Home
ಸುದ್ದಿಜಾಲ

Oppo Reno 3 Pro: ಫೆಬ್ರವರಿಗೆ ಭಾರತಕ್ಕೆ ಎಂಟ್ರಿ ನೀಡಲಿದೆ ಒಪ್ಪೋ ರೆನೊ3 ಪ್ರೊ!

ಈಗಾಗ್ಲೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಒಪ್ಪೋ ಕಂಪೆನಿ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ರೆನೊ 3ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಗೆ ಲಾಂಚ್‌ ಮಾಡಲು ಸಿದ್ದತೆ ನಡೆಸಿದೆ. ಕಳೆದ ವರ್ಷದ ಡಿಸೆಂಬರ್‌ನಲ್ಲಷ್ಟೇ ಚೀನಾ ಮಾರುಕಟ್ಟೆಯಲ್ಲಿ ರೆನೊ 3ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದ ಒಪ್ಪೋ ಇದೇ ಪೆಬ್ರವರಿ ತಿಂಗಳಲ್ಲಿ ಭಾರತೀಯ ಗ್ರಾಹಕರಿಗೆ ಪರಿಚಯಿಸಲು ಸಿದ್ದವಾಗಿದೆ.

ಹೌದು

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ಒಪ್ಪೋ ಹೊಸ ಸ್ಮಾರ್ಟ್‌ಫೋನ್‌ ಒಪ್ಪೊ ರೆನೊ 3ಪ್ರೊ ಸ್ಮಾರ್ಟ್‌ಫೋನ್‌ ಅನ್ನ ಭಾರತದಲ್ಲಿ ಲಾಂಚ್‌ ಮಾಡಲಿದೆ. ಒಪ್ಪೊ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯೆಲ್-ಸೆಲ್ಫಿ ಕ್ಯಾಮೆರಾ ಮಾದರಿಯನ್ನ ಹೊಂದಿದ್ದು, ಈ ಸ್ಮಾರ್ಟ್‌ಫೋನ್‌ 5G ಮತ್ತು 4G ನೆಟ್‌ವರ್ಕ್‌ಗಳಿಗೆ ಬಂಬಲಿಸಲಿದೆ. ಈಗಾಗ್ಲೆ ಚೀನಾದಲ್ಲಿ 5G ಮಾದರಿಯಲ್ಲಿ ಲಾಂಚ್‌ ಆಗಿದ್ದರೂ ಸಹ ಭಾರತದಲ್ಲಿ 5G ನೆಟ್‌ವರ್ಕ್‌ ಇಲ್ಲದ ಕಾರಣ 4G ಯಲ್ಲಿ ಬೆಂಬಲಿಸಲಿದೆ ಎಂದು ಹೇಳಲಾಗ್ತಿದೆ. ಸದ್ಯ ಬಿಡುಗಡೆಯಾಗಲಿರುವ ಒಪ್ಪೋ ರೆನೊ 3 ಪ್ರೊ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳೀಯೋಣ ಬನ್ನಿ

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಒಳಗೊಂಡಿರುವ 6.5-ಇಂಚಿನ ಫುಲ್‌ ಎಚ್‌ಡಿ + ಒಎಲ್ಇಡಿ ಡಿಸ್‌ಪ್ಲೇಯನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್‌ ಗೋರಿಲ್ಲಾ ಗ್ಲಾಸ್‌5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ 1,100 ನೀಟ್ಸ್‌ ಬ್ರೈಟ್‌ನೆಶ್‌ ಅನ್ನ ಸಹ ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್, ಎಚ್‌ಡಿಆರ್ 10 + ಬೆಂಬಲ ಮತ್ತು ಸ್ಕ್ರೀನ್-ಟು-ಬಾಡಿ 92.1 % ರೇಶಿಯೋ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್‌ 765 G ಪ್ರೊಸೆಸರ್‌ ಹೊಂದಿದ್ದು,ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 5 ಜಿ ಮೋಡೆಮ್ ಅನ್ನು ಹೊಂದಿದ್ದು, 12GB RAM ಮತ್ತು 256GB ಶೇಖರಣಾ ಸಾಮರ್ಥ್ಯವನ್ನ ಹೊಂದಿದ್ದು, ಯುಎಫ್ಎಸ್ 2.1 ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮೊದಲನೇ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೋನಿ IMX586 ಸೆನ್ಸಾರ್‌ ಜೊತೆಗೆ ಒಐಎಸ್‌ ಹೊಂದಿದ್ದು, ಎರಡನೇ ಕ್ಯಾಮೆರಾ 13ಮೆಗಾಪಿಕ್ಸೆಲ್‌ರ ಸೆನ್ಸಾರ್‌ಹೊಂದಿರುವ ಟೆಲಿಫೋಟೊ ಲೆನ್ಸ್‌ ಹೊಂದಿದ್ದು, 5x ಆಪ್ಟಿಕಲ್‌ ಜೂಮ್‌ ಸಾಮರ್ಥ್ಯವನ್ನ ಒಳಗೊಂಡಿದೆ. ಮೂರನೇ ಕ್ಯಾಮೆರಾ 8ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್‌ ಲೆನ್ಸ್‌ ಸೆನ್ಸಾರ್‌ ಹೊಂದಿದ್ದು, ನಾಲ್ಕನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಮೊನೊಕ್ರೋಮ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮೊದಲನೇ ಕ್ಯಾಮೆರಾ 44 ಮೆಗಾಪಿಕ್ಸೆಲ್‌ ಹಾಗೂ ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,025mAh ಬ್ಯಾಟರಿ ಪ್ಯಾಕ್ಆಪ್‌ ಹೊಂದಿದ್ದು, 30W ಫಾಸ್ಟ್‌ ಚಾರ್ಜಿಂಗ್‌ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಬ್ಲೂಟೂತ್‌ 5.1 ಬೆಂಬಲಿಸಲಿದ್ದು, ವೈಫೈ, ಯುಎಸ್‌ಬಿ ಫೋರ್ಟ್‌ ಅನ್ನ ಬೆಂಬಲಿಸಲಿದೆ. ಸದ್ಯ ಚೀನಾ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನ್‌ 5G ನೆಟ್‌ವರ್ಕ್‌ ಬೆಂಬಲಿಸುವ ಸ್ಮಾರ್ಟ್‌ಫೋನ್‌ ಆಗಿದೆ, ಆದರೆ ಭಾರತದಲ್ಲಿ ಇನ್ನು 5G ನೆಟ್‌ವರ್ಕ್‌ ಇಲ್ಲದ ಕಾರಣ 4Gಮಾದರಿಯಲ್ಲಿ ಮಾರುಕಟ್ಟೆಗೆ ಬರಲಿದೆ ಎಂದು ಹೇಳಲಾಗಿದೆ.

Best Mobiles in India

English summary
Oppo Reno 3 Pro tipped to reach Indian market in February.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+