Just In
Don't Miss
- News
ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಜೀವಕ್ಕೆ ಬೆದರಿಕೆ ಇದೆ ಎಂದು ಬಿಜೆಪಿ ಯುವ ನಾಯಕಿ ಪಮೇಲಾ ಆರೋಪ
- Movies
ಶಮಂತ್ಗೆ ಸಿಕ್ತು ಬಂಪರ್: ಎರಡನೇ ವಾರವೂ ಬ್ರೋ ಗೌಡ ಸೇಫ್
- Automobiles
ರ್ಯಾಪಿಡ್ ಬದಲಾಗಿ ಹೊಸ ಸಿ ಸೆಗ್ಮೆಂಟ್ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಒಪ್ಪೊ ರೆನೋ 5 ಪ್ರೊ 5G ಸ್ಮಾರ್ಟ್ಫೋನ್ ಲಾಂಚ್! ಬೆಲೆ ಎಷ್ಟು?
ಬಹು ನಿರೀಕ್ಷಿತ ಒಪ್ಪೊ ರೆನೋ 5 ಪ್ರೊ 5G ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಸದ್ಯ ಈ ಸ್ಮಾರ್ಟ್ಫೋನ್ ಅನ್ನು ಇಂದು ದೇಶದಲ್ಲಿ ಆನ್ಲೈನ್ ಈವೆಂಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿದ್ದ ರೆನೋ 4 ಪ್ರೊ ಸ್ಮಾರ್ಟ್ಫೋನ್ನ ಮುಂದುವರೆದ ಆವೃತ್ತಿ ಆಗಿದೆ. ಇನ್ನು ಈ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

ಹೌದು, ಒಪ್ಪೊ ಕಂಪೆನಿ ತನ್ನ ಹೊಸ ಒಪ್ಪೊ ರೆನೊ 5 ಪ್ರೊ 5G ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 5G ನೆಟ್ವರ್ಕ್ ಅನ್ನು ಬೆಂಬಲಿಸಲಿದ್ದು, ಭವಿಷ್ಯದ ದೃಷ್ಟಿಯಿಂದ ಹೊಸ ವಿನ್ಯಾಸದಲ್ಲಿ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್ಫೋನ್ 6.5 ಇಂಚಿನ ಫುಲ್ ಹೆಚ್ಡಿ ಡಿಸ್ಪ್ಲೇ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1000+ ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಒಳಗೊಂಡಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ
ರೆನೋ 5 ಪ್ರೊ 5G ಸ್ಮಾರ್ಟ್ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್-ಹೋಲ್ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 1000+ ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಒಪ್ಪೊ ರೆನೋ 5 ಪ್ರೊ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಮೊನೊ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 4350mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದ್ದು, ಇದು 65W ವರೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ 40 ನಿಮಿಷಗಳಲ್ಲಿ ಬ್ಯಾಟರಿಯನ್ನು ಟಾಪ್ ಅಪ್ ಮಾಡಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ, 3.5mm ಹೆಡ್ಫೋನ್ ಜ್ಯಾಕ್, ವೈಫೈ, ಬ್ಲೂಟೂತ್, ಹಾಟ್ಸ್ಪಾಟ್ ಆಯ್ಕೆಗಳನ್ನು ಬೆಂಬಲಿಸಲಿದೆ. ಜೊತೆಗೆ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 5 ಪ್ರೊ 5G ಸಿಂಗಲ್ ಮೆಮೊರಿ ರೂಪಾಂತರದಲ್ಲಿ 8GB RAM ಮತ್ತು 128GB ಆಂತರಿಕ ಸಂಗ್ರಹಣೆಯನ್ನು ಹೊಂದಿದೆ. ಇದರ ಬೆಲೆ 35,990 ರೂ.ಆಗಿದೆ. ಇದು ಸ್ಟಾರಿ ಬ್ಲ್ಯಾಕ್ ಮತ್ತು ಆಸ್ಟ್ರಲ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದರ ಮೊದಲ ಸೇಲ್ ಜನವರಿ 22 ರಂದು ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ ನಲ್ಲಿ ನಡೆಯಲಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190