ದೇಶಿ ಮಾರುಕಟ್ಟೆಯಲ್ಲಿ ಬಹು ನಿರೀಕ್ಷಿತ ಒಪ್ಪೋ ರೆನೊ 4 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ !

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ತನ್ನ ಒಪ್ಪೋ ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ರೆನೋ 3ಪ್ರೊ ಸ್ಮಾರ್ಟ್‌ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಪಂಚ್‌-ಹೋಲ್‌ ಡಿಸ್‌ಪ್ಲೇ ವಿನ್ಯಾಸ ಮತ್ತು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಸದ್ಯ ಒಪ್ಪೊ ರೆನೋ 4ಪ್ರೊ ಸ್ಮಾರ್ಟ್‌ಫೋನ್‌ 65W ಸೂಪರ್‌VOOC 2.0 ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನ ಹೊಂದಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ತನ್ನ ಒಪ್ಪೋ ರೆನೊ 4 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 720G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಕಲರ್ಓಎಸ್ 7.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಒಪ್ಪೋ ರೆನೊ 4 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 3D ಬಾರ್ಡರ್‌ಲೆಸ್‌ ಸೆನ್ಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಯನ್ನು ಹೊಂದಿದೆ. ಜೊತೆಗೆ 90Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಕಲರ್ಓಎಸ್ 7.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ. ಅಲ್ಲದೆ ಇದು ಮಲ್ಟಿ-ಕೂಲಿಂಗ್ ಸಿಸ್ಟ್‌ಮ್‌ ಅನ್ನು ಹೊಂದಿದೆ. ಇದು ಶಾಖವನ್ನು ಉತ್ತಮವಾಗಿ ಹರಡಲು ಗ್ರ್ಯಾಫೈಟ್ ಟ್ಯೂಬ್, ಗ್ರ್ಯಾಫೈಟ್ ಶೀಟ್ ಮತ್ತು ತಾಮ್ರದ ಹಾಳೆಯ ಸಂಯೋಜನೆಯನ್ನು ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಒಪ್ಪೊ ರೆನೋ 4 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX 586 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಶೂಟರ್ ಅನ್ನು ಸಹ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX 616 ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಐ ಕಲರ್ ಪೋರ್ಟ್ರೇಟ್, ನೈಟ್ ಫ್ಲೇರ್ ಪೋರ್ಟ್ರೇಟ್ ಮತ್ತು ಅಲ್ಟ್ರಾ ಡಾರ್ಕ್ ಮೋಡ್ ಸೇರಿದಂತೆ ಅನೇಕ ಕ್ಯಾಮೆರಾ ಫೀಚರ್ಸ್‌ಗಳನ್ನು ಒದಗಿಸಿದೆ. ಜೊತೆಗೆ 720p ರೆಸಲ್ಯೂಶನ್‌ನಲ್ಲಿ 960fps AI ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ಆಯ್ಕೆಯೂ ಇದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 65W ಸೂಪರ್ ವೂಕ್ 2.0 ಮೂಲಕ ವೇಗವಾಗಿ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಿ ಲೋಡೆಡ್‌ ಮಾಡಲಾದ ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಸಹ ನೀಡಲಾಗಿದೆ. ಇದು ಬಳಕೆದಾರರಿಗೆ 1.5 ಗಂಟೆಗಳ ಕಾಲ ವಾಟ್ಸಾಪ್‌ನಲ್ಲಿ ಚಾಟ್ ಮಾಡಲು ಅಥವಾ ಕೇವಲ ಐದು ಪ್ರತಿಶತದಷ್ಟು ಬ್ಯಾಟರಿ ಶಕ್ತಿಯೊಂದಿಗೆ 77 ನಿಮಿಷಗಳ ಕಾಲ ಕರೆ ಮಾಡಲು ಅವಕಾಶ ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ವೈ-ಫೈ 6, ಬ್ಲೂಟೂತ್ V5.1, GPS/ನ್ಯಾವಿಕ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಭಾರತದಲ್ಲಿ ಒಪ್ಪೊ ರೆನೋ 4 ಪ್ರೊ ಬೆಲೆ 34,990, ರೂ ಆಗಿದೆ. ಇನ್ನು ಈ ಫೋನ್ ಸ್ಟಾರ್ರಿ ನೈಟ್ ಮತ್ತು ಸಿಲ್ಕಿ ವೈಟ್ ಎಂಬ ಎರಡು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಬರಲಿದೆ. ಇದು ಅಮೆಜಾನ್, ಫ್ಲಿಪ್‌ಕಾರ್ಟ್, ಸ್ನ್ಯಾಪ್‌ಡೀಲ್, ಪೇಟಿಎಂ ಮಾಲ್, ಮತ್ತು ಟಾಟಾ ಕ್ಲಿಕ್ ಸೇರಿದಂತೆ ರಿಲಯನ್ಸ್ ಡಿಜಿಟಲ್, ಕ್ರೋಮಾ, ಸಂಗೀತ, ಮತ್ತು ಪೂರ್ಣಿಕಾ ಸೇರಿದಂತೆ ವಿವಿಧ ಆನ್‌ಲೈನ್ ಮತ್ತು ಆಫ್‌ಲೈನ್ ರಿಟೇಲ್‌ ಚಾನೆಲ್‌ಗಳ ಮೂಲಕ ಆಗಸ್ಟ್ 5 ರಿಂದ ದೇಶದಲ್ಲಿ ಮಾರಾಟವಾಗಲಿದೆ. ಅಲ್ಲದೆ ಒಪ್ಪೋ ರೆನೋ 4 ಪ್ರೊನಲ್ಲಿ ಲಾಂಚ್ ಆಫರ್‌ಗಳು ಆಯ್ದ ಬ್ಯಾಂಕುಗಳಲ್ಲಿ 10 ಪ್ರತಿಶತದಷ್ಟು ಕ್ಯಾಶ್‌ಬ್ಯಾಕ್, ಕ್ಯಾಶಿಫೈ ಮೂಲಕ ವಿನಿಮಯ ರಿಯಾಯಿತಿಗಳು ಮತ್ತು ಒಂಬತ್ತು ತಿಂಗಳವರೆಗೆ ಯಾವುದೇ ವೆಚ್ಚವಿಲ್ಲದ ಇಎಂಐ ಆಯ್ಕೆಗಳನ್ನು ಸಹ ನೀಡಲಾಗಿದೆ.

Best Mobiles in India

English summary
Oppo Reno 4 Pro has been launched in India. The new smartphone, which comes as the successor to the Reno 3 Pro that debuted in March, features a hole-punch display design and a quad rear camera setup.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X