ಮತ್ತೆ ಭಾರಿ ಬೆಲೆ ಇಳಿಕೆ ಕಂಡ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌!

|

ಒಪ್ಪೋ ಕಂಪೆನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ ಇದೀಗ ಭಾರತದಲ್ಲಿ ಈಗಾಗಲೇ ಬೆಲೆ ಇಳಿಕೆ ಕಂಡಿದ್ದು, ಇದೀಗ ಮತ್ತೊಮ್ಮೆ ಬೆಲೆ ಕಡಿತ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ P95 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಹೊಂದಿದೆ.

ಒಪ್ಪೋ ರೆನೋ 3 ಪ್ರೊ

ಒಪ್ಪೋ ಕಂಪನಿಯ ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್‌ ಮಾದರಿಗಳ ಬೆಲೆಯಲ್ಲಿಯೂ ಇಳಿಕೆ ಆಗಿದೆ. 8GB + 128GB ವೇರಿಯಂಟ್‌ನಲ್ಲಿ 2,000ರೂ. ದರ ಕಡಿತವಾಗಿದ್ದು, 8GB + 256GB ವೇರಿಯಂಟ್‌ ಮಾದರಿಯಲ್ಲಿ 3,000ರೂ. ಇಳಿಕೆ ಆಗಿದೆ. ಹೀಗಾಗಿ 8GB + 128GB ವೇರಿಯಂಟ್ ಈಗ 27,990ರೂ.ಗಳಿಗೆ ಲಭ್ಯ ಹಾಗೂ 8GB + 256GB ವೇರಿಯಂಟ್‌ ಸದ್ಯ 29,990ರೂ. ಪ್ರೈಸ್‌ಟ್ಯಾಗ್ ಹೊಂದಿದೆ. ಈ ಸ್ಮಾರ್ಟ್‌ಫೋನಿನ ಇನ್ನಿತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ 1800x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ ಡಿಸ್‌ಪ್ಲೇಯನ್ನ ಹೊಂದಿದೆ. ಇದು 6.4 ಇಂಚಿನ ಸೂಪರ್‌ ಅಮೋಲೆಡ್ E3 ಫುಲ್‌ ಎಚ್‌ಡಿ ಡಿಸ್‌ಪ್ಲೇ ಆಗಿದೆ. ಇನ್ನು ಇದರ ಸ್ಕ್ರೀನ್‌ ಟು ಬಾಡಿ 91.5% ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 411 ppi ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದೆ. ಜೊತೆಗೆ ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್‌ ಗೋರಿಲ್ಲಾ ಗ್ಲಾಸ್‌ v5 ಅನ್ನು ಹೊಂದಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ P95 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ

ಕ್ವಾಡ್ ಕ್ಯಾಮೆರಾ

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಟೆಲಿಫೋಟೋ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಬ್ಲ್ಯಾಕ್‌ ಆಂಡ್‌ ವೈಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ಮೊದಲನೇ ಕ್ಯಾಮೆರಾ 44 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ ರೆನೋ 3 ಪ್ರೊ ಸ್ಮಾರ್ಟ್‌ಫೋನ್‌ 4,025mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 30W ಫಾಸ್ಟ್‌ ಚಾರ್ಜಿಂಗ್‌ ಟೆಕ್ನಾಲಜಿಯನ್ನ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ v5.0, GPS, FM ರೇಡಿಯೋ, ಹಾಟ್‌ಸ್ಪಾಟ್‌, ಯುಎಸ್‌ಬಿ ಟೈಪ್‌-ಸಿ ಪೊರ್ಟ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೇರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಜಿರೋಸ್ಕೋಪ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

Best Mobiles in India

English summary
The new prices will be reflected on Amazon, offline stores and other online websites.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X