ಇಂದು Oppo Reno 12 5G ಸೇಲ್ ಪ್ರಾರಂಭ; ಆಕರ್ಷಕ AI ಫೀಚರ್ಸ್..ಆಫರ್ ಸಹ ಇದೆ!
ಒಪ್ಪೋ (Oppo) ಮೊಬೈಲ್ ಸಂಸ್ಥೆಯ ನೂತನ ಒಪ್ಪೋ ರೆನೋ 12 5G (Oppo Reno 12 5G) ಲಾಂಚ್ ಬಳಿಕ ತನ್ನ ಕ್ಯಾಮೆರಾ ಹಾಗೂ AI ಸೌಲಭ್ಯಗಳ ಮೂಲಕ ಮಾರುಕಟ್ಟೆಯಲ್ಲಿ ಸಖತ್ ಸದ್ದು ಮಾಡಿದೆ. ಇನ್ನು ಈ ಫೋನ್ ಇಂದು (ಜುಲೈ 25 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300-ಎನರ್ಜಿ SoC ಪ್ರೊಸೆಸರ್ ಪಡೆದಿದ್ದು, ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ.
ಹೌದು, ಒಪ್ಪೋ ಸಂಸ್ಥೆಯ ಒಪ್ಪೋ ರೆನೋ 12 5G (Oppo Reno 12 5G) ಮೊಬೈಲ್ ಇಂದು ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಸೇಲ್ ಶುರು ಮಾಡಲಿದೆ. ಈ ಫೋನಿನ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಲ್ಫಿ ಕ್ಯಾಮೆರಾವು ಸಹ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.

ಇನ್ನು ಈ ಮೊಬೈಲ್ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಅಲ್ಲದೇ ಇದು 80W ಸೂಪರ್ವೂಕ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದ್ದು, ಇನ್ನು ಈ ಸ್ಮಾರ್ಟ್‌ಫೋನಿನ ಪ್ರಾರಂಭಿಕ ವೇರಿಯಂಟ್ ಬೆಲೆಯು 32,999ರೂ. ಗಳು ಪ್ರೈಸ್‌ಟ್ಯಾಗ್ ಪಡೆದಿದೆ. ಇನ್ನುಳಿದಂತೆ ರೆನೋ 12 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಒಪ್ಪೋ ರೆನೋ 12 5G - ಫೀಚರ್ಸ್
ಒಪ್ಪೋ ರೆನೋ 12 5G ಮೊಬೈಲ್ 6.70 ಇಂಚಿನ OLED ಕರ್ವ್ಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹಾಗೂ 394ppi ಪಿಕ್ಸೆಲ್ ಸಾಂದ್ರತೆ ಜೊತೆಗೆ 20:9 ಆಕಾರ ಅನುಪಾತವನ್ನು ಪಡೆದುಕೊಂಡಿದೆ. ಅಲ್ಲದೇ ಇದು ಕಾರ್ನಿಂಗ್ Gorilla Glass 7i ರಕ್ಷಣೆ ಪಡೆದಿದೆ.
ಒಪ್ಪೋ ರೆನೋ 12 5G ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300-ಎನರ್ಜಿ SoC ಪ್ರೊಸೆಸರ್ ಹೊಂದಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ ColorOS 14 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ವೇರಿಯಂಟ್ ಅನ್ನು ಪಡೆದಿದೆ. ಇದಲ್ಲದೆ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 1 TB ವರೆಗೂ ವಿಸ್ತರಿಸಲು ಅವಕಾಶ ನೀಡಿದೆ.
ಒಪ್ಪೋ ರೆನೋ 12 5G ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ ಸಹ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇನ್ನು ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ.
ಒಪ್ಪೋ ರೆನೋ 12 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ನೀಡಿದ್ದು, ಇದಕ್ಕೆ ಪೂರಕವಾಗಿ 80W ಸೂಪರ್ವೂಕ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ 5.4, IR ಬ್ಲಾಸ್ಟರ್ ಮತ್ತು Wi-Fi 6 ಆಯ್ಕೆಗಳು ಇವೆ. ಹಾಗೆಯೇ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಅನ್ನು ಹೊಂದಿದ್ದು, ಫೇಸ್ ಅನ್‌ಲಾಕ್ ಫೀಚರ್ ಅನ್ನು ಸಹ ಸಪೋರ್ಟ್ ಮಾಡುತ್ತದೆ. ಇನ್ನು ಈ ಫೋನ್ ಆಸ್ಟ್ರೋ ಸಿಲ್ವರ್, ಮ್ಯಾಟ್ ಬ್ರೌನ್ ಮತ್ತು ಸನ್ಸೆಟ್ ಪೀಚ್ ಕಲರ್ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








