ಭಾರೀ ಬೆಲೆ ಇಳಿಕೆ!..ಒಪ್ಪೋ ರೆನೋ 8 5G ಫೋನ್‌ ಖರೀದಿಗೆ ಇದು ರೈಟ್‌ ಟೈಮ್‌!

|

ಒಪ್ಪೋ ಕಂಪೆನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಒಪ್ಪೋ ರೆನೋ 8 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ದಿಢೀರ್ ಇಳಿಕೆ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, 8GB + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್ ಹೊಂದಿದೆ.

ಒಪ್ಪೋ ರೆನೋ 8 5G

ಹೌದು, ಒಪ್ಪೋ ಕಂಪನಿಯ ಒಪ್ಪೋ ರೆನೋ 8 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಕಡಿತ ಆಗಿದೆ. ಇನ್ನು ಈ ಫೋನ್ ಫ್ಲಿಪ್‌ಕಾರ್ಟ್‌ ಮತ್ತು ಅಮೆಜಾನ್‌ ಇ ಕಾಮರ್ಸ್‌ ತಾಣಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್ 8GB + 128GB ಸ್ಟೋರೇಜ್ ವೇರಿಯಂಟ್‌ ಮಾಡೆಲ್‌ 29,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಜೊತೆಗೆ 21,000ರೂ. ವರೆಗೂ ಎಕ್ಸ್‌ಚೇಂಜ್ ಕೊಡುಗೆ ಲಭ್ಯವಾಗಲಿದೆ.

ಅಮೆಜಾನ್‌

ಹಾಗೆಯೇ ಅಮೆಜಾನ್‌ ತಾಣದಲ್ಲಿ ಈ ಫೋನ್ 8GB + 128GB ಸ್ಟೋರೇಜ್ ವೇರಿಯಂಟ್‌ ಮಾಡೆಲ್‌ 28,180ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಸುಮಾರು 25,000ರೂ. ವರೆಗೂ ಎಕ್ಸ್‌ಚೇಂಜ್ ಕೊಡುಗೆ ಲಭ್ಯವಾಗಲಿದೆ. ಹಾಗೆಯೇ ಇಎಮ್‌ಐ ಆಯ್ಕೆಗಳು ದೊರೆಯುತ್ತವೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ ರೆನೋ 8 5G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 20:09 ರಚನೆಯ ಅನುಪಾತವನ್ನು ಹೊಂದಿದ್ದು, 800 ನಿಟ್ಸ್ ಪೀಕ್ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್‌ ಬಲ ಹೇಗಿದೆ

ಪ್ರೊಸೆಸರ್‌ ಬಲ ಹೇಗಿದೆ

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಕಲರ್‌ ಒಎಸ್‌ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು

ಕ್ಯಾಮೆರಾ ಸೆನ್ಸಾರ್ ಎಷ್ಟು

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿಯ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳು ಯಾವುವು?

ಬ್ಯಾಟರಿಯ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳು ಯಾವುವು?

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Oppo Reno 8 5G gets a Big price cut; Check out the latest price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X