Just In
Don't Miss
- News
ಏಪ್ರಿಲ್ 1 ರಂದೇ ಪಠ್ಯಪುಸ್ತಕ ಪೂರೈಕೆಗೆ ಡಿಸಿಎಂ ಸೂಚನೆ
- Movies
'ಮನೆ ಮಾರಾಟಕ್ಕಿಟ್ಟ' ನಿರ್ದೇಶಕನ ಜೊತೆಗೆ ರಾಧಿಕಾ ಕುಮಾರಸ್ವಾಮಿ ಸಿನಿಮಾ.!
- Sports
ಐಎಸ್ಎಲ್ 2019: ಒಡಿಶಾ ಎಫ್ಸಿಗೆ ಪುಣೆಯಲ್ಲಿ ಅಮೂಲ್ಯ ಜಯ
- Lifestyle
ಗುರುವಾರದ ದಿನ ಭವಿಷ್ಯ 12-12-2019
- Finance
ಚಿನ್ನ ಖರೀದಿಸುವ ಮುನ್ನ ಚಿನ್ನದ ಶುದ್ಧತೆಯನ್ನು ಪರಿಶೀಲಿಸುವುದು ಹೇಗೆ?
- Automobiles
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಟಾಟಾ ಆಲ್ಟ್ರೊಜ್ ಕಾರು
- Education
ಸ್ಪೋರ್ಟ್ಸ್ ಅಥಾರಿಟಿಯಲ್ಲಿ 130 ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 40,000/-ರೂ ವೇತನ
- Travel
ದಕ್ಷಿಣ ಭಾರತಕ್ಕೆ ಪ್ರವಾಸ ಹೋದ್ರೆ ಈ ಅತ್ಯುತ್ತಮ ಪಾನೀಯಗಳು, ತಿಂಡಿಗಳು ಮತ್ತು ಭಕ್ಷ್ಯಗಳನ್ನೂ ಟ್ರೈ ಮಾಡಿ!
ಒಪ್ಪೊ 'ರೆನೋ 2Z 'ಮತ್ತು 'ರೆನೋ 2F' ಫೋನ್ಗಳ ಬೆಲೆ ಇಳಿಕೆ!
ಒಪ್ಪೊ ಕಂಪನಿಯು ಇತ್ತೀಚಿಗಷ್ಟೆ ರೆನೋ ಬ್ರ್ಯಾಂಡ್ನಲ್ಲಿ ಹೊಸದಾಗಿ ಒಪ್ಪೊ 'ರೆನೋ 2Z 'ಮತ್ತು ಒಪ್ಪೊ 'ರೆನೋ 2F' ಹೆಸರಿನ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದ್ದು, ಅಗತ್ಯ ಫೀಚರ್ಸ್ಗಳಿಂದ ಗ್ರಾಹಕರ ಗಮನ ಸೆಳೆದಿವೆ. ಕಂಪನಿಯು ಇದೀಗ ಈ ಎರಡು ಸ್ಮಾರ್ಟ್ಫೋನ್ಗಳ ಬೆಲೆಯಲ್ಲಿ ಭಾರಿ ಇಳಿಕೆ ಮಾಡಿದೆ. 48ಎಂಪಿ ಕ್ಯಾಮೆರಾ ಸೆನ್ಸಾರ್ ಮತ್ತು VOOC 3.0 ಫಾಸ್ಟ್ ಚಾರ್ಜಿಂಗ್ ಮೇನ್ ಹೈಲೈಟ್ಸ್ಗಳಾಗಿವೆ.

ಹೌದು, ಒಪ್ಪೊ ತನ್ನ 'ರೆನೋ 2Z' ಮತ್ತು 'ರೆನೋ 2F' ಸ್ಮಾರ್ಟ್ಫೋನ್ಗಳ ಬೆಲೆಯಲ್ಲಿ 2,000ರೂ.ಗಳನ್ನು ಕಡಿತ ಮಾಡಿದೆ. 29,990ರೂ.ಗಳ 'ರೆನೋ 2Z' ಸ್ಮಾರ್ಟ್ಫೋನ್ ಇದೀಗ 27,990ರೂ.ಗಳಿಗೆ ಲಭ್ಯವಾಗಲಿದೆ. ಮತ್ತು 25,990 ಪ್ರೈಸ್ಟ್ಯಾಗ್ನಲ್ಲಿದ್ದ 'ರೆನೋ 2F' ಸ್ಮಾರ್ಟ್ಫೋನ್ 23,990ರೂ.ಗಳಿಗೆ ಲಭ್ಯವಾಗಲಿದೆ. ಗ್ರಾಹಕರು ಅಮೆಜಾನ್ ತಾಣದಲ್ಲಿ ಖರೀದಿಸಬಹುದಾಗಿದೆ. ಹಾಗಾದರೇ 'ರೆನೋ 2Z' ಮತ್ತು 'ರೆನೋ 2F' ಸ್ಮಾರ್ಟ್ಫೋನ್ಗಳ ಫೀಚರ್ಸ್ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೊ ರೆನೋ 2Z ಫೀಚರ್ಸ್
1,080 x 2,340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿರುವ ಈ ಫೋನಿನ ಡಿಸ್ಪ್ಲೇಯ ಅನುಪಾತವು 19.5:9 ಆಗಿದೆ. ಡಿಸ್ಪ್ಲೇ ಮತ್ತು ಬಾಹ್ಯ ಬಾಡಿಯ ನಡುವಿನ ಅಂತರ ಶೇ.91.6% ರಷ್ಟಾಗಿದ್ದು, ಮೀಡಿಯಾ ಟೆಕ್ ಹಿಲಿಯೊ P90 SoC ಪ್ರೊಸೆಸರ್ ಬಲ ಪಡೆದಿದೆ. 8GB RAM ಮತ್ತು 128GB ಸ್ಟೋರೇಜ್ ಸ್ಥಳಾವಕಾಶವನ್ನು ನೀಡಲಾಗಿದ್ದು, VOOC 3.0 ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ್ ಬೆಂಬಲಿತವಾದ 4,000mAh ಬ್ಯಾಟರಿ ಬ್ಯಾಕ್ಅಪ್ ಪಡೆದಿದೆ. ಜೊತೆಗೆ 48+8+2ಎಂಪಿ ಸೆನ್ಸಾರ್ನ ತ್ರಿವಳಿ ಕ್ಯಾಮೆರಾ ಆಯ್ಕೆ ಒಳಗೊಂಡಿದೆ. ಸೆಲ್ಫಿಗಾಗಿ 16ಎಂಪಿ ಕ್ಯಾಮೆರಾ ಒದಗಿಸಲಾಗಿದೆ.

