ಒಪ್ಪೋ ರೆನೋ 5 ಪ್ರೊ+ 5G ಸ್ಮಾರ್ಟ್‌ಫೋನ್ ಲಾಂಚ್! ವಿಶೇಷತೆ ಏನು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ಕಂಪೆನಿ ತನ್ನ ಹೊಸ ರೆನೋ 5 ಪ್ರೊ + 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ಬಿಡುಗಡೆಯಾದ ಒಪ್ಪೊ ರೆನೋ 5 ಮತ್ತು ಒಪ್ಪೊ ರೆನೋ 5 ಪ್ರೊ ಅನ್ನು ಒಳಗೊಂಡಿರುವ ಸರಣಿಯಲ್ಲಿ ಪ್ರೀಮಿಯಂ ಕೊಡುಗೆಯಾಗಿ ಈ ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಇನ್ನು ಒಪ್ಪೋ ರೆನೋ 5 ಪ್ರೊ + 5 ಜಿ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ ಇದು ಸೋನಿ ಐಎಂಎಕ್ಸ್ 766 ಪ್ರೈಮರಿ ಕ್ಯಾಮೆರಾ ಒಳಗೊಂಡ ಹೆಡ್‌ಲೈನ್ ಫೀಚರ್ಸ್ ಅನ್ನು ಹೊಂದಿದೆ.

ಹೌದು, ಒಪ್ಪೋ ಕಂಪೆನಿ ತನ್ನ ಹೊಸ ಒಪ್ಪೋ ರೆನೋ 5ಪ್ರೊ + ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇದು ಫ್ಲ್ಯಾಗ್‌ಶಿಪ್ ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಅಲ್ಲದೆ ಇದು 12GB RAM ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ವಿಶೇಷತೆಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಒಪ್ಪೊ ರೆನೋ 5 ಪ್ರೊ + 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್‌ಅನ್ನು ಹೊಂದಿರುವ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 402PPI ನ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ ಮತ್ತು 180 Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೆ 12GB RAM ಮತ್ತು128GB ಹಾಗೂ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷತೆ
ಒಪ್ಪೊ ರೆನೋ 5 ಪ್ರೊ + 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 766 ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಟೆಲಿಫೋಟೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು 81 ಡಿಗ್ರಿಗಳ ಫೀಲ್ಡ್-ಆಫ್-ವ್ಯೂ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಸೂಪರ್ ವೂಕ್ 2.0 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ V5.2, GPS, NFC, ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 5 ಪ್ರೊ + 5G ಸ್ಮಾರ್ಟ್‌ಫೋನ್ ಬೆಲೆ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 3,999 (ಅಂದಾಜು 45,000 ರೂ.)ಗೆ ನಿಗದಿಪಡಿಸಲಾಗಿದೆ. ಇನ್ನು 12GB RAM + 256GB ಶೇಖರಣಾ ಮಾದರಿಯು CNY 4,499 (ಸರಿ ಸುಮಾರು 50,700 ರೂ.) ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ನೀಲಿ ಮತ್ತು ಕಪ್ಪು ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿವೆ. ಇನ್ನು ಈ ಸ್ಮಾರ್ಟ್‌ಫೋನ್ ಮೊದಲ ಸೇಲ್ ಜನವರಿ 22, 2021 ಕ್ಕೆ ನಿಗದಿಪಡಿಸಲಾಗಿದೆ.


Click it and Unblock the Notifications