ಒಪ್ಪೋ ರೆನೋ 5K ಸ್ಮಾರ್ಟ್‌ಫೋನ್ ಲಾಂಚ್!..ವಿಶೇಷತೆ ಏನು?
ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ ರೆನೋ 5K ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಒಪ್ಪೋ ರೆನೋ 5K ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G ಪ್ರೊಸೆಸರ್ ಅನ್ನು ಒಳಗೊಂಡಿದೆ.

ಹೌದು, ಒಪ್ಪೋ ಸಂಸ್ಥೆ ಹೊಸ ಒಪ್ಪೋ ರೆನೋ 5K ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಂಚ್‌ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೊ ರೆನೋ 5K ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ OLED ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 91.7% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಬಲ
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 12GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಇಮೇಜ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒಳಗೊಂಡಿದೆ. ಇದು 85 ಡಿಗ್ರಿಗಳಷ್ಟು ಫೀಲ್ಡ್-ಆಫ್-ವ್ಯೂ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೊ ರೆನೋ 5K ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು ಸೂಪರ್ VOOC 2.0, ಸೂಪರ್ VOOC, VOOC 3.0, PD ಮತ್ತು QC ಫಾಸ್ಟ್ ಚಾರ್ಜಿಂಗ್ ಪ್ರೋಟೋಕಾಲ್‌ಗಳನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4GG LTE, ವೈ-ಫೈ, ಬ್ಲೂಟೂತ್ V5.1, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 5K ಬೆಲೆ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ. ಆದಾಗ್ಯೂ, ಮಾರ್ಚ್ 6 ರಿಂದ ಚೀನಾದಲ್ಲಿ 8GB RAM + 128GB ಸ್ಟೋರೇಜ್ ಮತ್ತು 12GB RAM + 256GB ಸ್ಟೋರೇಜ್ ರೂಪಾಂತರಗಳಲ್ಲಿ ಈ ಫೋನ್ ಮಾರಾಟವಾಗಲಿದೆ. ಇದು ಗ್ರೀನ್ ಬ್ರೀಜ್, ಮಿಡ್ನೈಟ್ ಬ್ಲ್ಯಾಕ್ ಮತ್ತು ಸ್ಟಾರ್ರಿ ಡ್ರೀಮ್ ಎಂಬ ಮೂರು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.


Click it and Unblock the Notifications
