Home
ಸುದ್ದಿಜಾಲ

ಒಪ್ಪೋ ರೆನೋ 5f ಸ್ಮಾರ್ಟ್‌ಫೋನ್‌ ಲಾಂಚ್‌! ವಿಶೇಷತೆ ಏನು?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಇದೀಗ ತನ್ನ ಹೊಸ ಒಪ್ಪೋ ರೆನೋ 5f ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ P95 SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 4310mAh ಸಾಮರ್ಥ್ಯ ಬ್ಯಾಟರಿಯನ್ನು ಒಳಗೊಂಡಿದೆ.

ಒಪ್ಪೋ ರೆನೋ 5F

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ ರೆನೋ 5F ಸ್ಮಾರ್ಟ್‌ಫೋನ್‌ ಅನ್ನು ಕಿನ್ಯಾದಲ್ಲಿ ಲಾಂಚ್‌ ಮಾಡಿದೆ. ಇದು 6.43 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದ್ದು, 48 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಪ್ರೈಮರಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 8GB RAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಒಪ್ಪೋ ರೆನೋ 5F ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 90.8% ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 60Hz ರಿಫ್ರೆಶ್‌ ರೇಟ್‌, 800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 409 ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ ಹೆಲಿಯೊ P95SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಧಾರಿತ ಕಲರ್‌ಒಎಸ್‌ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಸಹ ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಒಪ್ಪೊ ರೆನೋ 5f ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡ್ಯುಯಲ್-ವ್ಯೂ ವಿಡಿಯೋ, ಏಕವರ್ಣದ ವಿಡಿಯೋ ಮತ್ತು ಎಐ ಕಲರ್ ಪೋರ್ಟ್ರೇಟ್ ವಿಡಿಯೋ ಸೇರಿವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,310mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W VOC ಫ್ಲ್ಯಾಶ್ ಚಾರ್ಜ್ 4.0 ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ ವಿ 5.1, ಯುಎಸ್‌ಬಿ ಟೈಪ್-ಸಿ ಪೋರ್ಟ್, ಜಿಪಿಎಸ್, 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಫೋನ್ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ ಮತ್ತು ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೊ ರೆನೋ 5f ಕೀನ್ಯಾದಲ್ಲಿ ಲಾಂಚ್‌ ಆಗಿರುವುದರಿಂದ ಇದರ ಬೆಲೆ 8GB RAM + 128GB ಶೇಖರಣಾ ಆಯ್ಕೆಗಾಗಿ KES 31,499 (ಸುಮಾರು 20,800 ರೂ.) ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಫೆಂಟಾಸ್ಟಿಕ್ ಪರ್ಪಲ್ ಮತ್ತು ಫ್ಲೂಯಿಡ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಇದು ಈಗಾಗಲೇ ಪ್ರಮುಖ ಆನ್‌ಲೈನ್ ಮಳಿಗೆಗಳ ಮೂಲಕ ಮಾರಾಟಕ್ಕೆ ಸಿದ್ಧವಾಗಿದೆ.

Best Mobiles in India

English summary
Oppo Reno 5F With 30W Fast Charging Launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+