ಒಪ್ಪೋದ ಈ ಫೋನ್ ಬೆಲೆಯಲ್ಲಿ 5,000ರೂ. ಇಳಿಕೆ!..ಗ್ರಾಹಕರು ಫಿದಾ!
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾದ ಒಪ್ಪೋ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಫೋನ್ ಮಾದರಿಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಪ್ಪೋ ರೆನೋ ಸರಣಿಯಲ್ಲಿ ಹಲವು ಫೋನ್‌ಗಳನ್ನು ಗ್ರಾಹಕರನ್ನು ಸೆಳೆದಿದ್ದು, ಆ ಪೈಕಿ ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ ಗ್ರಾಹಕರು ತಿರುಗಿ ನೋಡುವಂತೆ ಮಾಡಿದೆ. ಏಕೆಂದರೆ ಈ ಫೋನ್ ಈಗ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ.
ಹೌದು, ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ ಬರೋಬ್ಬರಿ 5,000ರೂ. ಇಳಿಕೆ ಕಂಡಿದೆ. ನೂತನ ಬೆಲೆ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಿಸಿದೆ. ಈ ಫೋನ್ 39,999 ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಬಿಡುಗಡೆ ಆಗಿತ್ತು. ಈಗ ಗ್ರಾಹಕರು 34,999ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ 2,000ರೂ. ವರೆಗೂ ರಿಯಾಯಿತಿ ಸಹ ದೊರೆಯುತ್ತದೆ.

ಅಂದಹಾಗೆ ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ 4500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 65W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ ಡಿವೈಸ್ ಸಹ ಗ್ರಾಹಕರ ಕಣ್ಮನ ಸೆಳೆಯುವಂತಿದ್ದು, ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್ ಹೊಂದಿದೆ. ಹಾಗಾದರೇ ಒಪ್ಪೋ ರೆನೊ 7 ಪ್ರೊ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ.
ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ : ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90hz ರಿಫ್ರೆಶ್ ರೇಟ್ ಮತ್ತು 180Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 5ಪ್ರೊಟೆಕ್ಷನ್ ಅನ್ನು ಹೊಂದಿದೆ.

ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ಬಲ : ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ ಒಎಸ್ 12 ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 12 GB RAM + 256 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.

ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆನ್ಸಾರ್ : ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ imx766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ imx709 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ ಬ್ಯಾಟರಿ ಬ್ಯಾಕ್‌ಅಪ್ : ಒಪ್ಪೋ ರೆನೊ 7 ಪ್ರೊ ಸ್ಮಾರ್ಟ್‌ಫೋನ್ 4500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಫೋನ್ ಸ್ಟಾರ್ಟ್ರೈಲ್ಸ್ ಬ್ಲೂ ಮತ್ತು ಸ್ಟಾರ್ಲೈಟ್ ಬ್ಲ್ಯಾಕ್ ಕಲರ್ ಆಯ್ಕೆ ಯಲ್ಲಿ ಲಭ್ಯ. ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications