ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ! ಪ್ರೊಸೆಸರ್ ಯಾವುದು ಗೊತ್ತಾ?
ಒಪ್ಪೋ ಕಂಪೆನಿಯ ಫೋನ್‌ಗಳ ಬಗ್ಗೆ ಎಲ್ಲಿಲ್ಲದ ಕುತೂಹಲವಿರುತ್ತದೆ. ಇದೇ ಕಾರಣಕ್ಕೆ ಒಪ್ಪೋ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಬಿಡುಗಡೆಗೂ ಮುನ್ನವೇ ಸೋರಿಕೆಯಾಗಿ ಸದ್ದು ಮಾಡೋದು ಸಾಮಾನ್ಯ. ಅದರಂತೆ ಇದೀಗ ಒಪ್ಪೋ ರೆನೋ 11 ಸರಣಿ ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ.
ಹೌದು, ಒಪ್ಪೋ ರೆನೋ 11 ಸರಣಿ ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇದರಲ್ಲಿ ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ತನ್ನ ರಿಯರ್ ಪ್ಯಾನಲ್ ಹಾಗೂ ಪ್ರೊಸೆಸರ್ ವಿಚಾರವಾಗಿ ಸೌಂಡ್ ಮಾಡುವ ಸೂಚನೆ ನೀಡಿದೆ. ಹಾಗಾದ್ರೆ ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 11 ಡಿಸ್‌ಪ್ಲೇ ರಚನೆ
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ 6.78 ಇಂಚಿನ ಅಮೋಲೆಡ್ ಡಿಸ್‌ಪ್ಲೇಯೊಂದಿಗೆ ಬರಲಿದೆ. ಈ ಡಿಸ್‌ಪ್ಲೇ 1080 x 2412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಈ ಡಿಸ್‌ಪ್ಲೇ 394 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದ್ದು, 900 ನೀಟ್ಸ್ ಬ್ರೈಟ್ನೆಸ್ನೊಂದಿಗೆ ಬರಲಿದೆ. ಇದಲ್ಲದೆ 1400 ನೀಟ್ಸ್ ಗರಷ್ಠ ಬ್ರೈಟ್‌ನೆಸ್ ಬೆಂಬಲಿಸಲಿದೆ.
ಒಪ್ಪೋ ರೆನೋ 11 ಪ್ರೊಸೆಸರ್ ಯಾವುದು?
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಇನ್‌ಬಿಲ್ಟ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡುವ ಸಾಧ್ಯತೆಯನ್ನು ಸಹ ಆನ್‌ಲೈನ್ ವರದಿ ಹೇಳಿದೆ.

ಒಪ್ಪೋ ರೆನೋ 11 ಕ್ಯಾಮೆರಾ ಸೆಟ್‌ಅಪ್
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ. ಇದರೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.
ಒಪ್ಪೋ ರೆನೋ 11 ಬ್ಯಾಟರಿ ಮತ್ತು ಇತರೆ
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, ಬ್ಲೂಟೂತ್ v5.3, ವೈಫೈ, NFC, USB-C v2.0 ಅನ್ನು ಬೆಂಬಲಿಸಬಹುದು. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಅಕ್ಸಿಲೆರೋಮೀಟರ್ ಅನ್ನು ಬೆಂಬಲಿಸಲಿದೆ.

ಒಪ್ಪೋ ರೆನೋ 11 ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಇದು ಗ್ಲೂಬಲ್ ಹಾಗೂ ಭಾರತದ ಮಾರುಕಟ್ಟೆಯಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆಯಾ ಅನ್ನೋದು ಕೂಡ ಖಚಿತವಾಗಿಲ್ಲ.
ಇನ್ನು ಇತ್ತೀಚಿಗೆ ಒಪ್ಪೋ ಕಂಪೆನಿ ಒಪ್ಪೋ A2 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 680 ನೀಟ್ಸ್ ಬ್ರೈಟ್ನೆಸ್ನೊಂದಿಗೆ ಬರಲಿದೆ. ಇದು ಆಕ್ಟಾ ಕೋರ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವುದಿಲ್ಲ ಎನ್ನಲಾಗಿದೆ.


Click it and Unblock the Notifications