Home
ಸುದ್ದಿಜಾಲ

ಒಪ್ಪೋ ರೆನೋ 3 ಪ್ರೊ ಫೋನ್‌ ಲಾಂಚ್‌!..ಡ್ಯುಯೆಲ್‌ ಸೆಲ್ಫಿ ವಿಶೇಷ!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ಮೊದಲಿನಿಂದಲೂ ಆಕರ್ಷಕ ಫೀಚರ್ಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಾ ಬಂದಿದೆ. ಹೊಸತನಕ್ಕೆ ಹೆಸರಾದ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸಂಚಲನ ಸೃಷ್ಟಿಸಿರುವ ಒಪ್ಪೋ ಕಂಪೆನಿ ಇದೀಗ ಭಾರತದ ಮಾರುಕಟ್ಟೆಗೆ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈಗಾಗ್ಲೆ ಚೀನಾದಲ್ಲಿ ಬಿಡುಗಡೆಯಾಗಿದ್ದ ಈ ಸ್ಮಾರ್ಟ್‌ಫೋನ್‌ ಇದೀಗ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ.

ಹೌದು

ಹೌದು, ಚೀನಾ ಮೂಲದ ಜನ್ರಪಿಯ ಸ್ಮಾರ್ಟ್‌ಫೋನ್‌ ಕಂಪೆನಿ ಒಪ್ಪೋ ತನ್ನ ಹೊಸ ಆವೃತ್ತಿಯ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. 6.4 ಇಂಚಿನ ಡಿಸ್‌ಪ್ಲೇ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಗೋರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಅಲ್ಲದೆ ಮೀಡಿಯಾ ಟೆಕ್‌ P95 SoC ಪ್ರೊಸೆಸರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಈ ಸ್ಮಾರ್ಟ್‌ಫೋನ್‌ 1800x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ ಡಿಸ್‌ಪ್ಲೇಯನ್ನ ಹೊಂದಿದೆ. ಇದು 6.4 ಇಂಚಿನ ಸೂಪರ್‌ ಅಮೋಲೆಡ್ E3 ಫುಲ್‌ ಎಚ್‌ಡಿ ಡಿಸ್‌ಪ್ಲೇ ಆಗಿದೆ. ಇನ್ನು ಇದರ ಸ್ಕ್ರೀನ್‌ ಟು ಬಾಡಿ 91.5% ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 411 ppi ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದೆ. ಜೊತೆಗೆ ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್‌ ಗೋರಿಲ್ಲಾ ಗ್ಲಾಸ್‌ v5 ಅನ್ನು ಹೊಂದಿದ್ದು, ಉತ್ತಮ ಡಿಸ್‌ಪ್ಲೇ ವಿನ್ಯಾಸ ಹೊಂದಿದೆ. ಇನ್ನು ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ P95 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಟೆಲಿಫೋಟೋ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಬ್ಲ್ಯಾಕ್‌ ಆಂಡ್‌ ವೈಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ಮೊದಲನೇ ಕ್ಯಾಮೆರಾ 44 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ 4,025mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 30W ಫಾಸ್ಟ್‌ ಚಾರ್ಜಿಂಗ್‌ ಟೆಕ್ನಾಲಜಿಯನ್ನ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ v5.0, GPS, FM ರೇಡಿಯೋ, ಹಾಟ್‌ಸ್ಪಾಟ್‌, ಯುಎಸ್‌ಬಿ ಟೈಪ್‌-ಸಿ ಪೊರ್ಟ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೇರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಜಿರೋಸ್ಕೋಪ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೊ ರೆನೋ 3 ಪ್ರೊ ಸದ್ಯ ಭಾರತದ ಮಾರುಕಟ್ಟೆಗೆ ಎಂಟ್ರ ನೀಡಿದ್ದು, ಇದರ ಬೆಲೆ 29,990 ರೂ ಆಗಿದೆ. ಅಲ್ಲದೆ ಐಸಿಐಸಿಐ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌, ಹೆಚ್‌ಡಿಎಫ್‌ಸಿ ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಖರೀದಿ ಮಾಡಿದರೆ 10% ರಿಯಾಯಿತಿಯ್ನನ ಪಡೆಯಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅರೋರಾ ಬ್ಲೂ, ಮಿಡ್‌ನೈಟ್ ಬ್ಲ್ಯಾಕ್, ಸ್ಕೈ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಇದೇ ಮಾರ್ಚ್ 6 ರಿಂದ ಎಲ್ಲಾ ಪ್ರಮುಖ ಆನ್‌ಲೈನ್ ಮತ್ತು ಆಫ್‌ಲೈನ್ ಮಳಿಗೆಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
The Oppo Reno 3 Pro launch comes after the company launched multiple teasers to create a buzz around the smartphone. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+