Home
ಸುದ್ದಿಜಾಲ

ಭಾರತದಲ್ಲಿ ಒಪ್ಪೋ ರೆನೋ 7 ಸರಣಿ ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದಿರುವ ಒಪ್ಪೋ ಭಾರತದಲ್ಲಿ ರೆನೋ 7 ಸರಣಿಯಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸರಣಿಯಲ್ಲಿ ಒಪೊ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್‌ಫೋನ್‌ಗಳು ಭಾರತಕ್ಕೆ ಎಂಟ್ರಿ ನೀಡಿವೆ. ಇದರಲ್ಲಿ ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಆದರೆ ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ಭಾರತದಲ್ಲಿ ಒಪ್ಪೋ ರೆನೋ 7 ಪ್ರೊ ಮತ್ತು ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್‌ ಗಳನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು 5ನೆಟ್‌ವರ್ಕ್‌ ಅನ್ನು ಬೆಂಬಲಿಸಲಿವೆ. ಇನ್ನು ಒಪ್ಪೋ ರೆನೋ 7ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್‌ ಬಲವನ್ನು ಹೊಂದಿದೆ. ಆದರೆ ಒಪ್ಪೋ ರೆನೋ 7 ಮೀಡಿಯಾಟೆಕ್‌ ಡೈಮೆನ್ಸಿಟಿ 900SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 7

ಒಪ್ಪೋ ರೆನೋ 7

ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಹೆಚ್‌ಡಿ + ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 180Hz ಟಚ್‌ ರೆಸ್ಪಾನ್ಸ್‌ ರೇಟ್‌ ಹಾಗೂ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 900 ಪ್ರೊಸೆಸರ್ SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ RAM ಸಾಮರ್ಥ್ಯವನ್ನು ನೀವು ಹೆಚ್ಚು ಅಗತ್ಯವಿರುವಾಗ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್‌-ಆಂಗಲ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮರಾ ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಒಪ್ಪೋ ರೆನೋ 7ಪ್ರೊ

ಒಪ್ಪೋ ರೆನೋ 7ಪ್ರೊ

ಒಪ್ಪೋ ರೆನೋ 7ಪ್ರೊ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90hz ರಿಫ್ರೆಶ್ ರೇಟ್‌ ಮತ್ತು 180Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 5ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 1 ಆಧಾರಿತ ಕಲರ್‌ ಒಎಸ್‌ 12ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ imx766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ imx709 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು 39,999ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಸ್ಟಾರ್ಟ್ರೈಲ್ಸ್ ಬ್ಲೂ ಮತ್ತು ಸ್ಟಾರ್ಲೈಟ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಬರುತ್ತದೆ. ಇನ್ನು ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್‌ 28,999ರೂ. ಬೆಲೆಯನ್ನು ಹೊಂದಿದೆ. ಇದು ಫೆಬ್ರವರಿ 17 ರಿಂದ ಫ್ಲಿಪ್‌ಕಾರ್ಟ್, ಒಪ್ಪೋ ಆನ್‌ಲೈನ್ ​​ಸ್ಟೋರ್, ಮತ್ತು ರಿಟೇಲ್‌ ಸ್ಟೋರ್‌ ನಲ್ಲಿ ಫೆಬ್ರವರಿ 17ರಿಂದ ಖರೀದಿಗೆ ಲಭ್ಯವಾಗಲಿದೆ. ಇದರಲ್ಲಿ ಫ್ಲಿಪ್‌ಕಾರ್ಟ್‌ ಫೆಬ್ರವರಿ 17 ರಂದು ಒಪ್ಪೋ ರೆನೋ 7ಪ್ರೊ ಸ್ಮಾರ್ಟ್‌ಫೋನ್‌ ವಿಶೇಷ ಆಫರ್‌ ಅನ್ನು ಕೂಡ ನೀಡಿದೆ.

Best Mobiles in India

English summary
Oppo Reno7 series has officially launched for the Indian market which includes two phones: Reno 7 5G and Reno 7 Pro 5G.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+