Home
ಸುದ್ದಿಜಾಲ

ಒಪ್ಪೋ ರೆನೋ 4 & 4 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್‌!

ಒಪ್ಪೋ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿರುವ ಒಪ್ಪೋ ಕಂಪೆನಿ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಮಾರುಕಟ್ಟೆಯಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಒಪ್ಪೋ ಕಂಪೆನಿಯ ತನ್ನ ಬಹು ನಿರೀಕ್ಷಿತ ಒಪ್ಪೋ ರೆನೋ 4 ಪ್ರೊ ಮತ್ತು ಒಪ್ಪೋ ರೆನೋ 4 ಸ್ಮಾರ್ಟ್‌ಫೋನ್‌ ಅನ್ನು ಬಿಡುಗೆಡ ಮಾಡಿದೆ.

ಒಪ್ಪೋ

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ತನ್ನ ಹೊಸ ಒಪ್ಪೋ ರೆನೋ 4 ಪ್ರೊ ಮತ್ತು ಒಪ್ಪೋ ರೆನೋ 4 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಜೊತೆಗೆ ಲೇಸರ್ ಡಿಟೆಕ್ಷನ್ ಆಟೋ-ಫೋಕಸ್ ಲೆನ್ಸ್ ಅನ್ನು ಸಹ ಒಳಗೊಂಡಿವೆ. ಇದಲ್ಲದೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿನ್ಯಾಸ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಒಪ್ಪೋ ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಒಪ್ಪೋ ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದ್ದು, ಇದು ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು 402PPI ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿದೆ.

ಒಪ್ಪೋ ರೆನೋ 4 ಪ್ರೊ ಪ್ರೊಸೆಸರ್‌

ಒಪ್ಪೋ ರೆನೋ 4 ಪ್ರೊ ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು,ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡುವ ಅವಕಾಶವನ್ನ ನೀಡಲಾಗಿಲ್ಲ.

ಒಪ್ಪೋ ರೆನೋ 4 ಪ್ರೊ ಕ್ಯಾಮೆರಾ ವಿನ್ಯಾಸ

ಒಪ್ಪೋ ರೆನೋ 4 ಪ್ರೊ ಕ್ಯಾಮೆರಾ ವಿನ್ಯಾಸ

ಒಪ್ಪೋ ರೆನೊ 4 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಒಪ್ಪೋ ರೆನೋ 4 ಪ್ರೊ ಬ್ಯಾಟರಿ ಮತ್ತು ಇತರೆ

ಒಪ್ಪೋ ರೆನೋ 4 ಪ್ರೊ ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 65W ಸೂಪರ್‌ವಿಒಸಿ 2.0 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್,
5G ನೆಟ್‌ವರ್ಕ್‌, ವೈ-ಫೈ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಒಪ್ಪೋ ರೆನೋ 4 ಡಿಸ್‌ಪ್ಲೇ

ಒಪ್ಪೋ ರೆನೋ 4 ಡಿಸ್‌ಪ್ಲೇ

ಇನ್ನು ಒಪ್ಪೋ ರೆನೋ 4 6.4-ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 765G SoC ಪ್ರೊಸೆಸರ್‌ ಅನ್ನು ಹೊಂದಿದೆ. ಅಲ್ಲದೆ ಇದು ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ಓಎಸ್ನಲ್ಲಿ ಸಹ ಕಾರ್ಯನಿರ್ವಹಿಸುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ.ಅಲ್ಲದೆ ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 65W ಸೂಪರ್ ವೂಕ್ 2.0 ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಒಪ್ಪೋ ರೆನೋ 4 ಪ್ರೊ 8GB RAM + 128GB ಶೇಖರಣಾ ಆಯ್ಕೆಗೆ CNY 3,799 (ಸರಿಸುಮಾರು ರೂ .40,500) ಮತ್ತು 12GB RAM + 256GB ಶೇಖರಣಾ ಆಯ್ಕೆಗೆ CNY 4,299 (ಸರಿಸುಮಾರು ರೂ. 45,800)ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ ಬ್ಲೂ, ಸ್ಪಾರ್ಕ್ಲಿಂಗ್ ರೆಡ್, ಸ್ಪೇಸ್ ಬ್ಲ್ಯಾಕ್ ಮತ್ತು ಸ್ಪೇಸ್ ವೈಟ್ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ.

ಒಪ್ಪೊ ರೆನೋ 4, ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ಆಯ್ಕೆಗೆ CNY 2,999 (ಸುಮಾರು ರೂ. 32,000), ಮತ್ತು 8GB RAM + 256GB ಶೇಖರಣಾ ಆಯ್ಕೆಗೆ CNY 3,299 (ಸುಮಾರು ರೂ. 35,200) ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಗ್ಯಾಲಕ್ಟಿಕ್ ಬ್ಲೂ, ಸ್ಪೇಸ್ ಬ್ಲ್ಯಾಕ್ ಮತ್ತು ಸ್ಪೇಸ್ ವೈಟ್ ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಜೂನ್ 12 ರಿಂದ ಮಾರಾಟವಾಗಲಿದೆ.

Best Mobiles in India

English summary
Oppo Reno 4 Pro and Oppo Reno 4 phones have launched in China.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+