ಶೀಘ್ರದಲ್ಲೇ ಒಪ್ಪೋ ರೆನೋ 4 ಮತ್ತು ರೆನೋ 4 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಇನ್ನ ಪ್ರತಿ ಭಾರಿಯು ಹೊಸ ಮಾದರಿಯ ಫೀಚರ್ಸ್‌ಗಳನ್ನ ಪರಿಚಯಿಸುವಲ್ಲಿ ಒಪ್ಪೋ ಕಂಪೆನಿ ಪ್ರಸಿದ್ಧಿಯನ್ನ ಪಡೆದುಕೊಂಡಿದ್ದು, ಇದೀಗ ತನ್ನ ರೆನೊ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಹೌದು, ಒಪ್ಪೋ ಕಂಪೆನಿ ತನ್ನ ಒಪ್ಪೋ ರೆನೋ 4 ಮತ್ತು ರೆನೋ 4 ಪ್ರೊ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಜೂನ್ 5 ರಂದು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇನ್ನು ಒಪ್ಪೋ ಕಂಪೆನಿ ತನ್ನ ಅಧಿಕೃತ ಟೀಸರ್ ಚಿತ್ರದ ಮೂಲಕ ಹೊಸ ಸರಣಿಯ ಸ್ಮಾರ್ಟ್‌ಫೋನ್ ಬಿಡುಗಡೆಯ ದಿನಾಂಕವನ್ನ ಖಚಿತಪಡಿಸಿದೆ. ಜೊತೆಗೆ ಈಗಾಗಲೇ ರೆನೋ 4 ಸರಣಿಯ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಏನು ಅನ್ನೊದು ಆನ್‌ಲೈನ್‌ನಲ್ಲಿ ಲೀಕ್ ಆಗಿತ್ತು. ಸದ್ಯ ಬಿಡುಗಡೆಯ ದಿನಾಂಕ ಹತ್ತಿರವಾಗುತ್ತಿದ್ದ ಹಾಗೇ ಮಾರುಕಟ್ಟೆಯಲ್ಲಿ ರೆನೋ 4 ಸ್ಮಾರ್ಟ್‌ಫೋನ್ ಬಗ್ಗೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಒಪ್ಪೋ ರೆನೋ 4 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ
ಒಪ್ಪೋ ರೆನೋ 4 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಡಿಸ್‌ಪ್ಲೇಯನ್ನ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇಯು ಆಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಡಿಸ್‌ಪ್ಲೇಯು 409ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಒಪ್ಪೋ ರೆನೋ 4 ಸ್ಮಾರ್ಟ್‌ಫೋನ್ ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 765G ಪ್ರೊಸೆಸರ್ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಅಥವಾ 12GB RAM ಮತ್ತು 128GB ಅಥವಾ 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರುವ ಸಾಧ್ಯತೆ ಇದೆ.

ಒಪ್ಪೋ ರೆನೋ 4 ಸ್ಮಾರ್ಟ್‌ಫೋನ್ ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನ ಹೊಂದಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನ ಹೊಂದಿರಲಿದೆ ಎಂದು ಹೇಳಲಾಗ್ತಿದೆ.

ಒಪ್ಪೋ ರೆನೋ 4 ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ 65W ವೇಗವ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಜಿಪಿಎಸ್, NFC ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗ್ತಿದೆ. ಇದರ ಬೆಲೆ ಬಗ್ಗೆ ಯಾವುದೇ ಮಾಹಿತಿ ಇನ್ನು ತಿಳಿದು ಬಂದಿಲ್ಲ.

ಒಪ್ಪೋ ರೆನೋ 4 ಪ್ರೊ ಸ್ಮಾರ್ಟ್‌ಫೋನ್
ಒಪ್ಪೋ ರೆನೋ 4 ಪ್ರೊ ಸ್ಮಾರ್ಟ್‌ಫೋನ್ 6.55 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 765G ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನುನಿಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೊನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ ಹಾಗೂ ಲಭ್ಯತೆ ಬಗ್ಗೆ ಮಾಹಿತಿ ಲಬ್ಯವಾಗಿಲ್ಲ.


Click it and Unblock the Notifications




