Home
ಸುದ್ದಿಜಾಲ

ಒಪ್ಪೋದ ಈ 67W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯದ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಜನಪ್ರಿಯ ಇ ಕಾಮರ್ಸ್‌ ಎಂದೇ ಬಿಂಬಿತವಾಗಿರುವ ಫ್ಲಿಪ್‌ಕಾರ್ಟ್‌ ತಾಣವು ಮೊಬೈಲ್‌ಗಳಿಗೆ ಒಂದಿಲ್ಲೊಂದು ರಿಯಾಯಿತಿ ಲಭ್ಯ ಮಾಡುತ್ತಾ ಸಾಗಿದೆ. ಈ ತಾಣದಲ್ಲಿ ಅಗ್ಗದ ದರದ ಫೋನ್‌ ಸೇರಿದಂತೆ ಇತರೆ ಹೈ ಎಂಡ್‌ ಮೊಬೈಲ್‌ಗಳಿಗೂ ಭಾರೀ ರಿಯಾಯಿತಿ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಸದ್ಯ ಒಪ್ಪೋ ರೆನೋ 11 5G ಮೊಬೈಲ್‌ ಬಲು ಆಕರ್ಷಕ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಖುಷಿಯಿಂದ ಫೋನಿನತ್ತ ನೋಡುವಂತಾಗಿದೆ. ಅಂದಹಾಗೆ ಈ ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 8200 SoC ಪ್ರೊಸೆಸರ್‌ ಸೌಲಭ್ಯ ಪಡೆದಿದೆ.

ಹೌದು, ಒಪ್ಪೋ ರೆನೋ 11 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಶೇ. 26% ರಷ್ಟು ಭರ್ಜರಿ ಡಿಸ್ಕೌಂಟ್‌ ದರದಲ್ಲಿ ಕಾಣಬಹುದಾಗಿದೆ. ಈ ಮೊಬೈಲ್‌ನ 8GB RAM + 256GB ಸ್ಟೋರೇಜ್‌ ವೇರಿಯಂಟ್‌ 29,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಗ್ರಾಹಕರು ಆಯ್ದ ಕೆಲವು ಬ್ಯಾಂಕ್‌ಗಳ ಆಫರ್‌ ಕೂಡಾ ಪಡೆಯಲು ಅವಕಾಶ ಇದೆ.

ಒಪ್ಪೋದ ಈ 67W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯದ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಇನ್ನು ಈ ಫೋನ್‌ 12GB RAM ಮತ್ತು 256GB ಹಾಗೂ 8 GB RAM + 128 GB ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದರ ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದೆ. ಅಲ್ಲದೇ 4,800 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಒಳಗೊಂಡಿದೆ. ಇನ್ನುಳಿದಂತೆ ಒಪ್ಪೋ ರೆನೋ 11 5G ಮೊಬೈಲ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಒಪ್ಪೋ ರೆನೋ 11 5G - ಫೀಚರ್ಸ್‌

ಒಪ್ಪೋ ರೆನೋ 11 5G ಫೋನ್‌ 6.70 ಇಂಚಿನ OLED ಕರ್ವ್ಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇನ್ನು ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಒಳಗೊಂಡಿದೆ. ಇದರೊಂದಿಗೆ ಡಿಸ್‌ಪ್ಲೇ 950 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 1Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ.

ಒಪ್ಪೋ ರೆನೋ 11 5G ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 8200 SoC ಪ್ರೊಸೆಸರ್‌ ಪವರ್‌ ಪಡೆದಿದ್ದು, ಆಂಡ್ರಾಯ್ಡ್‌ 14 ಆಧಾರಿತ ಕಲರ್‌OS 14 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಹಾಗೂ 8 GB RAM + 128 GB ಆಂತರೀಕ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯ.

ಒಪ್ಪೋ ರೆನೋ 11 5G ಫೋನ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ LYT600 ಸೆನ್ಸಾರ್‌ ಅನ್ನು ಪಡೆದಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾ 32 ಮೆಗಾ ಪಿಕ್ಸೆಲ್ಇದ್ದು, ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.

ಒಪ್ಪೋ ರೆನೋ 11 5G ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಇದು 67W ಸೂಪರ್ ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್‌ ಪಡೆದಿದೆ. ಅಲ್ಲದೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, GPS/ A-GPS, NFC, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಒಪ್ಪೋ ರೆನೋ 11 5G ಫೋನ್‌ ಅಕ್ಸಿಲೆರೊಮೀಟರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸರ್, ಅಂಡರ್-ಸ್ಕ್ರೀನ್ ಪ್ರಾಕ್ಸಿಮಿಟಿ ಸೆನ್ಸಾರ್, ಗ್ರಾವಿಟಿ ಸೆನ್ಸಾರ್, ಕಲರ್ ಟೆಂಪರೇಚರ್ ಸೆನ್ಸಾರ್, ಐಆರ್ ಕಂಟ್ರೋಲ್ ಮತ್ತು ಗೈರೊಸ್ಕೋಪ್ ಪಡೆದಿದೆ.

Best Mobiles in India

English summary
OPPO Reno 11 5G receives huge price drop on flipkart website. check other details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+