ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಬಿಡುಗಡೆ! 33W ಚಾರ್ಜಿಂಗ್‌ ವಿಶೇಷ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ಒಪ್ಪೋ ಕಂಪೆನಿ ಕೂಡ ಮುಂಚೂಣಿಯಲ್ಲಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಇತರೆ ಕಂಪೆನಿಗಳ ಜೊತೆಗೆ ಪೈಪೋಟಿ ನಡೆಸುತ್ತಿದೆ. ಇದೇ ಕಾರಣಕ್ಕೆ ಹಲವು ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡ ಫೋನ್‌ಗಳನ್ನು ಪರಿಚಯಿಸುವಲ್ಲಿ ಹೊಸ ಪ್ರಯತ್ನಗಳನ್ನು ಮಾಡುತ್ತಿದೆ. ಸದ್ಯ ಇದೀಗ ಒಪ್ಪೋ ಕಂಪೆನಿ ತನ್ನ ಹೊಸ ಒಪ್ಪೋ ರೆನೋ 8 ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ AI ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ಮಾರುಕಟ್ಟೆಯಲ್ಲಿ ಹೊಸ ಒಪ್ಪೋ ರೆನೋ 8 ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಬೆಂಬಲಿತ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 33W SuperVOOC ಚಾರ್ಜಿಂಗ್‌ಗೆ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 409ppi ಪಿಕ್ಸೆಲ್ ಸಾಂದ್ರತೆ ಮತ್ತು NTSC ಬಣ್ಣದ ಹರವನ್ನು ಕೂಡ ಒಳಗೊಂಡಿದೆ.

ಪ್ರೊಸೆಸರ್‌ ಬಲ ಯಾವುದು?

ಪ್ರೊಸೆಸರ್‌ ಬಲ ಯಾವುದು?

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಫೋನ್ ಆಕ್ಟಾ-ಕೋರ್ 6nm ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12-ಆಧಾರಿತ ColorOS 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಫೋನಿನಲ್ಲಿ ಬಳಕೆಯಾಗದ ಇಂಟರ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಬಳಸಿಕೊಂಡು ಲಭ್ಯವಿರುವ ಮೆಮೊರಿಯನ್ನು 13GB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ IMX709 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್‌ ಮೋಡ್‌, ಸ್ಲೋ ಮೋಷನ್‌, ಪನೋರಮಾ, HDಯಂತಹ ವಿಭಿನ್ನ ವೃತ್ತಿಪರ ಛಾಯಾಗ್ರಹಣ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W SuperVOOC ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, NFC, Wi-Fi 802.11a/b/g/n, ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್, GPS/A-GPS, ಗ್ಲೋನಾಸ್, OTG ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಆನ್‌ಬೋರ್ಡ್‌ನಲ್ಲಿ ಅಕ್ಸೆಲೆರೊಮೀಟರ್, ಗ್ರಾವಿಟಿ ಸೆನ್ಸರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸರ್ ಮತ್ತು ಪೆಡೋಮೀಟರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ IDR 49,99,000 (ಅಂದಾಜು 26,800ರೂ) ಬೆಲೆ ಹೊಂದಿದೆ. ಇದು ಪ್ರಸ್ತುತ JD.com, Shopee, ಮತ್ತು Lazada ಸೇರಿದಂತೆ ಬಹು ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಪ್ರಿ ಬುಕ್ಕಿಂಗ್‌ಗೆ ರೆಡಿಯಿದೆ.

Best Mobiles in India

English summary
Oppo Reno 8 is backed by a 4,500mAh battery with support for 33W SuperVOOC charging.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X