ಒಪ್ಪೋ ರೆನೋ 6 ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆ! ವಿಶೇಷತೆ ಏನು?

|

ಜನಪ್ರಿಯ ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಒಪ್ಪೋ ರೆನೋ 6 ಸರಣಿ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇನ್ನು ಈ ಸರಣಿಯಲ್ಲಿ ಒಪ್ಪೋ ರೆನೋ 6 ಪ್ರೊ +, ಒಪ್ಪೋ ರೆನೋ 6 ಪ್ರೊ, ಮತ್ತು ಒಪ್ಪೋ ರೆನೋ 6 ಸ್ಮಾರ್ಟ್‌ಫೋನ್‌ಗಳು ಸೇರಿವೆ. ಈ ಮೂರು ಸ್ಮಾರ್ಟ್‌ಫೋನ್‌ಗಳು 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿವೆ.

ಒಪ್ಪೋ ರೆನೋ 6

ಹೌದು, ಒಪ್ಪೋ ರೆನೋ 6 ಸರಣಿ ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳು ಬರಲಿದ್ದು, ಈ ಮೂರು ಸ್ಮಾರ್ಟ್‌ಫೋನ್‌ಗಳು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿವೆ. ಇದರಲ್ಲಿ ಒಪ್ಪೊ ರೆನೋ 6 ಪ್ರೊ + ಪ್ರೀಮಿಯಂ ಸ್ಮಾರ್ಟ್‌ಫೋನ್ ಆಗಿದೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಒಪ್ಪೋ ರೆನೋ 6 ಪ್ರೊ ಅನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 1200SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದರಲ್ಲಿ ಒಪ್ಪೋ ರೆನೋ 6 ಮೀಡಿಯಾಟೆಕ್ ಡೈಮೆನ್ಸಿಟಿ 900SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒಪ್ಪೋ ರೆನೋ 6

ಒಪ್ಪೋ ರೆನೋ 6

ಒಪ್ಪೋ ರೆನೋ 6 ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌-ಹೆಚ್‌ಡಿ +ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 12GB RAM ಮತ್ತು 25GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್‌ ಅನ್ನು ಒಳಗೊಂಡಿದೆ.

ಒಪ್ಪೋ ರೆನೋ 6 ಪ್ರೊ

ಒಪ್ಪೋ ರೆನೋ 6 ಪ್ರೊ

ಒಪ್ಪೊ ರೆನೋ 6 ಪ್ರೊ ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು 12GB RAM ವರೆಗೆ ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು ಕೂಡ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 65W ಫಾಸ್ಟ್ ಚಾರ್ಜಿಂಗ್‌ ಬೆಂಬಲಿಸಲಿದೆ.

ಒಪ್ಪೋ ರೆನೋ 6 ಪ್ರೊ +

ಒಪ್ಪೋ ರೆನೋ 6 ಪ್ರೊ +

ಒಪ್ಪೋ ರೆನೋ 6 ಪ್ರೊ + ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಇದು 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆತಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ವಾಟರ್ನರಿ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ ರೆನೋ 6 ಚೀನಾದಲ್ಲಿ 8GB RAM + 128GB ಶೇಖರಣಾ ಮಾದರಿಗೆ CNY 2,799 (ಸರಿಸುಮಾರು 31,800 ರೂ.) ಮತ್ತು 12 GB RAM + 256GB ಶೇಖರಣಾ ಆಯ್ಕೆಗೆ CNY 3,199 (ಸರಿಸುಮಾರು ರೂ. 36,400) ಬೆಲೆಯಿದೆ.
ಒಪ್ಪೋ ರೆನೋ 6 ಪ್ರೊ ಸ್ಮಾರ್ಟ್‌ಫೋನ್‌ 8GB RAM + 128 GB ಶೇಖರಣಾ ಮಾದರಿಯು ಚೀನಾದಲ್ಲಿ CNY 3,499 (ಸರಿಸುಮಾರು ರೂ. 39,800) ಮತ್ತು 12GB RAM+ 256GB ಶೇಖರಣಾ ಆಯ್ಕೆಯ CNY 3,799 (ಸರಿಸುಮಾರು ರೂ. 43,200) ಬೆಲೆ ಹೊಂದಿದೆ.
ಒಪ್ಪೋ ರೆನೋ 6 ಪ್ರೊ + ಸ್ಮಾರ್ಟ್‌ಫೋನ್‌ 8GB RAM+ 128GB ಜಿಬಿ ಶೇಖರಣಾ ಆಯ್ಕೆಗೆ ಸಿಎನ್‌ವೈ 3,999 (ಸರಿಸುಮಾರು 45,500 ರೂ.) ಮತ್ತು 12 GB RAM + 256GB ಶೇಖರಣಾ ರೂಪಾಂತರಕ್ಕೆ ಸಿಎನ್‌ವೈ 4,499 (ಸರಿಸುಮಾರು ರೂ. 51,200) ಬೆಲೆಯಿದೆ. ಈ ಮೂರು ಫೋನ್‌ಗಳು ಕಂಪನಿಯ ಆನ್‌ಲೈನ್ ಸ್ಟೋರ್ ಮೂಲಕ ಇಂದಿನಿಂದ ಕಾಯ್ದಿರಿಸಬಹುದಾಗಿದೆ.

Best Mobiles in India

English summary
Oppo Reno 6 Pro+ is the most premium smartphone of the lot and it is powered by the Qualcomm Snapdragon 870 SoC.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X