Home
ಸುದ್ದಿಜಾಲ

ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ ಮೇಲೆ ಭಾರಿ ನಿರೀಕ್ಷೆ? ಲಾಂಚ್‌ ಯಾವಾಗ?

ಜಾಗತಿಕ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿಯ ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಭಿನ್ನ ಮಾದರಿಯ ಕ್ಯಾಮೆರಾ ಡಿಸೈನ್‌ ಹಾಗೂ ಡಿಸ್‌ಪ್ಲೇ ವಿನ್ಯಾಸಕ್ಕೆ ಒಪ್ಪೋ ಫೋನ್‌ಗಳು ಹೆಸರುವಾಸಿಯಾಗಿವೆ. ಇದಕ್ಕೆ ತಕ್ಕಂತೆ ಒಪ್ಪೋ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ತನ್ನ ಮುಂದಿನ ಫೋನ್‌ ಒಪ್ಪೋ ರೆನೋ 8T ಸರಣಿಯ ಬಿಡುಗಡೆಗೆ ತಯಾರಿ ನಡೆಸಿದೆ. ಸದ್ಯ ಲಭ್ಯ ಮಾಹಿತಿಯ ಪ್ರಕಾರ ಈ ಸ್ಮಾರ್ಟ್‌ಫೋನ್‌ ಇದೇ ಫೆಬ್ರವರಿ 8 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ ಮೇಲೆ ಭಾರಿ ನಿರೀಕ್ಷೆ? ಲಾಂಚ್‌ ಯಾವಾಗ?

ಹೌದು, ಒಪ್ಪೋ ರೆನೋ 8T ಸ್ಮಾರ್ಟ್‌ಫೋನ್‌ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ 28,999 ರೂ. ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒಪ್ಪೋ ರೆನೋ 8T ಡಿಸ್‌ಪ್ಲೇ ಹೇಗಿದೆ?
ಒಪ್ಪೋ ರೆನೋ 8T ಸ್ಮಾರ್ಟ್‌ಫೋನ್‌ 6.43 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಬಹುದು. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌, 120Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಮತ್ತು 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಡಿಸ್‌ಪ್ಲೇ 409 ppi ಪಿಕ್ಸೆಲ್ ಸಾಂದ್ರತೆಯನ್ನು ನೀಡಲಿದೆ.

ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ ಮೇಲೆ ಭಾರಿ ನಿರೀಕ್ಷೆ? ಲಾಂಚ್‌ ಯಾವಾಗ?

ಒಪ್ಪೋ ರೆನೋ 8T ಪ್ರೊಸೆಸರ್‌ ಯಾವುದು?
ಒಪ್ಪೋ ರೆನೋ 8T ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G99 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ColorOS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಒಪ್ಪೋ ರೆನೋ 8T ಕ್ಯಾಮೆರಾ ಸೆಟ್‌ಅಪ್‌ ನಿರೀಕ್ಷೆ ಏನು?
ಒಪ್ಪೋ ರೆನೋ 8T ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನಿರೀಕ್ಷಿಸಲಾಗಿದೆ.

ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ ಮೇಲೆ ಭಾರಿ ನಿರೀಕ್ಷೆ? ಲಾಂಚ್‌ ಯಾವಾಗ?

ಒಪ್ಪೋ ರೆನೋ 8T ಬ್ಯಾಟರಿ ಮತ್ತು ಇತರೆ
ಒಪ್ಪೋ ರೆನೋ 8T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇದು 22W SuperVooc ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಇನ್‌ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸೆಲೆರೊಮೀಟರ್, ಗೈರೊ, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ.

ಒಪ್ಪೋ ರೆನೋ 8T ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 8T ಸ್ಮಾರ್ಟ್‌ಫೋನ್‌ ಇದೇ ಫೆಬ್ರವರಿ 8 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ 28,999ರೂ. ಬೆಲೆಯಲ್ಲಿ ಮಾರಾಟವಾಗಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಬಣ್ಣಗಳ ಆಯ್ಕೆಗಳಲ್ಲಿ ದೊರೆಯಲಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ.

Best Mobiles in India

English summary
Reno 8T will launch on February 8th in the country, Indian customers will likely get their hands on the smartphone first.know more details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+