ಭಾರತದಲ್ಲಿ ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಸರಣಿಯ ಬೆಲೆ ಬಹಿರಂಗ!

|

ಒಪ್ಪೋ ಕಂಪೆನಿ ಮೊಬೈಲ್‌ ಮಾರುಕಟ್ಟೆಯ ಜನಪ್ರಿಯ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ಕ್ಯಾಮೆರಾ ಫೀಚರ್ಸ್‌ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಈಗಾಗಲೇ ಹಲವು ಆಕರ್ಷಕ ವಿನ್ಯಾಸವನ್ನು ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಇದಲ್ಲದೆ ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸದ್ಯ ಇದೀಗ ಭಾರತದಲ್ಲಿ ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಸರಣಿ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ ರೆನೋ 8 ಸರಣಿಯನ್ನು ಪರಿಚಯಿಸಲು ವೇದಿಕೆ ಸಿದ್ದಪಡಿಸಿದೆ. ಈ ಸ್ಮಾರ್ಟ್‌ಫೋನ್‌ ಸರಣಿಯಲ್ಲಿ ಒಪ್ಪೋ ರೆನೋ 8 ಮತ್ತು ಒಪ್ಪೋ ರೆನೋ 8 ಪ್ರೊ ಫೋನ್‌ಗಳನ್ನು ಲಾಂಚ್‌ ಮಾಡಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ದಿನಾಂಕ ಬಹಿರಂಗವಾಗಿದ್ದು ಇದೇ ಜುಲೈ 18ರಂದು ಬಿಡುಗಡೆಯಾಗಲಿದೆ. ಅಲ್ಲದೆ ಇವುಗಳ ಬೆಲೆ ಎಷ್ಟಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಟಿಪ್‌ಸ್ಟರ್‌ ಸುಧಾಂಶು ಅಂಬೋರ್ ಪ್ರಕಾರ ಒಪ್ಪೋ ರೆನೋ 8 ಆರಂಭಿಕ ಬೆಲೆ 29,990ರೂ, ಹಾಗೂ ಒಪ್ಪೋ ರೆನೋ 8 ಪ್ರೊ ಆರಂಭಿಕ ಬೆಲೆ 44,990ರೂ.ಇರಲಿದೆ ಎನ್ನಲಾಗಿದೆ.

ರೆನೋ

ಒಪ್ಪೋ ರೆನೋ 8 ಸರಣಿಯ ಸ್ಮಾರ್ಟ್‌ಫೋನ್‌ಗಳು ಮಧ್ಯಮ ಶ್ರೇಣಿಯ ಬೆಲೆಯಲ್ಲಿ ಬರುವುದು ಇದೀಗ ಕನ್ಫರ್ಮ್‌ ಆಗಿದೆ. ಆನ್‌ಲೈನ್‌ನಲ್ಲಿ ಬಹಿರಂಗವಾದ ಮಾಹಿತಿ ಪ್ರಕಾರ ಒಪ್ಪೋ ಒಪ್ಪೋ ರೆನೋ 8 ಫೋನ್‌ 8GB+128GB, 8GB+256GB ಮತ್ತು 12GB+256GB ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಆದರೆ ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ ಏಕೈಕ 12GB+256GB ಸ್ಟೋರೇಜ್‌ ಮಾದರಿಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳಲ್ಲಿ ಏನೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಈ ಡಿಸ್‌ಪ್ಲೇ 84.7% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಒಳಗೊಂಡಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಹಾಗೂ 430ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ನೀಡಲಿದೆ ಎಂದು ಊಹಿಸಲಾಗಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿರಲಿದೆ? ಕ್ಯಾಮೆರಾ ವಿಶೇಷತೆ ಏನು?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿರಲಿದೆ? ಕ್ಯಾಮೆರಾ ವಿಶೇಷತೆ ಏನು?

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಹೊಂದಿರಲಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಜೊತೆಗೆ 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆಯಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ? ಇತರೆ ಫೀಚರ್ಸ್‌ಗಳೇನು?

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, USB ಟೈಪ್-C 2.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌ ಅನ್ನು ಬೆಂಬಲಿಸಲಿದೆ. ಈ ಫೋನ್‌ ಬ್ಲಾಕ್, ಬ್ಲೂ, ಗೋಲ್ಡ್, ವೈಲೆಟ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ 6.62-ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ HDR10+ ಬೆಂಬಲಿಸಲಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದವನ್ನು ಹೊಂದಿದೆ. ಡಿಸ್‌ಪ್ಲೇ ರಚನೆಯ ಅನುಪಾತ 20:9 ಆಗಿದ್ದು, ಸ್ಕ್ರೀನ್‌ ಟು ಬಾಡಿ ಅನುಪಾತ 88.57% ಇರಲಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಪ್ರೊಟೆಕ್ಷನ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌ ಯಾವುದು? ಕ್ಯಾಮೆರಾ ಹೇಗಿರಲಿದೆ?

ಪ್ರೊಸೆಸರ್‌ ಯಾವುದು? ಕ್ಯಾಮೆರಾ ಹೇಗಿರಲಿದೆ?

ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್‌ ಹೊಂದಿರಲಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿರುವ ಸಾಧ್ಯತೆಯಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ.

ಬ್ಯಾಟರಿ ಬ್ಯಾಕಪ್‌ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಬ್ಯಾಕಪ್‌ ಮತ್ತು ಇತರೆ ಫೀಚರ್ಸ್‌

ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ ಯನ್ನು ಹೊಂದಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಕಂಪಾಸ್‌, ಆಕ್ಸಿಲೆರೋಮೀಟರ್‌ ಅನ್ನೊ ಒಳಗೊಂಡಿರಲಿದೆ ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಆನ್‌ಲೈನ್‌ನಲ್ಲಿ ಸೋರಿಕೆಯಾದ ಮಾಹಿತಿಯ ಪ್ರಕಾರ ಒಪ್ಪೋ ರೆನೋ 8 ಆರಂಭಿಕ ಬೆಲೆ 29,990ರೂ, ಹಾಗೂ ಒಪ್ಪೋ ರೆನೋ 8 ಪ್ರೊ ಆರಂಭಿಕ ಬೆಲೆ 44,990ರೂ.ಇರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ಗಳು ಇದೇ ಜುಲೈ 18ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

Best Mobiles in India

English summary
Oppo is all set to launch its Reno8 series that includes Reno8 as well as Reno8 Pro on July 18

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X