ಮೊಬೈಲ್ ಮಾರುಕಟ್ಟೆಯಲ್ಲಿ ಇನ್ಮುಂದೆ ಒಪ್ಪೋ ರೆನೋ 11 ಪ್ರೊ ಅಬ್ಬರ! ಇದರಲ್ಲಿದೆ ಅತ್ಯಾಕರ್ಷಕ ಫೀಚರ್ಸ್!
ಮೊಬೈಲ್ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ತನ್ನದೇ ಆದ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. ನವೀನ ಮಾದರಿಯ ಟೆಕ್ನಾಲಜಿ, ಕ್ಯಾಮೆರಾ ಸೆಟ್‌ಅಪ್‌ನಿಂದಾಗಿ ಒಪ್ಪೋ ಫೋನ್‌ಗಳು ಗಮನಸೆಳೆದಿವೆ. ಇದೀಗ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಒಪ್ಪೋ ರೆನೋ 11 ಸರಣಿಯನ್ನು ಪರಿಚಯಿಸಿದೆ. ಇದು ಒಪ್ಪೋ ರೆನೋ 11 ಮತ್ತು ಒಪ್ಪೋ ರೆನೋ 11ಪ್ರೊ ಫೋನ್‌ಗಳನ್ನು ಒಳಗೊಂಡಿದೆ.
ಹೌದು, ಒಪ್ಪೋ ರೆನೋ 11 ಸರಣಿ ಟೆಕ್ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸರಣಿಯು ಇದೇ ವರ್ಷ ಮೇ ತಿಂಗಳಿನಲ್ಲಿ ಬಿಡುಗಡೆ ಆಗಿದ್ದ ರೆನೋ 10 ಸರಣಿಯ ಉತ್ತರಾಧಿಕಾರಿಯಾಗಿದೆ. ಇನ್ನು ಒಪ್ಪೋ ರೆನೋ 11 ಸರಣಿ ಫೋನ್‌ಗಳು ಆಂಡ್ರಾಯ್ಡ್ 14-ಆಧಾರಿತ ColorOS 14 ನಲ್ಲಿ ರನ್ ಆಗುತ್ತವೆ. ಈ ಸರಣಿಯಲ್ಲಿ ಟಾಪ್ ಮಾಡೆಲ್ ಎನಿಸಿಕೊಂಡಿರುವ ಒಪ್ಪೋ ರೆನೋ 11ಪ್ರೊ ಏನೆಲ್ಲಾ ಫೀಚರ್ಸ್ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 11 ಪ್ರೊ ಡಿಸ್‌ಪ್ಲೇ ಹೇಗಿದೆ?
ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ 6.74 ಇಂಚಿನ 1.5K OLED ಕರ್ವ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,240x2,772 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹಾಗೂ 1,600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಮಾತ್ರವಲ್ಲ ಈ ಡಿಸ್‌ಪ್ಲೇ 40Hz ವರೆಗೆ ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ತಲುಪಿಸಲು ಸ್ಕ್ರೀನ್ ಅನ್ನು ರೇಟ್ ಮಾಡಲಾಗಿದೆ.
ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ColorOS 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 24GB ವರೆಗೆ ವಿಸ್ತರಿಸಬಹುದು.

ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್
ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸೋನಿ IMX890 24mm ಫೋಕಲ್ ಲೆಂತ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ ಫೀಚರ್ಸ್
ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ಬೆಂಬಲದೊಂದಿಗೆ ಬರಲಿದೆ. ಜೊತೆಗೆ 48 ತಿಂಗಳ ಉಚಿತ ಬ್ಯಾಟರಿ ಬದಲಿ ಯೋಜನೆಯನ್ನು ನೀಡುತ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, GPS/ A-GPS, NFC, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸರ್, ಅಂಡರ್-ಸ್ಕ್ರೀನ್ ಪ್ರಾಕ್ಸಿಮಿಟಿ ಸೆನ್ಸಾರ್, ಗ್ರಾವಿಟಿ ಸೆನ್ಸಾರ್, ಕಲರ್ ಟೆಂಪರೇಚರ್ ಸೆನ್ಸಾರ್, ಐಆರ್ ಕಂಟ್ರೋಲ್ ಮತ್ತು ಗೈರೊಸ್ಕೋಪ್ ಹೊಂದಿದೆ. ಈ ಫೋನ್ ಅಂಡರ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರವೇ ಬಿಡುಗಡೆ ಆಗಿದೆ. ಆದರಿಂದ ಇದರ 12GB RAM + 256GB ಸ್ಟೋರೇಜ್ ಮಾದರಿಗೆ CNY 3,499 (ಸುಮಾರು 41,000ರೂ) ಬೆಲೆ ಹೊಂದಿದೆ. ಇನ್ನು 12GB RAM + 512GB ಸ್ಟೋರೇಜ್ ರೂಪಾಂತರದ ಬೆಲೆ CNY 3,799 (ಸುಮಾರು 44,000ರೂ)ಆಗಿದೆ. ಇದನ್ನು ಮೂನ್‌ಸ್ಟೋನ್, ಅಬ್ಸಿಡಿಯನ್ ಕಪ್ಪು ಮತ್ತು ವೈಡೂರ್ಯದ ಹಸಿರು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








