Home
ಸುದ್ದಿಜಾಲ

ಒಪ್ಪೋ ರೆನೋ 11 5G ಫಸ್ಟ್‌ ಸೇಲ್‌ ಪ್ರಾರಂಭ!..ಡಿಸ್ಕೌಂಟ್‌ ತಿಳಿದ್ರೆ, ಖುಷ್ ಆಗ್ತೀರಾ!

ಒಪ್ಪೋ ಕಂಪನಿಯು ನೂತನವಾಗಿ ಬಿಡುಗಡೆ ಮಾಡಿರುವ ಒಪ್ಪೋ ರೆನೋ 11 5G ಮೊಬೈಲ್‌ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಜನೆವರಿ 24 ರಂದು) ಜನಪ್ರಿಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಹಾಗೂ ಅಧಿಕೃತ ಒಪ್ಪೋ ಆನ್‌ಲೈನ್‌ ಸ್ಟೋರ್‌ ಮೂಲಕ ಮೊದಲ ಸೇಲ್‌ ಶುರು ಮಾಡಿದೆ.

ಹೌದು, ಒಪ್ಪೋ ಕಂಪನಿಯ ಒಪ್ಪೋ ರೆನೋ 11 5G ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ಇಂದು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಪ್ರಾರಂಭ ಆಗಿದೆ. ಈ ಫೋನ್‌ ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಈ ಸ್ಮಾರ್ಟ್‌ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಒಪ್ಪೋ ರೆನೋ 11 5G ಫಸ್ಟ್‌ ಸೇಲ್‌!..ಡಿಸ್ಕೌಂಟ್‌ ತಿಳಿದ್ರೆ, ಖುಷ್ ಆಗ್ತೀರಾ!

ಇನ್ನು ಒಪ್ಪೋ ರೆನೋ 11 5G ಸ್ಮಾರ್ಟ್‌ಫೋನ್ ಆರಂಭಿಕ 8GB + 128GB ವೇರಿಯಂಟ್‌ ಬೆಲೆಯು 29,999ರೂ. ಆಗಿದೆ. ಹಾಗೆಯೇ 8GB + 256GB ವೇರಿಯಂಟ್‌ ದರವು 31,999ರೂ. ಗಳು ಆಗಿದೆ. ಗ್ರಾಹಕರು SBI ಬ್ಯಾಂಕ್, ICICI ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಕಾರ್ಡ್ ಮತ್ತು IDFC ಫಸ್ಟ್ ಬ್ಯಾಂಕ್ ಮೂಲಕ ಖರೀದಿಸಿದರೆ, ಶೇ 10% (3000ರೂ) ವರೆಗೆ ಇನ್‌ಸ್ಟಂಟ್‌ ಡಿಸ್ಕೌಂಟ್‌ ಲಭ್ಯವಾಗಲಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ ರೆನೋ 11 5G ಫಸ್ಟ್‌ ಸೇಲ್‌!..ಡಿಸ್ಕೌಂಟ್‌ ತಿಳಿದ್ರೆ, ಖುಷ್ ಆಗ್ತೀರಾ!

ಒಪ್ಪೋ ರೆನೋ 11 5G - ಫೀಚರ್ಸ್‌

ಒಪ್ಪೋ ರೆನೋ 11 ಮೊಬೈಲ್‌ 6.70 ಇಂಚಿನ OLED ಕರ್ವ್ಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 950 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 1Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7050 ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 14 ಆಧಾರಿತ ColorOS 14ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB + 128GB ಮತ್ತು 512GB ಹಾಗೂ 8GB + 256GB ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ 8GB ವರ್ಚುವಲ್ ಮೆಮೊರಿಯನ್ನು ವಿಸ್ತರಿಸಲು ಅವಕಾಶ ನೀಡಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ LYT600 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಪಡೆದಿದ್ದು, ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಹೊಂದಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 67W ಸೂಪರ್ ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, GPS/ A-GPS, NFC, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಇದಲ್ಲದೆ ಅಕ್ಸಿಲೆರೊಮೀಟರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸರ್, ಅಂಡರ್-ಸ್ಕ್ರೀನ್ ಪ್ರಾಕ್ಸಿಮಿಟಿ ಸೆನ್ಸಾರ್, ಗ್ರಾವಿಟಿ ಸೆನ್ಸಾರ್, ಕಲರ್ ಟೆಂಪರೇಚರ್ ಸೆನ್ಸಾರ್, ಐಆರ್ ಕಂಟ್ರೋಲ್ ಮತ್ತು ಗೈರೊಸ್ಕೋಪ್ ಹೊಂದಿದೆ. ಈ ಫೋನ್ ಅಂಡರ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

Best Mobiles in India

English summary
OPPO Reno 11 5G now available in India. first sale is live price, offer, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+