Just In
Don't Miss
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 28ರ ಚಿನ್ನ, ಬೆಳ್ಳಿ ದರ
- Automobiles
ಬ್ಯಾಂಕುಗಳಿಗೆ ವಂಚಿಸಿ ಐಷಾರಾಮಿ ಕಾರುಗಳನ್ನು ಖರೀದಿಸಿದ್ದ ಖದೀಮರು ಕೊನೆಗೂ ಅಂದರ್
- Sports
ಸೌರವ್ ಗಂಗೂಲಿಗೆ ಎರಡನೇ ಆ್ಯಂಜಿಯೋಪ್ಲಾಸ್ಟಿ ಯಶಸ್ವಿ, 2 ಸ್ಟಂಟ್ ಅಳವಡಿಕೆ
- News
ಚಿನ್ನದ ಬೆಲೆ ಮತ್ತಷ್ಟು ಇಳಿಕೆ: ಜನವರಿ 28ರ ಬೆಲೆ ಹೀಗಿದೆ
- Lifestyle
ಶನಿ ಸಂಚಾರ 2021: ನಿಮ್ಮ ರಾಶಿಯ ಮೇಲೆ ವರ್ಷ ಪೂರ್ತಿ ಇರಲಿದೆ ಶನಿಯ ಪ್ರಭಾವ
- Movies
ಸುದೀಪ್ ಪುತ್ರಿಯ ಹಾಡು ವೈರಲ್: ಸಾನ್ವಿಯ ಸುಮಧುರ ಕಂಠಕ್ಕೆ ನಟ ಜೆಕೆ ಫಿದಾ
- Education
KVAFSU Bidar Recruitment 2021: 9 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಪ್ಪೊ ರೆನೋ3 ಸ್ಮಾರ್ಟ್‌ಫೋನ್‌ನ ಫೀಚರ್ಸ್ ಲೀಕ್!
ಸ್ಮಾರ್ಟ್‌ಫೋನ್ ಜಗತ್ತಿನಲ್ಲಿ ದಿನನಿತ್ಯ ಹೊಸ ಸ್ಮಾರ್ಟ್‌ಫೋನ್‌ಗಳ ಭರಾಟೆ ನಡೆಯುತ್ತಲೇ ಇರುತ್ತೆ. ಸ್ಮಾರ್ಟ್‌ಫೋನ್ ಕಂಪೆನಿಗಳು ಯುವಜನತೆಯ ಅವಶ್ಯಕತೆಗಳಿಗೆ ತ್ಕಕಂತೆ ಹೊಸ ವಿನ್ಯಾಸದೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಲಾಂಚ್ ಮಾಡ್ತಿವೆ. ಸದ್ಯ ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ಒಪ್ಪೊ ಕೂಡ ತನ್ನ ಹೊಸ ಆವೃತ್ತಿಯಾದ ಒಪ್ಪೊ ರೆನೋ3 ಸ್ಮಾರ್ಟ್‌ಫೋನ್ ಬಿಡುಗಡೆಗೆ ವೇದಿಕೆ ಸಿದ್ದ ಮಾಡ್ತಿದೆ.

ಸ್ಮಾರ್ಟ್‌ಫೋನ್
ಹೌದು ಚೀನಾ ಮೂಲದ ಸ್ಮಾರ್ಟ್‌ಫೋನ್ ಕಂಪೆನಿ ಒಪ್ಪೊ ತನ್ನ ಹೊಸ ರೆನೋ 3 ಸ್ಮಾರ್ಟ್‌ಫೋನ್ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಸಜ್ಜಾಗಿದೆ. ಆದ್ರೆ ಒಪ್ಪೊ ರೆನೋ 3 ಸ್ಮಾರ್ಟ್‌ಫೋನ್ ನ ವಿಶೇಷತೆಗಳೇನು ಅನ್ನೊದು ಈಗಾಗ್ಲೆ ಆನ್‌ಲೈನ್‌ನಲ್ಲಿ ಲೀಕ್ ಆಗಿವೆ. ಲೀಕ್ ಆದ ಮಾಹಿತಿ ಪ್ರಕಾರ ಕ್ವಾಲ್ಕಾಮ್‌ನ ಹೊಸ ಸ್ನಾಪ್‌ಡ್ರಾಗನ್ 765 ಪ್ರೊಸೆಸರ್ ಹೊಂದಿರುವ ಸ್ಮಾರ್ಟ್ ಎಂದು ಹೇಳಲಾಗ್ತಿದೆ. ಹಾಗಾದ್ರೆ ಒಪ್ಪೋ ರೆನೋ3 ಇನ್ನಷ್ಟು ವಿಶೇಷತೆಗಳೇನು ಅನ್ನೊದನ್ನ ಲೇಖನದಲ್ಲಿ ತಿಳಿಯೋಣ ಬನ್ನಿ.