ಒಪ್ಪೊ ರೆನೋ 2F ಫೀಚರ್ಸ್
ಈ ಸ್ಮಾರ್ಟ್ಫೋನ್ ರೆನೋ 2Z ಫೋನಿನಂತೆ 1,080 x 2,340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿರುವ ಈ ಫೋನಿನ ಡಿಸ್ಪ್ಲೇಯ ಅನುಪಾತವು 19.5:9 ಆಗಿದೆ. ಡಿಸ್ಪ್ಲೇ ಮತ್ತು ಬಾಹ್ಯ ಬಾಡಿಯ ನಡುವಿನ ಅಂತರ ಶೇ.91.6% ರಷ್ಟಾಗಿದ್ದು, ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ P70 SoC ಪ್ರೊಸೆಸರ್ ಶಕ್ತಿಯೊಂದಿಗೆ, 8GB RAM ಮತ್ತು 128GB ಸ್ಟೋರೇಜ್ ಸ್ಥಳಾವಕಾಶವನ್ನು ಒಳಗೊಂಡಿದೆ. VOOC 3.0 ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ್ ಬೆಂಬಲಿತವಾದ 4,000mAh ಬ್ಯಾಟರಿ ಬ್ಯಾಕ್ಅಪ್ ಪಡೆದಿದೆ. ಜೊತೆಗೆ 48+8+2ಎಂಪಿ ಸೆನ್ಸಾರ್ನ ತ್ರಿವಳಿ ಕ್ಯಾಮೆರಾ ಆಯ್ಕೆ ಒಳಗೊಂಡಿದೆ. ಸೆಲ್ಫಿಗಾಗಿ 16ಎಂಪಿ ಕ್ಯಾಮೆರಾ ಒದಗಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೊ ರೆನೋ 2Z ಸ್ಮಾರ್ಟ್ಫೋನ್ ಬ್ಲ್ಯಾಕ್, ವೈಟ್ ಮತ್ತು ಪೋಲಾರ್ ಶೆಡ್ ಬಣ್ಣಗಳ ಆಯ್ಕೆಯಲ್ಲಿ ದೊರೆಯಲಿದ್ದು, 27,990ರೂ.ಗಳ ಪ್ರೈಸ್ಟ್ಯಾಗ್ನಲ್ಲಿ ಲಭ್ಯವಾಗಲಿದೆ. ಹಾಗೆಯೇ ಇನ್ನು ಒಪ್ಪೊ ರೆನೋ 2F ಸ್ಮಾರ್ಟ್ಫೋನ್ 23,990ರೂ.ಗಳಿಗೆ ಲಭ್ಯವಾಗಲಿದೆ. ಗ್ರಾಹಕರು ಅಮೆಜಾನ್ ಇ-ಕಾಮರ್ಸ್ ತಾಣದಲ್ಲಿ ಖರೀದಿಸಬಹುದಾಗಿದೆ. ಫ್ಲಿಪ್ಕಾರ್ಟ್ ಮತ್ತು ಇತರೆ ಇ-ಕಾಮರ್ಸ್ ತಾಣಗಳು ದರ ಇಳಿಕೆ ಇನ್ನು ಲಭ್ಯವಾಗಿಲ್ಲ.
-
22,990
-
29,999
-
14,999
-
28,999
-
34,999
-
1,09,894
-
15,999
-
36,591
-
79,999
-
71,990
-
14,999
-
9,999
-
64,900
-
34,999
-
15,999
-
25,999
-
46,669
-
19,999
-
17,999
-
9,999
-
22,160
-
18,200
-
18,270
-
22,300
-
33,530
-
14,030
-
6,990
-
20,340
-
12,790
-
7,090