ಮತ್ತೆ ದಿಢೀರ್ ಬೆಲೆ ಇಳಿಕೆ ಕಂಡ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್!
ಒಪ್ಪೋ ಕಂಪೆನಿಯ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಈಗಾಗಲೇ ಬೆಲೆ ಕಡಿತ ಕಂಡಿದ್ದು, ರಿಯಾಯಿತಿ ದರದಲ್ಲಿ ಮಾರಾಟ ಕಂಡಿದೆ. ಆದ್ರೆ ಇದೀಗ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ ಮತ್ತೊಮ್ಮೆ ಬೆಲೆ ಇಳಿಕೆ ಕಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ P95 SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಹೊಂದಿದೆ.

ಒಪ್ಪೋ ಕಂಪನಿಯ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯಲ್ಲಿ 2000ರೂ. ಕಡಿತವಾಗಿದ್ದು, 25,990ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು 8GB RAM + 256GB ಆಂತರಿಕ ಸ್ಟೋರೇಜ್ ವೇರಿಯಂಟ್ ಫೋನ್ ಬೆಲೆಯು 29,990ರೂ.ಗಳಾಗಿದೆ.ವೈಟ್, ಬ್ಲ್ಯಾಕ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಈ ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ 1800x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ ಡಿಸ್‌ಪ್ಲೇಯನ್ನ ಹೊಂದಿದೆ. ಇದು 6.4 ಇಂಚಿನ ಸೂಪರ್ ಅಮೋಲೆಡ್ E3 ಫುಲ್ ಎಚ್‌ಡಿ ಡಿಸ್‌ಪ್ಲೇ ಆಗಿದೆ. ಇನ್ನು ಇದರ ಸ್ಕ್ರೀನ್ ಟು ಬಾಡಿ 91.5% ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 411 ppi ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿದೆ. ಜೊತೆಗೆ ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ v5 ಅನ್ನು ಹೊಂದಿದೆ.

ಪ್ರೊಸೆಸರ್ ಬಲ
ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ P95 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ
ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಬ್ಲ್ಯಾಕ್ ಆಂಡ್ ವೈಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ಮೊದಲನೇ ಕ್ಯಾಮೆರಾ 44 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ 4,025mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 30W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.0, GPS, FM ರೇಡಿಯೋ, ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್-ಸಿ ಪೊರ್ಟ್, ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೇರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಜಿರೋಸ್ಕೋಪ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.


Click it and Unblock the Notifications