ಡಿಸ್‌ಪ್ಲೇ ಮಾದರಿ
ಒಪ್ಪೊ ರೆನೋ3ಸ್ಮಾರ್ಟ್‌ಫೋನ್ 6.4-ಇಂಚಿನ ಅಮೋಲೆಡ್ ಫುಲ್ ಎಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ ಎಂದು ನಂಬಲಾಗಿದ್ದು. ಜೊತೆಗೆ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ ಎನ್ನಲಾಗ್ತಿದೆ. ಅಲ್ಲದೆ ವಿಡಿಯೋ ವಿಕ್ಷಣೆಗೆ ಉತ್ತಮವಾಗಿದೆ ಎನ್ನಲಾಗಿದೆ.

ಪ್ರೊಸೆಸರ್ ಸಾಮರ್ಥ್ಯ
ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765 ಪ್ರೊಸೆಸರ್ ಹೊಂದಿದ್ದು ಅಂಡ್ರಾಯ್ಡ್9ಒಎಸ್‌ನ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ನೀಡಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಶೇಖರಣಾ ಸಾಮರ್ಥ್ಯ ವಿಸ್ತರಿಸುವ ಆಯ್ಕೆಯನ್ನು ಸಹ ಒಪ್ಪೋ ನೀಡಿದೆ ಎನ್ನಲಾಗಿದೆ..

ಕ್ಯಾಮೆರಾ ಸಾಮರ್ಥ್ಯ
ಒಪ್ಪೊ ರೆನೋ3 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಎರಡನೇ ಕ್ಯಾಮೆರಾ 13ಮೆಗಾಫಿಕ್ಸೆಲ್ ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿರಬಹುದು ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಸೆಲ್ಫಿ ಕ್ಯಾಮೆರಾ 16 ಮೆಗಾಪಿಕ್ಸೆಲ್ ಹೊಂದಿರುತ್ತದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ 3,935mAh ಬ್ಯಾಟರಿ ಪ್ಯಾಕ್ ಆಪ್ ಹೊಂದಿರುವ ಸಾಧ್ಯೆತ ಇದೆ ಎನ್ನಲಾಗಿದೆ. ಆದಾಗ್ಯೂ, ಒಪ್ಪೋ ರೆನೋ 3 ಅನ್ನು 4,025 mAh ಬ್ಯಾಟರಿಯಿಂದ ಬೆಂಬಲಿಸಲಾಗುವುದು ಎಂದು ಜಿಎಸ್ಮರೆನಾ ಹೇಳಿಕೊಂಡಿದೆ. ಸಧ್ಯ ಲೀಕ್ ಆದ ಮಾಹಿತಿ ಪ್ರಕಾರ, ಒಪ್ಪೋ ರೆನೋ 3 ಸ್ಮಾರ್ಟ್‌ಫೋನ್‌ನ ಬೆಲೆ 36990ರೂ ಎನ್ನಲಾಗ್ತಿದ್ದು ವೈಟ್ ಮತ್ತು ಬ್ಲೂ ಬಣ್ಣಗಳಲ್ಲಿ ಖರೀದಿಸಲು ಲಭ್ಯವಿರುತ್ತದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190