ಭಾರತದಲ್ಲಿ ಒಪ್ಪೋ ರೆನೋ 6 5G ಮತ್ತು 6 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

|

ಜನಪ್ರಿಯ ಒಪ್ಪೋ ಕಂಪೆನಿ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಮನ ಗೆದ್ದಿದೆ. ಸದ್ಯ ಇದೀಗ ಹೊಸ ಒಪ್ಪೊ ರೆನೋ 6 5G ಮತ್ತು ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿವೆ. ಜೊತೆಗೆ ಸಿಂಗಲ್‌ RAM ಮತ್ತು ಶೇಖರಣಾ ಸಂರಚನೆಯನ್ನು ಹೊಂದಿವೆ.

ಒಪ್ಪೋ

ಹೌದು, ಒಪ್ಪೋ ಸಂಸ್ಥೆ ಭಾರತದಲ್ಲಿ ಹೊಸ ಒಪ್ಪೋ ರೆನೋ 6 5G ಮತ್ತು ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದರಲ್ಲಿ ಒಪ್ಪೋ ರೆನೊ 6 5G 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆ ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 6 5G ಡಿಸ್‌ಪ್ಲೇ

ಒಪ್ಪೋ ರೆನೋ 6 5G ಡಿಸ್‌ಪ್ಲೇ

ಒಪ್ಪೋ ರೆನೋ 6 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ.

ಒಪ್ಪೋ ರೆನೋ 6 5G ಪ್ರೊಸೆಸರ್‌

ಒಪ್ಪೋ ರೆನೋ 6 5G ಪ್ರೊಸೆಸರ್‌

ಒಪ್ಪೋ ರೆನೋ 6 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 900SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಇದು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಒಪ್ಪೋ ರೆನೋ 6 5G ಕ್ಯಾಮೆರಾ

ಒಪ್ಪೋ ರೆನೋ 6 5G ಕ್ಯಾಮೆರಾ

ಒಪ್ಪೋ ರೆನೋ 6 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ ರೆನೋ 6 5G ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಸೂಪರ್ VOOC ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ 6, ಬ್ಲೂಟೂತ್ ವಿ 5.2, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನೊ ಹೊಂದಿದೆ.

ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಸಂಗ್ರಹದೊಂದಿಗೆ ಜೋಡಿಸಲ್ಪಟ್ಟಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ ರೆನೋ 6 5G ಸ್ಮಾರ್ಟ್‌ಫೋನ್‌ 8GB RAM + 128 GB ಆಯ್ಕೆಗೆ 29,990ರೂ. ಬೆಲೆ ಹೊಂದಿದೆ. ಇದು ಜುಲೈ 29 ರಿಂದ ಲಭ್ಯವಾಗಲಿದೆ. ಇನ್ನು ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ 12GB RAM + 256GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 39,990 ರೂ,ಬೆಲೆಯನ್ನು ಹೊಂದಿದೆ. ಇದು ಇದೇ ಜುಲೈ 20 ರಿಂದ ಲಭ್ಯವಾಗಲಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳನ್ನು ಅರೋರಾ ಮತ್ತು ಸ್ಟೆಲ್ಲಾರ್ ಬ್ಲ್ಯಾಕ್ ಎಂಬ ಎರಡು ಬಣ್ಣಗಳಲ್ಲಿ ನೀಡಲಾಗುತ್ತದೆ. ಒಪ್ಪೋ ರೆನೋ 6 ಸರಣಿಗಳು ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್, ವಿಜಯ್ ಸೇಲ್ಸ್, ಕ್ರೋಮಾ, ಒಪ್ಪೊ ಆನ್‌ಲೈನ್ ಸ್ಟೋರ್ ಮತ್ತು ಇತರ ಚಿಲ್ಲರೆ ವ್ಯಾಪಾರಿಗಳ ಮೂಲಕ ಖರೀದಿಗೆ ಲಭ್ಯವಿರುತ್ತವೆ.

Best Mobiles in India

English summary
Oppo Reno 6 5G and Oppo Reno 6 Pro 5G have been launched in India as the latest flagship offering in the company's Oppo Reno series.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X