ಭಾರತಲ್ಲಿ ಒಪ್ಪೋ ರೆನೋ 7 ಸರಣಿಯ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ!

|

ಒಪ್ಪೋ ಕಂಪೆನಿ ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದೀಗ ತನ್ನ ಹೊಸ ಒಪ್ಪೋ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ಗಳು ಫೆಬ್ರವರಿ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ವರದಿಯಾಗಿದೆ. ಇನ್ನು ಈ ಸರಣಿಯ ಫೋನ್ "ಪೋಟ್ರೇಟ್ ಎಕ್ಸ್‌ಪರ್ಟ್" ಕ್ಯಾಮೆರಾ ವಿಶೇಷತೆ ಹೊಂದಿರಲಿದೆ ಎಂದು ಹೇಳಲಾಗಿದೆ.

ಒಪ್ಪೋ ರೆನೋ 7 ಸರಣಿ

ಹೌದು, ಒಪ್ಪೋ ಕಂಪೆನಿ ತನ್ನ ಒಪ್ಪೋ ರೆನೋ 7 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಫೆಬ್ರವರಿ 4 ರಂದು ಲಾಂಚ್‌ ಮಾಡಲು ಪ್ಲಾನ್‌ ಮಾಡಿದೆ. ಜೊತೆಗೆ ಒಪ್ಪೋ 7 ಸರಣಿ ಸ್ಮಾರ್ಟ್‌ಫೋನ್‌ ಸೇಲ್‌ ಫೆಬ್ರವರಿ 8 ರಂದು ಫ್ಲಿಪ್‌ಕಾರ್ಟ್‌ನಲ್ಲಿ ನಡೆಸಲಾಗುವುದು ಎಂದು ಖಚಿತಪಡಿಸಿದೆ. ಇನ್ನು ಈ ಸರಣಿಯಲ್ಲಿ ಒಪ್ಪೋ ರೆನೋ 7 ಪ್ರೊ ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿರಬಹುದು? ಬೆಲೆ ಎಷ್ಟಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 7 ಪ್ರೊ

ಒಪ್ಪೋ ರೆನೋ 7 ಪ್ರೊ

ಒಪ್ಪೋ ರೆನೊ7 ಪ್ರೊ 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200-ಮ್ಯಾಕ್ಸ್ SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ಕಲರ್OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 32 ಮೆಗಾ ಪಿಕ್ಸೆಲ್ ಸೋನಿ IMX709 ಸೆಲ್ಪಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

ಒಪ್ಪೋ ರೆನೋ 7 5G

ಒಪ್ಪೋ ರೆನೋ 7 5G

ಒಪ್ಪೋ ರೆನೋ 7 5G ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿರಲಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಜೊತೆಗೆ 4500mAh ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಒಪ್ಪೋ ರೆನೋ 7 ಸರಣಿಯ ಬೆಲೆ 28,000 ಮತ್ತು 43,000 ರೂ.ಗಳ ನಡುವೆ ಇರಬಹುದು ಎನ್ನಲಾಗಿದೆ. ಅಂದರೆ ಹೈ ಎಂಡ್‌ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಅಂದಾಜು 43,000ರೂ. ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಬ್ಲೂ ಮತ್ತು ಬ್ಲಾಕ್‌ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Oppo Reno 7 Pro and Reno 7 may arrive in India on February 4.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X