ಭಾರತದಲ್ಲಿ ಒಪ್ಪೋ ರೆನೊ 7 5G ಮತ್ತು ಒಪ್ಪೋ ರೆನೊ 7 ಪ್ರೊ 5G ಬೆಲೆ ಎಷ್ಟು?

|

ಪ್ರಮುಖ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾದಾ ಒಪ್ಪೋ ಕಂಪೆನಿ ಈಗಾಗಲೇ ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಒಪ್ಪೋ ಕಂಪನಿಯು ರೆನೊ ಸರಣಿಯಲ್ಲಿಯಲ್ಲಿ ಕೆಲವು ಫೋನ್‌ಗಳನ್ನು ಬಿಡುಗಡೆ ಮಾಡಿ, ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅದರ ಮುಂದುವರಿದ ಭಾಗವಾಗಿ ಒಪ್ಪೊ ರೆನೊ ಸರಣಿಯಲ್ಲಿ ಇತ್ತೀಚಿಗಷ್ಟೆ ಲಾಂಚ್ ಮಾಡಿದ್ದ ಒಪ್ಪೋ ರೆನೊ 7 5G ಮತ್ತು ಒಪ್ಪೋ ರೆನೊ 7 ಪ್ರೊ 5G ಗಮನ ಸೆಳೆದಿವೆ. ಭಾರತದಲ್ಲಿ ಈ ಫೋನ್‌ಗಳ ಬೆಲೆ ಎಷ್ಟಿರಲಿದೆ?

ಭಾರತದಲ್ಲಿ ಒಪ್ಪೋ ರೆನೊ 7 5G ಮತ್ತು ಒಪ್ಪೋ ರೆನೊ 7 ಪ್ರೊ 5G ಬೆಲೆ ಎಷ್ಟು?

ಹೌದು, ಒಪ್ಪೋ ಕಂಪೆನಿ ಹೊಸದಾಗ ಚೀನಾದಲ್ಲಿ ಬಿಡುಗಡೆ ಮಾಡಿರುವ ಒಪ್ಪೋ ರೆನೊ 7 5G ಮತ್ತು ಒಪ್ಪೋ ರೆನೊ 7 ಪ್ರೊ 5G ಫೋನ್‌ಗಳನ್ನು ಜನೆವರಿಯಲ್ಲಿ ಭಾರತದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ವರದಿಯೊಂದರಿಂದ ತಿಳಿದುಬಂದಿದೆ. ಭಾರತದಲ್ಲಿ ಒಪ್ಪೋ ರೆನೊ 7 5G ಫೋನ್ 28,000ರೂ ರಿಂದ 31,000ರೂ.ಗಳ ಬೆಲೆಯನ್ನು ಹೊಂದಿರುವ ಸಾಧ್ಯತೆಗಳಿವೆ. ಹಾಗೆಯೇ ಒಪ್ಪೋ ರೆನೊ 7 ಪ್ರೊ 5G ಫೋನ್ 41,000ರೂ ಯಿಂದ 43,000ರೂ.ಗಳ ಆಸುಪಾಸಿನಲ್ಲಿ ಇರಲಿದೆ ಎಂದು 91ಮೊಬೈಲ್ಸ್‌ ವರದಿಯಿಂದ ತಿಳಿದುಬಂದಿದೆ.

ಒಪ್ಪೋ ರೆನೊ 7 5G ಸ್ಮಾರ್ಟ್‌ಫೋನ್‌ ಫೀಚರ್ಸ್‌
ಒಪ್ಪೋ ರೆನೊ 7 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, 11 ಕಲರ್OS 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಒಪ್ಪೋ ರೆನೊ 7 5G ಮತ್ತು ಒಪ್ಪೋ ರೆನೊ 7 ಪ್ರೊ 5G ಬೆಲೆ ಎಷ್ಟು?

ಇನ್ನು ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX709 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಒಪ್ಪೋ ರೆನೊ 7 ಪ್ರೊ 5G ಫೋನ್ ಫೀಚರ್ಸ್‌
ಒಪ್ಪೋ ರೆನೊ7 ಪ್ರೊ 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200-ಮ್ಯಾಕ್ಸ್ SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ಕಲರ್OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಒಪ್ಪೋ ರೆನೊ 7 5G ಮತ್ತು ಒಪ್ಪೋ ರೆನೊ 7 ಪ್ರೊ 5G ಬೆಲೆ ಎಷ್ಟು?

ಹಾಗೆಯೇ ಈ ಫೋನ್ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX709 ಸೆಲ್ಪಿ ಕ್ಯಾಮೆರಾ ಹೊಂದಿದೆ. ಈ ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

ಒಪ್ಪೋ ಪರಿಚಯಿಸಲಿದೆ EV ಸ್ಕೂಟರ್!..ಯಾವಾಗ ಲಭ್ಯ?

