ಒಪ್ಪೋ ರೆನೋ 12 5G ಖರೀದಿಸಲು ಆಸಕ್ತ ಇಲ್ಲವೇ?..ಹಾಗಿದ್ರೆ, ಈ ಫೋನ್ ಗಮನಿಸಿ!
ಜನಪ್ರಿಯ ಮೊಬೈಲ್ ಸಂಸ್ಥೆಗಳಲ್ಲಿ ಒಂದಾದ ಒಪ್ಪೋ (Oppo) ಹೊಸದಾಗಿ ಬಿಡುಗಡೆ ಮಾಡಿರುವ ಒಪ್ಪೋ ರೆನೋ 12 5G (Oppo Reno 12 5G) ಮೊಬೈಲ್ ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಕೆಲವರಿಗೆ ಈ ಫೋನಿನ AI ಸೌಲಭ್ಯಗಳು, ಲುಕ್ ಹಾಗೂ ಕ್ಯಾಮೆರಾ ಫೀಚರ್ಸ್ ನೋಡಿದಾಗ ಈ ಫೋನ್ ಖರೀದಿಸಬೇಕೆ ಎಂದೆನಿಸಬಹುದು. ಅದಾಗ್ಯೂ, ನೂತನ ಒಪ್ಪೋ ರೆನೋ 12 5G ಖರೀದಿಸಲು ಇಷ್ಟವಿಲ್ಲದಿದ್ದರೆ, ಈ ಪರ್ಯಾಯ ಫೋನ್‌ಗಳ ಆಯ್ಕೆ ಇದೆ.
ಹೌದು, ಒಪ್ಪೋ ರೆನೋ 12 5G ಮೊಬೈಲ್ ಮಾರುಕಟ್ಟೆಯಲ್ಲಿ ಗಮನ ಸೆಳೆಯುತ್ತಿದೆ. ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300-ಎನರ್ಜಿ SoC ಪ್ರೊಸೆಸರ್ ಸಪೋರ್ಟ್ ಪಡೆದಿದ್ದು, ಜೊತೆಗೆ 5,000 mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಜೊತೆಗೆ ಇನ್ನಷ್ಟು ಆಕರ್ಷಕ AI ಫೀಚರ್ಸ್ ಸಹ ಇವೆ. ಒಂದು ವೇಳೆ ಒಪ್ಪೋ ರೆನೋ 12 5G ನಿಮಗೆ ಸೂಕ್ತವಲ್ಲ ಎನಿಸಿದರೆ, ಅದೇ ಬೆಲೆಯ ವಿಭಾಗದಲ್ಲಿ ಕೆಲವು ಪರ್ಯಾಯ ಫೋನ್‌ಗಳ ಆಯ್ಕೆ ಸಹ ಇದೆ. ಈ ಲೇಖನದಲ್ಲಿ ತಿಳಿಸಲಾದ ಕೆಲವು ಅತ್ಯುತ್ತಮ ಪರ್ಯಾಯ ಫೋನ್‌ಗಳ ಬಗ್ಗೆ ನೋಡಿ.

ಒನ್‌ಪ್ಲಸ್ ನಾರ್ಡ್ 4 ಮೊಬೈಲ್
ಒನ್‌ಪ್ಲಸ್ ನಾರ್ಡ್ 4 ಸ್ಮಾರ್ಟ್‌ಫೋನ್ 6.74 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1240 x 2772 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಜೊತೆಗೆ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7+ ಜೆನ್ 3 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಆಧಾರಿತ OxygenOS 14 ನಲ್ಲಿ ಕೆಲಸ ನಿರ್ವಹಿಸಲಿದೆ.
ಅಲ್ಲದೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ. ಹಾಗೆಯೇ 5,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದರೊಂದಿಗೆ 100W ವೈಯರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಕೂಡಾ ಇವೆ.
ರಿಯಲ್‌ಮಿ GT 6T ಮೊಬೈಲ್
ರಿಯಲ್‌ಮಿ GT 6T ಫೋನ್ 6.78 ಇಂಚಿನ 3D LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2,789 x 1,264 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 7+ ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ.
ಇದರೊಂದಿಗೆ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಹಾಗೆಯೇ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಪೊಕೊ F6 ಮೊಬೈಲ್
ಪೊಕೊ F6 ಮೊಬೈಲ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2712 x 1220 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 OS ಸಪೋರ್ಟ್ ಸಹ ಇದೆ.
ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಕ್ಯಾಮೆರಾ ಸಾಮರ್ಥ್ಯದಲ್ಲಿ ಇದೆ. 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರೊಂದಿಗೆ 90W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.


Click it and Unblock the Notifications








