ಒಪ್ಪೋ ಸಂಸ್ಥೆಯಿಂದ ಹೊಸ ಒಪ್ಪೋ ರೆನೊ 7 ಸ್ಮಾರ್ಟ್‌ಫೋನ್ ಸರಣಿ ಅನಾವರಣ!
ಒಪ್ಪೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ ರೆನೊ 7 ಸರಣಿಯನ್ನು ಅನಾವರಣಗೊಳಿಸಿದೆ. ಈ ಸರಣಿಯಲ್ಲಿ ಒಪ್ಪೋ ರನೊ 7 5G, ರೆನೊ 7ಪ್ರೊ, ರೆನೊ 7 SE 5G ಸ್ಮಾರ್ಟ್‌ಫೋನ್‌ಗಳು ಸೇರಿವೆ. ಈ ಸ್ಮಾರ್ಟ್‌ಫೋನ್‌ಗಳು ಪಂಚ್-ಹೋಲ್ AMOLED ಡಿಸ್‌ಪ್ಲೇಯನ್ನು ಹೊಂದಿವೆ.

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೊ ರೆನೊ 7 ಸರಣಿಯನ್ನು ಲಾಂಚ್ ಮಾಡಿದೆ. ಇದರಲ್ಲಿ ಒಪ್ಪೋ ರೆನೊ 7 5G ಫೋನ್ 6.43-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಆದರೆ ಒಪ್ಪೋ 7 Pro 5G ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒಪ್ಪೋ ರೆನೊ 7 SE 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಹಾಗಾದ್ರೆ ಈ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒಪ್ಪೋ ರೆನೊ 7 5G ಸ್ಮಾರ್ಟ್‌ಫೋನ್
ಒಪ್ಪೋ ರೆನೊ 7 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಪಡೆದಿದ್ದು, 11 ColorOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX709 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಒಪ್ಪೋ ರೆನೊ 7 Pro 5G
ಒಪ್ಪೋ ರೆನೊ7 ಪ್ರೊ 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55-ಇಂಚಿನ FHD+AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200-ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ColorOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8-ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX709 ಸೆಲ್ಪಿ ಕ್ಯಾಮೆರಾ ಹೊಂದಿದೆ. ಈ ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

ಒಪ್ಪೋ ರೆನೊ 7 SE 5G
ಒಪ್ಪೋ ರೆನೊ 7 SE 5G ಸ್ಮಾರ್ಟ್‌ಫೊನ್ 6.43 ಇಂಚಿನ FHD+ AMOLED ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX581 ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು 16 ಮೆಗಾಪಿಕ್ಸೆಲ್ Sony IMX471 ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇದಲ್ಲದೆ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೊ 7 ಸ್ಮಾರ್ಟ್‌ಫೋನ್ 8GB ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ CNY 2,699 (ಸುಮಾರು 31,500ರೂ.) ಬೆಲೆಹೊಂದಿದೆ. ಇನ್ನು 8GB ಮತ್ತು 256GB ಸ್ಟೋರೇಜ್ ಆವೃತ್ತಿಗೆ CNY 2,999 (ಸುಮಾರು 35,000ರೂ.) ಬೆಲೆ ನಿಗದಿ ಪಡಿಸಲಾಗಿದೆ. ಅಲ್ಲದೆ 12GB RAM ಮತ್ತು 256GB ಸ್ಟೋರೇಜ್ ರೂಪಾಂತರಕ್ಕೆ CNY 3,699 (ಅಂದಾಜು 38,500ರೂ.) ಬೆಲೆ ಹೊಂದಿದೆ.
ಇನ್ನು ರೆನೊ 7 ಪ್ರೊ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB ಮತ್ತು 256GB ಸ್ಟೋರೇಜ್ ಮಾದರಿಯು CNY 3,699 (ಸುಮಾರು 43,200 ರೂ.)ಬೆಲೆ ಹೊಂದಿದೆ. ಆದರೆ 12GB ಮತ್ತು 256GB ಸ್ಟೋರೇಜ್ ಹೊಂದಿರುವ ಟಾಪ್-ಆಫ್-ಲೈನ್ ಮಾದರಿಯು CNY 3,999 (ಸುಮಾರು 46,700ರೂ.) ಬೆಲೆಯನ್ನು ಹೊಂದಿದೆ.
ಇದರೊಂದಿಗೆ ಒಪ್ಪೋ ರೆನೊ 7 SE ಫೋನ್ 8GB ಮತ್ತು 256GB ಸ್ಟೋರೇಜ್ ಆವೃತ್ತಿಗೆ CNY 2,399 (ಸುಮಾರು 28,000ರೂ)ಬೆಲೆ ಹೊಂದಿದೆ.
ಇನ್ನು ಒಪ್ಪೋ ರೆನೊ 7 5G ಮತ್ತು ರೆನೊ 7 Pro 5G ಎರಡೂ ಡಿಸೆಂಬರ್ 3 ರಂದು ಚೀನಾದಲ್ಲಿ ಬಿಡುಗಡೆಯಾಗಲಿದೆ. ಆದರೆ ಒಪ್ಪೋ ರೆನೊ 7 SE ಡಿಸೆಂಬರ್ 17 ರಿಂದ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್‌ಗಳು ಮಾರ್ನಿಂಗ್ ಗೋಲ್ಡ್, ಸ್ಟಾರ್ ರೈನ್ ವಿಶ್ ಮತ್ತು ಸ್ಟಾರಿ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