ಪೆಟ್ರೋಲ್ ದರ ಹೆಚ್ಚಳದಿಂದಾಗಿ, ಸದ್ಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚು ಜನಪ್ರಿಯತೆ ಪಡೆಯುತ್ತಿವೆ. ಈ ನಿಟ್ಟಿನಲ್ಲಿ ಪ್ರಮುಖ ಬೈಕ್ ತಯಾರಿಕಾ ಸಂಸ್ಥೆಗಳು ಎಲೆಕ್ಟ್ರಿಕ್ ಸ್ಕೂಟರ್ ಪರಿಚಯಿಸುತ್ತ ಸಾಗಿವೆ. ಅವುಗಳ ಜೊತೆಗೆ ನೂತನ ಸ್ಟಾರ್ಟ್‌ ಅಪ್‌ ಕಂಪನಿಗಳು ಹಾಗೂ ಮೊಬೈಲ್ ತಯಾರಿಕೆ ಕಂಪನಿಗಳು ಸಹ ಎಲೆಕ್ಟ್ರಿಕ್ ಸ್ಕೂಟರ್ ತಯಾರಿಕೆಯತ್ತ ಹೆಜ್ಜೆ ಇಟ್ಟಿವೆ. ಆ ಪೈಕಿ ಪ್ರಮುಖ ಮೊಬೈಲ್ ಸಂಸ್ಥೆಗಳಲ್ಲಿ ಒಂದಾದ ಒಪ್ಪೋ ಇ ಸ್ಕೂಟರ್ ಪರಿಚಯಿಸುವ ಸೂಚನೆ ನೀಡಿದೆ.

ಹೌದು, ಒಪ್ಪೋ ಎಲೆಕ್ಟ್ರಿಕ್ ವಾಹನ ತಯಾರಿಕಾ ವಲಯಕ್ಕೆ ಕಾಲಿಡಲು ಸಜ್ಜಾಗಿದೆ. 2024ರಲ್ಲಿ ಒಪ್ಪೋ ಭಾರತದಲ್ಲಿ ಒಪ್ಪೋ EV ಎಲೆಕ್ಟ್ರಿಕ್ ಸ್ಕೂಟರ್ (Electric Scooter) ಅನ್ನು ಲಾಂಚ್ ಮಾಡಲು ತಯಾರಿ ನಡೆಸಿದೆ ಎಂದು ವರದಿಯಾಗಿದೆ. ಒಪ್ಪೋ EV ಕುರಿತ ಕೆಲವು ವಿವರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಸದ್ಯ ಈ ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದೆ ಎನ್ನಲಾಗಿದೆ. ಈಗಾಗಲೇ ಒಪ್ಪೋ ಕಂಪನಿಯು ಬ್ಯಾಟರಿ ಮತ್ತು ಇತರ ಬಿಡಿ ಭಾಗಗಳ ತಯಾರಕರೊಂದಿಗೆ ಮಾತುಕತೆ ಪ್ರಾರಂಭಿಸಿದೆ ಎನ್ನಲಾಗಿದೆ. ಅಧಿಕೃತವಾಗಿ ಒಪ್ಪೋ ಎಲೆಕ್ಟ್ರಿಕ್ ಸ್ಕೂಟರ್ ಯಾವಾಗ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ.

ಹಾಗೆಯೇ ಒಪ್ಪೊ ಕಂಪನಿಯು ಎಲೆಕ್ಟ್ರಿಕ್ ಸ್ಕೂಟರ್ ತಯಾರಿಕೆಯಲ್ಲಿ ಕೆಲಸ ಮಾಡುತ್ತಿದೆ ಎನ್ನಲಾಗಿದೆ. ಅದರೊಂದಿಗೆ ಒಪ್ಪೋ EV ಕಾಂಪ್ಯಾಕ್ಟ್ ಕಾರ್ ಅನ್ನು ಸಹ ಪರಿಚಯಿಸಬಹುದು ಎಂದು ಹೇಳಲಾಗುತ್ತಿದೆ. ಒಪ್ಪೋ EV ಕಾಂಪ್ಯಾಕ್ಟ್ ಕಾರ್ ಟಾಟಾ ನ್ಯಾನೋ ಕಾರಿಗೆ ಹೋಲುತ್ತದೆ ಎನ್ನಲಾಗಿದೆ.

ಒಪ್ಪೋ EV ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ಬರಲಿರುವ ಒಪ್ಪೋ ಎಲೆಕ್ಟ್ರಿಕ್ ಸ್ಕೂಟರ್‌ ಸುಮಾರು 60,000 ರೂ.ಗಳ ಆಸುಪಾಸಿನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಒಪ್ಪೊ ಕಂಪನಿಯು ಗ್ರಾಹಕ ಸ್ನೇಹಿ ಬೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಪರಿಚಯಿಸಲು ಮುಂದಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

Most Read Articles
Best Mobiles in India

English summary
Oppo Reno 7 5G And Reno 7 Pro 5G Price in India Tipped.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X