ಭಾರತದಲ್ಲಿ ಒಪ್ಪೋ ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೊನ್‌ಗಳಿಂದ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಒಪ್ಪೋ ತನ್ನ ರೆನೋ ಸರಣಿಯಲ್ಲಿ ಸಹ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿತ್ತು. ಇದೀಗ ತನ್ನ ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಇನ್ನು ಹೆಚ್ಚಿನ ಸ್ಕ್ರೀನ್ ರಿಫ್ರೆಶ್ ರೇಟ್‌ನೊಂದಿಗೆ ಭಾರತದಲ್ಲಿ ಪರಿಚಯಿಸಲು ಸಿದ್ದತೆ ನಡೆಸಿದೆ ಎಂದು ಹೇಳಲಾಗ್ತಿದೆ.

ಸ್ಮಾರ್ಟ್‌ಫೋನ್‌

ಹೌದು, ಭಾರತದ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೊನ್‌ಗಳನ್ನ ಪರಿಚಯಸಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ ಆಗಿ ಒಪ್ಪೊ ಗುರುತಿಸಿಕೊಂಡಿದೆ. ಈಗಾಗಲೇ 90Hz ರಿಫ್ರೆಶ್ ರೇಟ್‌ ಹೊಂದಿರುವ ರೆನೊ 4 ಪ್ರೊ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಬಿಡುಗಡೆ ಆಗಿದೆ. ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಇದೇ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪ್ರೀಮಿಯಂ ವಿಭಾಗದಲ್ಲಿ ಲಭ್ಯವಾಗಲಿದೆ ಎಂದು ಸಹ ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನ ಹೊಂದಿರಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಸದ್ಯ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದ್ದು, ಫುಲ್‌ ಹೆಚ್‌ಡಿ + ರೆಸಲ್ಯೂಶನ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಇನ್‌ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಆಧಾರಿತ ಕಲರ್‌ಒಎಸ್‌ 7.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 8GB RAM ಅಥವಾ 12GB RAM ಮತ್ತು 128GB ಅಥವಾ 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನಿಡಲಾಗಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 32 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೊ ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌,ವೈಫೈ, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸರಿಸುಮಾರು 40,500 ರೂ.ಗೆ ಲಬ್ಯವಾಗುವ ನಿರೀಕ್ಷೆ ಇದೆ.

Best Mobiles in India

English summary
The latest Reno series launched in China few weeks back, and runs on ColorOS 7.2 version based on Android 10.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X