ಬಹು ನಿರೀಕ್ಷಿತ ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಬಿಡುಗಡೆ! ಯುವಕರೇ ಮೇನ್ ಟಾರ್ಗೆಟ್!
ಒಪ್ಪೋ ರೆನೋ 11 ಸರಣಿ ಅನಾವರಣಗೊಂಡ ಮರುಕ್ಷಣವೇ ಒಪ್ಪೋ ರೆನೋ 11 ಫೋನ್ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿದೆ. ಕೆಲವು ತಿಂಗಳುಗಳಿಂದ ನಿರೀಕ್ಷೆ ಹುಟ್ಟುಹಾಕಿದ್ದ ಒಪ್ಪೋ ರೆನೋ 11 ಫೋನ್ ಇದೀಗ ಅಧಿಕೃತವಾಗಿ ಲಾಂಚ್ ಆಗಿದೆ. ಇದರ ಸ್ಟೈಲಿಶ್ ಲುಕ್ ಹಾಗೂ ಜಬರ್ದಸ್ತ್ ಫೀಚರ್ಸ್ ಇನ್ನಷ್ಟು ಸದ್ದು ಮಾಡುವ ಸೂಚನೆ ನೀಡಿದೆ.
ಹೌದು, ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 11 ಡಿಸ್‌ಪ್ಲೇ ರಚನೆ ವಿನ್ಯಾಸ
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ 6.70 ಇಂಚಿನ OLED ಕರ್ವ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 950 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 1Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
ಒಪ್ಪೋ ರೆನೋ 11 ಪ್ರೊಸೆಸರ್ ಯಾವುದು?
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ColorOS 14ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ 12GB ವರ್ಚುವಲ್ ಮೆಮೊರಿಯನ್ನು ವಿಸ್ತರಿಸಲು ಅವಕಾಶ ನೀಡಿದೆ.

ಒಪ್ಪೋ ರೆನೋ 11 ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ Sony LYT600 ಸೆನ್ಸಾರ್ ಅನ್ನು ಹೊಂದಿದೆ. ಇದು 26mm ಫೋಕಲ್ ಲೆಂತ್ ಬೆಂಬಲಿಸಲಿದೆ. ಎರಡನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32-ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ಒಪ್ಪೋ ರೆನೋ 11 ಬ್ಯಾಟರಿ ಮತ್ತು ಇತರೆ
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ಸೂಪರ್ ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, GPS/ A-GPS, NFC, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸರ್, ಅಂಡರ್-ಸ್ಕ್ರೀನ್ ಪ್ರಾಕ್ಸಿಮಿಟಿ ಸೆನ್ಸಾರ್, ಗ್ರಾವಿಟಿ ಸೆನ್ಸಾರ್, ಕಲರ್ ಟೆಂಪರೇಚರ್ ಸೆನ್ಸಾರ್, ಐಆರ್ ಕಂಟ್ರೋಲ್ ಮತ್ತು ಗೈರೊಸ್ಕೋಪ್ ಹೊಂದಿದೆ. ಈ ಫೋನ್ ಅಂಡರ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಒಪ್ಪೋ ರೆನೋ 11 ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 11 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 256GB ಸ್ಟೋರೇಜ್ ಆವೃತ್ತಿಗಾಗಿ CNY 2,499 (ಸುಮಾರು 29,000ರೂ)ಬೆಲೆಯನ್ನು ಹೊಂದಿದೆ. ಇದು 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 2,799 (ಸುಮಾರು 31,000ರೂ) ಬೆಲೆಯನ್ನು ಹೊಂದಿದೆ. ಆದರೆ 12GB RAM + 512GB ಸಂಗ್ರಹಣೆಯ ಆಯ್ಕೆಯುCNY 2,999 (ಸುಮಾರು 35,000ರೂ) ಬೆಲೆಯನ್ನು ಹೊಂದಿದೆ. ಇದು ಫ್ಲೋರೈಟ್ ಬ್ಲೂ, ಮೂನ್‌ಸ್ಟೋನ್ ಮತ್ತು ಅಬ್ಸಿಡಿಯನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.


Click it and Unblock the Notifications








