ಇಂದು 'ಒಪ್ಪೋ ರೆನೋ 8' ಪ್ರೀ-ಆರ್ಡರ್‌; ಬೆಲೆ ಎಷ್ಟು?..ರಿಯಾಯಿತಿ ಎಷ್ಟಿದೆ?

|

ಇತ್ತೀಚಿಗೆ ಬಿಡುಗಡೆ ಆಗಿರುವ ಒಪ್ಪೋ ಕಂಪನಿಯ ಹೊಸ ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ ಸರಣಿಯು ಈಗಾಗಲೆ ಗ್ರಾಹಕರ ಗಮನ ಸೆಳೆದಿದ್ದು, ಈ ಸರಣಿಯು ಒಪ್ಪೋ ರೆನೋ 8 ಮತ್ತು ಒಪ್ಪೋ ರೆನೋ 8 ಪ್ರೊ ಮಾದರಿಗಳನ್ನು ಹೊಂದಿದೆ. ಆ ಪೈಕಿ ಒಪ್ಪೋ ರೆನೋ 8 5G ಸ್ಮಾರ್ಟ್‌ಫೋನ್‌ ಖರೀದಿಗಾಗಿ ಎದುರುನೋಡುತ್ತಿರುವ ಗ್ರಾಹಕರಿಗೆ ಈಗ ಸಿಹಿಸುದ್ದಿ ಲಭ್ಯವಾಗಿದೆ. ದೇಶದಲ್ಲಿ ಒಪ್ಪೋ ರೆನೋ 8 5G ಸ್ಮಾರ್ಟ್‌ಫೋನ್‌ ಇಂದಿನಿಂದ ಪ್ರೀ ಆರ್ಡರ್ ಪ್ರಾರಂಭಿಸಲಿದೆ.

ಸ್ಮಾರ್ಟ್‌ಫೋನ್‌

ಪ್ರಮುಖ ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಇಂದು (ಜುಲೈ 22) ಸಂಜೆ 7 ಗಂಟೆಗೆ ಒಪ್ಪೋ ರೆನೋ 8 5G ಸ್ಮಾರ್ಟ್‌ಫೋನ್‌ ಪ್ರೀ ಆರ್ಡರ್ ಶುರು ಮಾಡಲಿದೆ. ಇನ್ನು ಈ ಫೋನ್ 8GB RAM ಮತ್ತು 128GB ವೇರಿಯಂಟ್ ಆಯ್ಕೆ ಹೊಂದಿದೆ. ಇದರೊಂದಿಗೆ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನಿನ ಬೇಸ್‌ ವೇರಿಯಂಟ್‌ ಬೆಲೆಯು 29,999 ರೂ ಆಗಿದೆ. ಆದ್ರೆ ರಿಯಾಯಿತಿ ಕೊಡುಗೆ ಲಭ್ಯ ಇದೆ. ಹಾಗಾದರೇ ಒಪ್ಪೋ ರೆನೋ 8 5G ಮತ್ತು ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 20:09 ರಚನೆಯ ಅನುಪಾತವನ್ನು ಹೊಂದಿದ್ದು, 800 ನಿಟ್ಸ್ ಪೀಕ್ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್‌ ಬಲ ಏನು? ಕ್ಯಾಮೆರಾ ಸೆಟ್‌ಅಪ್‌ ಸೆನ್ಸಾರ್

ಪ್ರೊಸೆಸರ್‌ ಬಲ ಏನು? ಕ್ಯಾಮೆರಾ ಸೆಟ್‌ಅಪ್‌ ಸೆನ್ಸಾರ್

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಕಲರ್‌ ಒಎಸ್‌ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿಯ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳು ಯಾವುವು?

ಬ್ಯಾಟರಿಯ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳು ಯಾವುವು?

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಒಪ್ಪೋ ರೆನೋ 8 ಪ್ರೊ: ಡಿಸ್‌ಪ್ಲೇ

ಒಪ್ಪೋ ರೆನೋ 8 ಪ್ರೊ: ಡಿಸ್‌ಪ್ಲೇ

ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ HDR10+ ಬೆಂಬಲ, SGS ಲೋ ಮೋಷನ್ ಬ್ಲರ್, SGS ಲೋ ಬ್ಲೂ ಲೈಟ್, ಅಮೆಜಾನ್ HDR ಪ್ರಮಾಣೀಕರಣ ಮತ್ತು ನೆಟ್‌ಫ್ಲಿಕ್ಸ್‌ HD ಪ್ರಮಾಣೀಕರಣವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು? ಕ್ಯಾಮೆರಾ ಸೆಟಪ್‌ ಹೇಗಿದೆ?

ಪ್ರೊಸೆಸರ್‌ ಯಾವುದು? ಕ್ಯಾಮೆರಾ ಸೆಟಪ್‌ ಹೇಗಿದೆ?

ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ಕಲರ್‌ಒಎಸ್‌ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ ಯಾವುದು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ ಯಾವುದು?

ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಈ ಫೋನ್‌ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫೋನ್ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಇತರೆ ಸೌಲಭ್ಯಗಳು

ಬೆಲೆ ಮತ್ತು ಇತರೆ ಸೌಲಭ್ಯಗಳು

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 8GB RAM + 128GB ಸ್ಟೋರೇಜ್ ಆಯ್ಕೆಗೆ 29,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ಗೋಲ್ಡ್‌ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇನ್ನು ಲಾಂಚ್‌ ಆಫರ್‌ನಲ್ಲಿ ಗ್ರಾಹಕರು ICICI ಬ್ಯಾಂಕ್, SBI ಕಾರ್ಡ್‌ಗಳು, ಕೋಟಕ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್‌ಗಳು ಮತ್ತು ಡೆಬಿಟ್ ಕಾರ್ಡ್ ವಹಿವಾಟುಗಳ ಮೂಲಕ 10% ಕ್ಯಾಶ್‌ಬ್ಯಾಕ್ ಅನ್ನು ಪಡೆದುಕೊಳ್ಳಬಹುದು.

Best Mobiles in India

English summary
Oppo Reno 8 Pre-Order Begins Today from 7PM Via Flipkart: Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X