬರ್ದಸ್ತ್‌ ಫೀಚರ್ಸ್‌!

ಒಪ್ಪೋ ರೆನೋ 10 ಪ್ರೊ+ 5G ಫೀಚರ್ಸ್‌ ಹೇಗಿದೆ?
ಒಪ್ಪೋ ರೆನೋ 10 ಪ್ರೊ+ 5G ಸ್ಮಾರ್ಟ್‌ಫೋನ್‌ 6.74 ಇಂಚಿನ ಅಮೋಲೆಡ್‌ 3D ಕರ್ವ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,240x 2,722 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz LTPS ರೇಟ್‌ ಮತ್ತು 240Hz ವರೆಗೆ ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ 450ppi ಪಿಕ್ಸೆಲ್ ಸಾಂದ್ರತೆಯನ್ನು ಕೂಡ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 93.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಪಡೆದಿದೆ.

ಒಪ್ಪೋ ರೆನೋ 10 ಪ್ರೊ+ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಕಲರ್‌ ಒಎಸ್‌ 13.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ RAM ಅನ್ನು ಮತ್ತೊಂದು 8GB ಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ನಲ್ಲಿ ಗೇಮಿಂಗ್ ಮತ್ತು ವಿಸ್ತೃತ ವೀಡಿಯೊ ಶೂಟಿಂಗ್‌ಗಾಗಿ 3,500mm ಚದರ VC ಲಿಕ್ವಿಡ್ ಕೂಲಿಂಗ್ ಸಿಸ್ಟಂ ಅನ್ನು ಹೊಂದಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 100W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು ಕೇವಲ 27 ನಿಮಿಷಗಳಲ್ಲಿ 0% ನಿಂದ 100% ತನಕ ಚಾರ್ಜಿಂಗ್‌ ಮಾಡಲಿದೆ. ಸಿಂಗಲ್‌ ಚಾರ್ಜ್‌ನಲ್ಲಿ 1.6 ದಿನಗಳ ಬ್ಯಾಕ್‌ಅಪ್‌ ಅನ್ನು ಸಹ ನೀಡಲಿದೆ.

ಭಾರತದಲ್ಲಿ ಒಪ್ಪೋ ರೆನೋ 10 ಸರಣಿ ಸಂಚಲನ! ಪ್ರೊ ಮಾದರಿಲಿ ಜಬರ್ದಸ್ತ್‌ ಫೀಚರ್ಸ್‌!

ಒಪ್ಪೋ ರೆನೋ 10 ಪ್ರೊ 5G ಫೀಚರ್ಸ್‌ ಹೇಗಿದೆ?
ಒಪ್ಪೋ ರೆನೋ 10 ಪ್ರೊ 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080X 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 93% ಸ್ಕ್ರೀನ್-ಟು-ಬಾಡಿ ಅನುಪಾತ, HDR10+ ಬೆಂಬಲ, 120Hz ವರೆಗೆ ರಿಫ್ರೆಶ್ ರೇಟ್‌ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 950 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ.

ಒಪ್ಪೋ ರೆನೋ 10 ಪ್ರೊ 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ನೀಡಲಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಈ ಸ್ಮಾರ್ಟ್‌ಫೋನ್‌ 4,600mAh ಬ್ಯಾಟರಿಯನ್ನು ಹೊಂದಿದ್ದು, 80W SuperVOOC ಫ್ಲ್ಯಾಷ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ನೀವು ಕೇವಲ 28 ನಿಮಿಷಗಳಲ್ಲಿ ಬ್ಯಾಟರಿಯನ್ನು ಫುಲ್‌ ಚಾರ್ಜ್‌ ಮಾಡಬಹುದಾಗಿದೆ. ಇದರೊಂದಿಗೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಮತ್ತು ಫೇಸ್ ಅನ್‌ಲಾಕ್ ಅನ್ನು ಸಹ ನೀಡಲಾಗಿದೆ.

ಭಾರತದಲ್ಲಿ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒಪ್ಪೋ ರೆನೋ 10 ಪ್ರೊ+ 5G ಸ್ಮಾರ್ಟ್‌ಫೋನ್‌ 12GB RAM +256GB ಸ್ಟೋರೇಜ್ ಮಾದರಿಯ ಆಯ್ಕೆಗೆ 54,999ರೂ.ಬೆಲೆಯನ್ನು ಹೊಂದಿದೆ. ಇನ್ನು ಒಪ್ಪೋ ರೆನೋ 10 ಪ್ರೊ 5G ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 39,999ರೂ.ಬೆಲೆಯನ್ನು ಪಡೆದುಕೊಂಡಿದೆ. ಈ ಎರಡೂ ಪ್ರೊ ಮಾದರಿಗಳು ಕೂಡ ಗ್ಲಾಸಿ ಪರ್ಪಲ್ ಮತ್ತು ಸಿಲ್ವರಿ ಗ್ರೇ ಶೇಡ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಒಪ್ಪೋ ರೆನೋ 10 ಪ್ರೊ 5G ಮತ್ತು ಒಪ್ಪೋ ರೆನೋ 10 ಪ್ರೊ+ 5G ಸ್ಮಾರ್ಟ್‌ಫೋನ್‌ಗಳು ಇದೇ ಜುಲೈ 13 ರಿಂದ ಮಾರಾಟವಾಗಲಿದೆ. ಇವುಗಳನ್ನು ಫ್ಲಿಪ್‌ಕಾರ್ಟ್, ಒಪ್ಪೋ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್‌ ಸ್ಟೊರ್‌ಗಳ ಮೂಲಕ ಖರೀದಿಸಬಹುದಾಗಿದೆ.

Best Mobiles in India

English summary
Oppo Reno 10 Pro 5G and Reno 10 Pro+ 100W Fast Charging Launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+