Just In
- 48 min ago
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- 2 hrs ago
ರಿಯಲ್ಮಿ ಕಂಪೆನಿಯಿಂದ ಮೊದಲ ಪ್ರೀಮಿಯಂ ಆಂಡ್ರಾಯ್ಡ್ ಟ್ಯಾಬ್ಲೆಟ್ ಬಿಡುಗಡೆ!
- 3 hrs ago
ಭಾರತದ ಅತಿದೊಡ್ಡ ಡ್ರೋನ್ ಫೆಸ್ಟಿವಲ್ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ
- 4 hrs ago
ಏರ್ಟೆಲ್ ಗ್ರಾಹಕರೇ ಈ ಅಗ್ಗದ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸಿಗುತ್ತೆ!
Don't Miss
- Sports
IPL 2022: 'ರಾಯಲ್ಸ್' ಕದನದಲ್ಲಿ ಗೆಲ್ಲುವುದ್ಯಾರು? ರಾಜಸ್ಥಾನ ವಿರುದ್ಧ ಆರ್ಸಿಬಿ ಯೋಜನೆ ಹೇಗಿದೆ?
- News
ಬಳ್ಳಾರಿ: 300 ಕ್ಕೂ ಹೆಚ್ಚು ಮಾವು ತಳಿಗಳ ಪ್ರದರ್ಶನ, ಮಾರಾಟ ಮೇಳ
- Finance
Gold Rate Today: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ: ಮೇ 26ರ ಬೆಲೆ ನೋಡಿ
- Movies
ಸಾಕಷ್ಟು ನಟ-ನಟಿಯರಿಗೆ ಬಟ್ಟೆ ಡಿಸೈನ್ ಮಾಡುವುದು ಇವರೇ ನೋಡಿ
- Automobiles
ಥರ್ಡ್ ಪಾರ್ಟಿ ಇನ್ಸುರೆನ್ಸ್: ಜೂನ್ 1ರಿಂದ ವಾಹನ ಮಾಲೀಕತ್ವ ಮತ್ತಷ್ಟು ದುಬಾರಿ!
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತಲ್ಲಿ ಒಪ್ಪೋ ರೆನೋ 7 ಸರಣಿಯ ಸ್ಮಾರ್ಟ್ಫೋನ್ ಲಾಂಚ್ ಡೇಟ್ ಬಹಿರಂಗ!
ಒಪ್ಪೋ ಕಂಪೆನಿ ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಬಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ಆಕರ್ಷಕ ಸ್ಮಾರ್ಟ್ಫೋನ್ಗಳ ಮೂಲಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದೀಗ ತನ್ನ ಹೊಸ ಒಪ್ಪೋ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್ಫೋನ್ಗಳು ಫೆಬ್ರವರಿ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ವರದಿಯಾಗಿದೆ. ಇನ್ನು ಈ ಸರಣಿಯ ಫೋನ್ "ಪೋಟ್ರೇಟ್ ಎಕ್ಸ್ಪರ್ಟ್" ಕ್ಯಾಮೆರಾ ವಿಶೇಷತೆ ಹೊಂದಿರಲಿದೆ ಎಂದು ಹೇಳಲಾಗಿದೆ.

ಹೌದು, ಒಪ್ಪೋ ಕಂಪೆನಿ ತನ್ನ ಒಪ್ಪೋ ರೆನೋ 7 ಸರಣಿಯ ಸ್ಮಾರ್ಟ್ಫೋನ್ಗಳನ್ನು ಫೆಬ್ರವರಿ 4 ರಂದು ಲಾಂಚ್ ಮಾಡಲು ಪ್ಲಾನ್ ಮಾಡಿದೆ. ಜೊತೆಗೆ ಒಪ್ಪೋ 7 ಸರಣಿ ಸ್ಮಾರ್ಟ್ಫೋನ್ ಸೇಲ್ ಫೆಬ್ರವರಿ 8 ರಂದು ಫ್ಲಿಪ್ಕಾರ್ಟ್ನಲ್ಲಿ ನಡೆಸಲಾಗುವುದು ಎಂದು ಖಚಿತಪಡಿಸಿದೆ. ಇನ್ನು ಈ ಸರಣಿಯಲ್ಲಿ ಒಪ್ಪೋ ರೆನೋ 7 ಪ್ರೊ ಫೋನ್ 6.55 ಇಂಚಿನ ಫುಲ್ ಹೆಚ್ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ಗಳ ವಿಶೇಷತೆ ಏನಿರಬಹುದು? ಬೆಲೆ ಎಷ್ಟಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 7 ಪ್ರೊ
ಒಪ್ಪೋ ರೆನೊ7 ಪ್ರೊ 5G ಸ್ಮಾರ್ಟ್ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55-ಇಂಚಿನ ಪೂರ್ಣ ಹೆಚ್ಡಿ ಪ್ಲಸ್ AMOLED ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200-ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಕಲರ್OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್ಫೋನ್ 32 ಮೆಗಾ ಪಿಕ್ಸೆಲ್ ಸೋನಿ IMX709 ಸೆಲ್ಪಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

ಒಪ್ಪೋ ರೆನೋ 7 5G
ಒಪ್ಪೋ ರೆನೋ 7 5G ಸ್ಮಾರ್ಟ್ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ 20:9 ರಚನೆಯ ಅನುಪಾತ ಹೊಂದಿರಲಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಜೊತೆಗೆ 4500mAh ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒಪ್ಪೋ ರೆನೋ 7 ಸರಣಿಯ ಬೆಲೆ 28,000 ಮತ್ತು 43,000 ರೂ.ಗಳ ನಡುವೆ ಇರಬಹುದು ಎನ್ನಲಾಗಿದೆ. ಅಂದರೆ ಹೈ ಎಂಡ್ ರೆನೋ 7 ಪ್ರೊ ಸ್ಮಾರ್ಟ್ಫೋನ್ ಬೆಲೆ ಅಂದಾಜು 43,000ರೂ. ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್ಫೋನ್ಗಳು ಭಾರತದಲ್ಲಿ ಬ್ಲೂ ಮತ್ತು ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಬರಲಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999