Home
ಸುದ್ದಿಜಾಲ

32ಎಂಪಿ ಸೆಲ್ಫಿ ಕ್ಯಾಮೆರಾದ ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಉಳಿತಾಯ ಖಚಿತ!

ಒಪ್ಪೋ ಮೊಬೈಲ್‌ ಸಂಸ್ಥೆಯು ಭಿನ್ನ ಮಾದರಿಯ ಸ್ಮಾರ್ಟ್‌ಫೊನ್‌ಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಸ್ಥಾನ ಪಡೆದಿದೆ. ಒಪ್ಪೋ ಸಂಸ್ಥೆಯ ಇತ್ತೀಚಿನ ಮೊಬೈಲ್‌ಗಳ ಪೈಕಿ ಒಂದಾಗಿರುವ ಒಪ್ಪೋ ರೆನೋ 11 ಇದೀಗ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ ರೆನೋ 11 5G ಫೋನ್‌ ಶೇ. 23% ರಷ್ಟು ನೇರ ರಿಯಾಯಿತಿ ಪಡೆದಿದ್ದು, 8 GB RAM + 128 GB ವೇರಿಯಂಟ್‌ ಫೋನ್‌ 29,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ನಲ್ಲಿ ಲಭ್ಯ ಇತರೆ ಆಯ್ದ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ಆಫರ್‌ ಪಡೆದುಕೊಂಡರೆ, ಈ ಮೊಬೈಲ್‌ ಮತ್ತಷ್ಟು ರಿಯಾಯಿತಿಯಲ್ಲಿ ಲಭ್ಯ.

32ಎಂಪಿ ಸೆಲ್ಫಿ ಕ್ಯಾಮೆರಾದ ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಉಳಿತಾಯ ಖಚಿತ!

ಈ ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 8200 SoC ಪ್ರೊಸೆಸರ್‌ ನಲ್ಲಿ ಕೆಲಸ ನಿರ್ವಹಿಸಲಿದೆ. ಇದರ ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, 4,800 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಒಳಗೊಂಡಿದೆ. ಇನ್ನುಳಿದಂತೆ ಈ ಮೊಬೈಲ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಒಪ್ಪೋ ರೆನೋ 11 5G - ಫೀಚರ್ಸ್‌

ಒಪ್ಪೋ ರೆನೋ 11 5G ಮೊಬೈಲ್‌ 6.70 ಇಂಚಿನ OLED ಕರ್ವ್ಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇನ್ನು ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಒಳಗೊಂಡಿದೆ. ಇದರೊಂದಿಗೆ ಡಿಸ್‌ಪ್ಲೇ 950 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 1Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ.

ಒಪ್ಪೋದ ಈ ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 8200 SoC ಪ್ರೊಸೆಸರ್‌ ಪವರ್‌ ಪಡೆದಿದ್ದು, ಆಂಡ್ರಾಯ್ಡ್‌ 14 ಆಧಾರಿತ ಕಲರ್‌OS 14 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಹಾಗೂ 8 GB RAM + 128 GB ಆಂತರೀಕ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯ.

32ಎಂಪಿ ಸೆಲ್ಫಿ ಕ್ಯಾಮೆರಾದ ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಉಳಿತಾಯ ಖಚಿತ!

ಒಪ್ಪೋ ರೆನೋ 11 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ LYT600 ಸೆನ್ಸಾರ್‌ ಅನ್ನು ಪಡೆದಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ಇದ್ದು, ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.

ಒಪ್ಪೋ ರೆನೋ 11 5G ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಇದು 67W ಸೂಪರ್ ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್‌ ಪಡೆದಿದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, GPS/ A-GPS, NFC, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಹಾಗೆಯೇ ಒಪ್ಪೋ ರೆನೋ 11 5G ಸ್ಮಾರ್ಟ್‌ಫೋನ್‌ ಅಕ್ಸಿಲೆರೊಮೀಟರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸರ್, ಅಂಡರ್-ಸ್ಕ್ರೀನ್ ಪ್ರಾಕ್ಸಿಮಿಟಿ ಸೆನ್ಸಾರ್, ಗ್ರಾವಿಟಿ ಸೆನ್ಸಾರ್, ಕಲರ್ ಟೆಂಪರೇಚರ್ ಸೆನ್ಸಾರ್, ಐಆರ್ ಕಂಟ್ರೋಲ್ ಮತ್ತು ಗೈರೊಸ್ಕೋಪ್ ಪಡೆದಿದೆ.

Best Mobiles in India

English summary
OPPO Reno 11 5G received awesome price drop in india. check offer price and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+