ಭಾರತದಲ್ಲಿ ಒಪ್ಪೋ ರೆನೋ 8 ಪ್ರೊ ಮತ್ತು ರೆನೋ 8 ಫೋನ್ ಬಿಡುಗಡೆ! ಬೆಲೆ ಎಷ್ಟು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ಒಪ್ಪೋ ರೆನೋ 8 ಸರಣಿ ಬಿಡುಗಡೆ ಮಾಡಿದೆ. ಇದರಲ್ಲಿ ಒಪ್ಪೋ ರೆನೋ 8 ಪ್ರೊ ಮತ್ತು ರೆನೋ 8 ಸ್ಮಾರ್ಟ್‌ಫೋನ್ ಸೇರಿವೆ. ಇದಲ್ಲದೆ ಒಪ್ಪೋ ಪ್ಯಾಡ್ ಏರ್ ಮತ್ತು ಒಪ್ಪೋ ಎನ್ಕೋ X2 ಟ್ರೂಲಿ ವಾಯರ್‌ಲೆಸ್ಟ್ ಸ್ಟಿರಿಯೊ ಇಯರ್‌ಫೋನ್‌ಗಳನ್ನು ಪರಿಚಯಿಸಿದೆ.

ಹೌದು, ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ ರೆನೋ 8 ಪ್ರೊ ಮತ್ತು ರೆನೋ 8 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿವೆ. ಇದಲ್ಲದೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಕೂಡ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ನೀಡಲಿವೆ. ಇನ್ನುಳಿದಂತೆ ಒಪ್ಪೋ ರೆನೋ 8 ಸರಣಿಯ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ರೆನೋ 8 ಪ್ರೊ ಡಿಸ್‌ಪ್ಲೇ
ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ HDR10+ ಬೆಂಬಲ, SGS ಲೋ ಮೋಷನ್ ಬ್ಲರ್, SGS ಲೋ ಬ್ಲೂ ಲೈಟ್, ಅಮೆಜಾನ್ HDR ಪ್ರಮಾಣೀಕರಣ ಮತ್ತು ನೆಟ್‌ಫ್ಲಿಕ್ಸ್ HD ಪ್ರಮಾಣೀಕರಣವನ್ನು ಹೊಂದಿದೆ.

ಪ್ರೊಸೆಸರ್ ಯಾವುದು? ಕ್ಯಾಮೆರಾ ಸೆಟಪ್ ಹೇಗಿದೆ?
ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಕಲರ್‌ಒಎಸ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ಏನು? ಇತರೆ ಫೀಚರ್ಸ್ ಯಾವುದು?
ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ. ಈ ಫೋನ್ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫೋನ್ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ
ಇನ್ನು ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 20:09 ರಚನೆಯ ಅನುಪಾತವನ್ನು ಹೊಂದಿದ್ದು, 800 ನಿಟ್ಸ್ ಪೀಕ್ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್ ಬಲ ಏನು? ಕ್ಯಾಮೆರಾ ಸೆಟಪ್ ವಿಶೇಷ
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಕಲರ್ ಒಎಸ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿಯ ಬ್ಯಾಕ್‌ಅಪ್ ಹೇಗಿದೆ? ಇತರೆ ಫೀಚರ್ಸ್‌ಗಳು ಯಾವುವು?
ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ ಬೆಲೆ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 45,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್ ಗ್ಲೇಜ್ಡ್ ಬ್ಲ್ಯಾಕ್ ಮತ್ತು ಗ್ಲೇಜ್ಡ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಲಾಂಚ್ ಆಫರ್‌ನಲ್ಲಿ ಐಸಿಐಸಿಐ ಬ್ಯಾಂಕ್, ಎಸ್‌ಬಿಐ ಕಾರ್ಡ್‌ಗಳು, ಕೊಟಕ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್‌ಗಳು ಮತ್ತು ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲೆ ಶೇಕಡಾ 10 ರಷ್ಟು ಕ್ಯಾಶ್‌ಬ್ಯಾಕ್ ಕೊಡುಗೆಯನ್ನು ನೀಡುತ್ತಿದೆ.

ಇನ್ನು ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 8GB RAM + 128GB ಸ್ಟೋರೇಜ್ ಆಯ್ಕೆಗೆ 29,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್ ಕಪ್ಪು ಮತ್ತು ಚಿನ್ನದ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇನ್ನು ಲಾಂಚ್ ಆಫರ್‌ನಲ್ಲಿ ಗ್ರಾಹಕರು ICICI ಬ್ಯಾಂಕ್, SBI ಕಾರ್ಡ್‌ಗಳು, ಕೋಟಕ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್‌ಗಳು ಮತ್ತು ಡೆಬಿಟ್ ಕಾರ್ಡ್ ವಹಿವಾಟುಗಳ ಮೂಲಕ 10% ಕ್ಯಾಶ್‌ಬ್ಯಾಕ್ ಅನ್ನು ಪಡೆದುಕೊಳ್ಳಬಹುದು.ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ರಮವಾಗಿ ಜುಲೈ 25 ಮತ್ತು ಜುಲೈ 19 ರಿಂದ ಫ್ಲಿಪ್‌ಕಾರ್ಟ್, ಒಪ್ಪೋ ಸ್ಟೋರ್ ಮತ್ತು ಮುಖ್ಯ ರಿಟೇಲ್ ಔಟ್‌ಲೆಟ್‌ಗಳ ಮೂಲಕ ಲಭ್ಯವಿರುತ್ತವೆ ಎಂದು ಕಂಪನಿ ತಿಳಿಸಿದೆ.


Click it and Unblock the Notifications








