Oppo: ಒಪ್ಪೋ ರೆನೋ 11 ಫೋನ್ ಬಿಡುಗಡೆ ದಿನಗಣನೆ! ಫೀಚರ್ಸ್ ನಿರೀಕ್ಷೆ ಏನು?
ಭಾರತದಲ್ಲಿ ಈ ವರ್ಷ ಬಿಡುಗಡೆ ಆಗಲಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒಪ್ಪೋ ರೆನೋ 11 ಸರಣಿ ಕೂಡ ಒಂದಾಗಿದೆ. ಈಗಾಗಲೇ ಚೀನಾ ಮಾರುಕಟ್ಟೆಯಲ್ಲಿ ಹಲ್‌ಚಲ್ ಸೃಷ್ಟಿಸಿರುವ ಈ ಸರಣಿಯು ಭಾರತದಲ್ಲಿ ಹವಾ ಕ್ರಿಯೆಟ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಜನವರಿ 10 ರಂದು ಭಾರತದಲ್ಲಿ ಬಿಡುಗಡೆ ಆಗೋದು ಪಕ್ಕಾ ಆಗಿದೆ.
ಹೌದು, ಒಪ್ಪೋ ರೆನೋ 11 (Oppo Reno 11) ಸರಣಿಯು ಭಾರತದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸರಣಿಯಲ್ಲಿ ಒಪ್ಪೋ ರೆನೋ 11, ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಲಿದೆ ಎಂದು ವರದಿಯಾಗಿದೆ. ಇದರಲ್ಲಿ ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 11 ಡಿಸ್‌ಪ್ಲೇ ರಚನೆ ನಿರೀಕ್ಷೆ?
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ 6.70 ಇಂಚಿನ OLED ಕರ್ವ್ಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇದರೊಂದಿಗೆ ಡಿಸ್‌ಪ್ಲೇ 950 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 1Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್ ಅನ್ನು ಒಳಗೊಂಡಿರಲಿದೆ.
ಒಪ್ಪೋ ರೆನೋ 11 ಪ್ರೊಸೆಸರ್ ಯಾವುದು?
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ವೇಗದಲ್ಲಿ ಬರಲಿದ್ದು, ಆಂಡ್ರಾಯ್ಡ್ 14 ಆಧಾರಿತ ColorOS 14ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಇದರೊಂದಿಗೆ 12GB ವರ್ಚುವಲ್ ಮೆಮೊರಿಯನ್ನು ವಿಸ್ತರಿಸಲು ಅವಕಾಶ ನೀಡಲಿದೆ ಎಂದು ವರದಿಯಾಗಿದೆ.

ಒಪ್ಪೋ ರೆನೋ 11 ಕ್ಯಾಮೆರಾ ರಚನೆ ಹೇಗಿದೆ?
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ Sony LYT600 ಸೆನ್ಸಾರ್ ಅನ್ನು ಹೊಂದಿದೆ. ಇದು 26mm ಫೋಕಲ್ ಲೆಂತ್ ಬೆಂಬಲಿಸಲಿದೆ. ಎರಡನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32-ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ಒಪ್ಪೋ ರೆನೋ 11 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಚೀನಾ ಆವೃತ್ತಿಯು 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದೇ ಮಾದರಿಯಲ್ಲಿ ಭಾರತಕ್ಕೆ ಎಂಟ್ರಿ ನೀಡಬಹುದು ಎನ್ನಲಾಗಿದೆ. ಇದು 67W ಸೂಪರ್ ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, GPS/ A-GPS, NFC, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸರ್, ಅಂಡರ್-ಸ್ಕ್ರೀನ್ ಪ್ರಾಕ್ಸಿಮಿಟಿ ಸೆನ್ಸಾರ್, ಗ್ರಾವಿಟಿ ಸೆನ್ಸಾರ್, ಕಲರ್ ಟೆಂಪರೇಚರ್ ಸೆನ್ಸಾರ್, ಐಆರ್ ಕಂಟ್ರೋಲ್ ಮತ್ತು ಗೈರೊಸ್ಕೋಪ್ ಹೊಂದಿದೆ.

ಒಪ್ಪೋ ರೆನೋ 11 ಬೆಲೆ ನಿರೀಕ್ಷೆ?
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 256GB ಸ್ಟೋರೇಜ್ ಆವೃತ್ತಿಯು ಚೀನಾದಲ್ಲಿ CNY 2,499 (ಸುಮಾರು 29,000ರೂ)ಬೆಲೆಯನ್ನು ಹೊಂದಿದೆ. ಹೆಚ್ಚು ಕಡಿಮೆ ಇದೇ ಬೆಲೆ ರೂಪಾಂತರದಲ್ಲಿ ಭಾರತಕ್ಕೆ ಎಂಟ್ರಿ ನೀಡುವ ನಿರೀಕ್ಷೆ ಇಡಲಾಗಿದೆ. ಭಾರತದಲ್ಲಿ ಇದರ ಕಲರ್ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.


Click it and Unblock the Notifications