Home
ಸುದ್ದಿಜಾಲ

ಬೆಲೆ ಇಳಿಕೆ ಕಂಡ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌!

ಒಪ್ಪೋ ಕಂಪೆನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ ಇದೀಗ ಭಾರತದಲ್ಲಿ ಬೆಲೆ ಇಳಿಕೆ ಕಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ P95 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಹೊಂದಿದೆ.

ರೆನೋ 3 ಪ್ರೊ

ಒಪ್ಪೋ ಕಂಪನಿಯ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ ಬೆಲೆಯಲ್ಲಿ 2000ರೂ. ಕಡಿತವಾಗಿದೆ. ಹೈ ಎಂಡ್‌ ಸ್ಟೋರೇಜ್‌ನ ವೇರಿಯಂಟ್‌ಗೆ ಮಾತ್ರ ಬೆಲೆ ಇಳಿಕೆ ಮಾಡಿದೆ. ಹೀಗಾಗಿ 31,990 ರೂ ಪ್ರೈಸ್‌ಟ್ಯಾಗ್‌ ಹೊಂದಿದ್ದ, 8GB RAM + 128GB ಆಂತರಿಕ ಸ್ಟೋರೇಜ್‌ ವೇರಿಯಂಟ್‌ 29,990ರೂ.ಗಳಾಗಿದೆ. ಈ ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ 1800x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ ಡಿಸ್‌ಪ್ಲೇಯನ್ನ ಹೊಂದಿದೆ. ಇದು 6.4 ಇಂಚಿನ ಸೂಪರ್‌ ಅಮೋಲೆಡ್ E3 ಫುಲ್‌ ಎಚ್‌ಡಿ ಡಿಸ್‌ಪ್ಲೇ ಆಗಿದೆ. ಇನ್ನು ಇದರ ಸ್ಕ್ರೀನ್‌ ಟು ಬಾಡಿ 91.5% ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 411 ppi ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದೆ. ಜೊತೆಗೆ ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್‌ ಗೋರಿಲ್ಲಾ ಗ್ಲಾಸ್‌ v5 ಅನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ P95 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ

ಕ್ವಾಡ್ ಕ್ಯಾಮೆರಾ

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಟೆಲಿಫೋಟೋ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಬ್ಲ್ಯಾಕ್‌ ಆಂಡ್‌ ವೈಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ಮೊದಲನೇ ಕ್ಯಾಮೆರಾ 44 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ 4,025mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 30W ಫಾಸ್ಟ್‌ ಚಾರ್ಜಿಂಗ್‌ ಟೆಕ್ನಾಲಜಿಯನ್ನ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ v5.0, GPS, FM ರೇಡಿಯೋ, ಹಾಟ್‌ಸ್ಪಾಟ್‌, ಯುಎಸ್‌ಬಿ ಟೈಪ್‌-ಸಿ ಪೊರ್ಟ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೇರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಜಿರೋಸ್ಕೋಪ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

Best Mobiles in India

English summary
The Oppo Reno 3 Pro was priced at Rs 31,990 for the base variant of 8GB RAM + 128GB of internal storage.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+